Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:22 - ಕನ್ನಡ ಸಮಕಾಲಿಕ ಅನುವಾದ

22 ಅವರ ತಂದೆಗಳಾದರೂ, ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯವಾಡುವುದಕ್ಕೆ ಬಂದರೆ, ನಾವು ಅವರಿಗೆ, “ಯುದ್ಧದಲ್ಲಿ ನಾವು ಅವನವನಿಗೆ ಹೆಂಡತಿಯನ್ನು ದೊರಕಿಸಿದ ಕಾರಣ, ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಏಕೆಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರ ತಂದೆಗಳೂ, ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರ ತಂದೆಗಳೂ ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರುತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿ; ಯುದ್ಧ ನಿಮಿತ್ತ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರ ತಂದೆಗಳೂ ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ - ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದದರಿಂದ ನೀವು ನಿರಪರಾಧಿಗಳು ಎಂದು ಹೇಳಿ ಸಮಾಧಾನಪಡಿಸುವೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ಯುವತಿಯರ ತಂದೆಗಳಾಗಲಿ ಸಹೋದರರಾಗಲಿ ನಮ್ಮಲ್ಲಿಗೆ ಬಂದು ದೂರು ಹೇಳುತ್ತಾರೆ. ಆಗ ನಾವು ಅವರಿಗೆ, ‘ಬೆನ್ಯಾಮೀನ್ಯರ ಗಂಡಸರಿಗೆ ದಯೆತೋರಿಸಿರಿ; ಅವರು ಆ ಸ್ತ್ರೀಯರನ್ನು ಮದುವೆಯಾಗಲಿ. ಅವರು ನಿಮ್ಮಿಂದ ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ಹೋಗಿರುವರೇ ಹೊರತು ಯುದ್ಧವೇನೂ ಮಾಡಿಲ್ಲ. ಅವರು ಕನ್ಯೆಯರನ್ನು ತೆಗೆದುಕೊಂಡು ಹೋದದ್ದರಿಂದ ನೀವು ದೇವರೆದುರಿಗೆ ಮಾಡಿದ ಪ್ರತಿಜ್ಞೆಯನ್ನು ಮುರಿದಂತಾಗುವುದಿಲ್ಲ. ನಿಮ್ಮ ಕನ್ಯೆಯರನ್ನು ಅವರಿಗೆ ಕೊಡುವುದಿಲ್ಲವೆಂದು ನೀವು ಪ್ರತಿಜ್ಞೆ ಮಾಡಿದ್ದೀರಿ. ನೀವು ಬೆನ್ಯಾಮೀನ್ಯರಿಗೆ ನಿಮ್ಮ ಕನ್ಯೆಯರನ್ನು ಕೊಟ್ಟಿಲ್ಲ. ಆದರೆ ಅವರು ನಿಮ್ಮ ಕನ್ಯೆಯರನ್ನು ತೆಗೆದುಕೊಂಡು ಹೋದರು. ಆದ್ದರಿಂದ ನೀವು ನಿಮ್ಮ ಪ್ರತಿಜ್ಞೆಯನ್ನು ಮುರಿಯಲಿಲ್ಲ’ ಎಂದು ಹೇಳುತ್ತೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:22
10 ತಿಳಿವುಗಳ ಹೋಲಿಕೆ  

‘ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣು ಕೊಡುವ ಇಸ್ರಾಯೇಲ್ಯರು ಶಾಪಗ್ರಸ್ತರಾಗಲಿ,’ ಎಂದು ಆಣೆ ಇಟ್ಟುಕೊಂಡಿದ್ದರಿಂದ, ನಾವಾದರೋ ನಮ್ಮ ಪುತ್ರಿಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು,” ಎಂದರು.


ಇಸ್ರಾಯೇಲರು ತಮ್ಮಲ್ಲಿ, “ಯಾವನೂ ತನ್ನ ಮಗಳನ್ನು ಬೆನ್ಯಾಮೀನ್ಯರಿಗೆ ಮದುವೆಮಾಡಿ ಕೊಡುವುದಿಲ್ಲ,” ಎಂದು ಮಿಚ್ಪೆಯಲ್ಲಿ ಆಣೆಯಿಟ್ಟಿದ್ದರು.


ಆದರೆ ಲೈಂಗಿಕ ಅನೈತಿಕತೆ ಹೆಚ್ಚಾಗಿರುವುದರಿಂದ, ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿ ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನಿರಲಿ.


ದುಡುಕಿ ಪ್ರತಿಷ್ಠೆಗಾಗಿ ದೇವರಿಗೆ ಹರಕೆ ಮಾಡಿಕೊಂಡು ಆಮೇಲೆ ವಿಚಾರಿಸುವುದು ಉರುಲಾಗಿದೆ.


ಆ ಕಾಲದಲ್ಲಿ ಬೆನ್ಯಾಮೀನ್ಯರು ತಿರುಗಿ ಅವರ ಬಳಿಗೆ ಬಂದರು. ಅವರು ಯಾಬೇಷ್ ಗಿಲ್ಯಾದಿನ ಸ್ತ್ರೀಯರಲ್ಲಿ ಜೀವದಿಂದ ಉಳಿಸಿದ ಕನ್ನಿಕೆಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಆದರೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ.


ನಾವು ನಮ್ಮ ಪುತ್ರಿಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವುದಿಲ್ಲ, ಎಂದು ನಾವು ಯೆಹೋವ ದೇವರ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ?


ಅದೇ ದಿನದಲ್ಲಿ ನೋಹನು ಮತ್ತು ಅವನ ಪುತ್ರರಾದ ಶೇಮ್, ಹಾಮ್, ಯೆಫೆತ್ ಇವರೂ ನೋಹನ ಹೆಂಡತಿಯೂ ಅವನ ಪುತ್ರರ ಹೆಂಡತಿಯರೂ ನಾವೆಯನ್ನು ಪ್ರವೇಶಿಸಿದರು.


ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು. ದೇವರ ಸ್ವರೂಪದಲ್ಲಿಯೇ ಅವರನ್ನು ಸೃಷ್ಟಿ ಮಾಡಿದರು. ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು