Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:21 - ಕನ್ನಡ ಸಮಕಾಲಿಕ ಅನುವಾದ

21 ಶೀಲೋವಿನ ಪುತ್ರಿಯರು ನಾಟ್ಯವಾಡುತ್ತಾ ಹೊರಟು ಬರುವರು. ನೀವು ಅವರನ್ನು ಕಂಡಾಗ, ದ್ರಾಕ್ಷಿ ತೋಟಗಳಿಂದ ಹೊರಟು, ಶೀಲೋವಿನ ಪುತ್ರಿಯರಲ್ಲಿ ನಿಮ್ಮಲ್ಲಿ ಅವನವನು ತನಗೆ ಹೆಂಡತಿಯಾಗಿ ಒಬ್ಬೊಬ್ಬಳನ್ನು ಹಿಡಿದುಕೊಂಡು, ಬೆನ್ಯಾಮೀನನ ದೇಶಕ್ಕೆ ಹೋಗಿರಿ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಶೀಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ, ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶೀಲೋವಿನ ಕನ್ಯೆಯರಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಸೀಮೆಗೆ ಓಡಿಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಶಿಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶಿಲೋವಿನ ಕನ್ನಿಕೆಗಳಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಪ್ರಾಂತ್ಯಕ್ಕೆ ಓಡಿಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಶೀಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶೀಲೋವಿನ ಕನ್ನಿಕೆಗಳಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಸೀಮೆಗೆ ಓಡಿ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಉತ್ಸವಕಾಲದಲ್ಲಿ ಶೀಲೋವಿನ ಯುವತಿಯರು ನಾಟ್ಯಕ್ಕೆ ಬರುವ ಸಮಯವನ್ನು ನಿರೀಕ್ಷಿಸುತ್ತಿರಿ. ಅವರು ಬಂದ ತಕ್ಷಣ ನೀವು ಅಡಗಿಕೊಂಡಿದ್ದ ಸ್ಥಳದಿಂದ ಹೊರಗೆ ಬನ್ನಿ; ನಿಮ್ಮಲ್ಲಿ ಪ್ರತಿಯೊಬ್ಬನು ಒಬ್ಬೊಬ್ಬ ಶೀಲೋವಿನ ಯುವತಿಯನ್ನು ತೆಗೆದುಕೊಳ್ಳಿರಿ. ಆ ಯುವತಿಯರನ್ನು ಬೆನ್ಯಾಮೀನ್ಯರ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮದುವೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:21
13 ತಿಳಿವುಗಳ ಹೋಲಿಕೆ  

ಯೆಫ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಹಿಂದಿರುಗಿ ಬರುವಾಗ, ಅವನ ಮಗಳು ದಮ್ಮಡಿಗಳಿಂದಲೂ, ನಾಟ್ಯದಿಂದಲೂ ಅವನನ್ನು ಎದುರುಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು. ಅವಳ ಹೊರತಾಗಿ ಅವನಿಗೆ ಮಗನಾಗಲಿ, ಮಗಳಾಗಲಿ ಇರಲಿಲ್ಲ.


ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯನ್ನು ಹಿಂಬಾಲಿಸಿ ಹೊರಹೊರಟರು.


ಆದರೆ ನಾನು ಮೊದಲು ಅನೇಕ ಕಷ್ಟಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕಾರ ಹೊಂದುವುದು ಅಗತ್ಯವಾಗಿದೆ.


ಆದರೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.


ಆಗ ಕನ್ನಿಕೆಯರೂ, ಪ್ರಾಯದವರೂ, ವೃದ್ಧರ ಸಹಿತವಾಗಿ ನಾಟ್ಯವಾಡುತ್ತಾ ಹರ್ಷಿಸುವರು. ಏಕೆಂದರೆ ನಾನು ಅವರ ದುಃಖವನ್ನು ಆನಂದಕ್ಕೆ ಬದಲಾಯಿಸುವೆನು. ನಾನು ಅವರನ್ನು ಆಧರಿಸಿ, ಅವರ ದುಃಖದಿಂದ ಬಿಡಿಸಿ, ಅವರಿಗೆ ಸಂತೋಷವನ್ನುಂಟು ಮಾಡುವೆನು.


ಅಳುವುದಕ್ಕೆ ಒಂದು ಸಮಯ, ನಗುವುದಕ್ಕೆ ಒಂದು ಸಮಯ. ಗೋಳಾಡುವುದಕ್ಕೆ ಒಂದು ಸಮಯ, ಕುಣಿದಾಡುವುದಕ್ಕೆ ಒಂದು ಸಮಯ.


ದಮ್ಮಡಿಯಿಂದಲೂ, ನಾಟ್ಯದಿಂದಲೂ ದೇವರನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಅವರನ್ನು ಸ್ತುತಿಸಿರಿ.


ದೇವರ ಹೆಸರನ್ನು ನರ್ತಿಸುತ್ತಾ ಸ್ತುತಿಸಲಿ; ದಮ್ಮಡಿಯಿಂದಲೂ ಕಿನ್ನರಿಯಿಂದಲೂ ದೇವರನ್ನು ಕೀರ್ತಿಸಲಿ.


ಆದರೆ ದಾವೀದನು ಮೀಕಲಳಿಗೆ, “ನಾನು ಕುಣಿದದ್ದು ಯೆಹೋವ ದೇವರ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಆ ಯೆಹೋವ ದೇವರ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.


ಇದಲ್ಲದೆ ದಾವೀದನು ನಾರಿನ ಏಫೋದನ್ನು ಧರಿಸಿಕೊಂಡು, ತನ್ನ ಪೂರ್ಣಬಲದಿಂದ ಯೆಹೋವ ದೇವರ ಮುಂದೆ ಕುಣಿದಾಡಿದನು.


ದಾವೀದನು ಫಿಲಿಷ್ಟಿಯರನ್ನು ಹೊಡೆದು ಜನರಸಹಿತವಾಗಿ ಬರುವಾಗ, ಇಸ್ರಾಯೇಲರ ಸಮಸ್ತ ಪಟ್ಟಣಗಳಿಂದ ಸ್ತ್ರೀಯರು ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಸಂತೋಷದಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು.


ಅವರು ಬೆನ್ಯಾಮೀನ್ಯರಿಗೆ, “ನೀವು ಹೋಗಿ ದ್ರಾಕ್ಷಿತೋಟಗಳಲ್ಲಿ ಅಡಗಿಕೊಳ್ಳಿರಿ.


ತಿರುಗಿ ಬಾ, ತಿರುಗಿ ಬಾ, ಶೂಲಮ್ ಊರಿನವಳೇ, ನಾವು ನಿನ್ನನ್ನು ನೋಡುವಂತೆ ತಿರುಗಿ ಬಾ, ತಿರುಗಿ ಬಾ! ಎರಡು ಗುಂಪಿನ ನರ್ತಕಿಯರ ನಡುವೆ ಕುಣಿಯುತ್ತಿರುವ, ಶೂಲಮ್ ಊರಿನವಳನ್ನು ನೀವು ನೋಡುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು