ನ್ಯಾಯಸ್ಥಾಪಕರು 21:23 - ಕನ್ನಡ ಸಮಕಾಲಿಕ ಅನುವಾದ23 ಆಗ ಬೆನ್ಯಾಮೀನ್ಯರು ಅದೇ ಪ್ರಕಾರಮಾಡಿ, ನಾಟ್ಯವಾಡುವ ಹೆಣ್ಣುಗಳಲ್ಲಿ ತಮ್ಮ ಲೆಕ್ಕಕ್ಕೆ ಸರಿಯಾಗಿ ಹಿಡಿದುಕೊಂಡವರನ್ನು ಅವನವನು ತನಗೆ ಹೆಂಡತಿಯಾಗಿ ತೆಗೆದುಕೊಂಡು, ತಮ್ಮ ಬಾಧ್ಯತೆಗೆ ತಿರುಗಿಕೊಂಡು ಹೋಗಿ, ಪಟ್ಟಣಗಳನ್ನು ಕಟ್ಟಿ, ಅವುಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದರಂತೆಯೇ ಬೆನ್ಯಾಮೀನ್ಯರು ನೃತ್ಯಮಾಡುತ್ತ ಹೊರಗೆ ಬಂದಿದ್ದ ಕನ್ಯೆಯರಲ್ಲಿ ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ಹೆಂಡತಿಯರನ್ನಾಗಿ ಹಿಡಿದುಕೊಂಡು ತಮ್ಮ ಸ್ವಾಧೀನವಾದ ಭೂಮಿಗೆ ಹೋಗಿ ಅಲ್ಲಿ ಪಟ್ಟಣಗಳನ್ನು ಕಟ್ಟಿ ವಾಸಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದರಂತೆಯೇ ಬೆನ್ಯಾಮೀನ್ಯರು ನಾಟ್ಯವಾಡುವುದಕ್ಕಾಗಿ ಹೊರಗೆ ಬಂದಿದ್ದ ಕನ್ಯೆಯರಲ್ಲಿ ತಮ್ಮ ಸಂಖ್ಯೆಗೆ ಸರಿದೂಗುವಷ್ಟು ಮಂದಿಯನ್ನು ಹೆಂಡತಿಯರನ್ನಾಗಿ ಹಿಡಿದುಕೊಂಡು ತಮ್ಮ ಸ್ವಾಸ್ತ್ಯಭೂಮಿಗೆ ಹೋಗಿ ಅಲ್ಲಿ ಪಟ್ಟಣಗಳನ್ನು ಕಟ್ಟಿ ವಾಸಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅದರಂತೆಯೇ ಬೆನ್ಯಾಮೀನ್ಯರು ನಾಟ್ಯವಾಡುವದಕ್ಕೋಸ್ಕರ ಹೊರಗೆ ಬಂದಿದ್ದ ಕನ್ಯೆಯರಲ್ಲಿ ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ಹೆಂಡತಿಯರನ್ನಾಗಿ ಹಿಡಿದುಕೊಂಡು ತಮ್ಮ ಸ್ವಾಸ್ತ್ಯಭೂವಿುಗೆ ಹೋಗಿ ಅಲ್ಲಿ ಪಟ್ಟಣಗಳನ್ನು ಕಟ್ಟಿ ವಾಸಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅದರಂತೆಯೇ ಬೆನ್ಯಾಮೀನ್ ಕುಲದ ಗಂಡಸರು, ನಾಟ್ಯವಾಡಲು ಬಂದಿದ್ದ ಯುವತಿಯರಲ್ಲಿ, ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ತಮ್ಮ ಹೆಂಡತಿಯರನ್ನಾಗಿ ತೆಗೆದುಕೊಂಡು ತಮ್ಮ ಪ್ರದೇಶಕ್ಕೆ ಹಿಂತಿರುಗಿ ಹೋದರು. ಆ ಪ್ರದೇಶದಲ್ಲಿ ಬೆನ್ಯಾಮೀನ್ಯರು ಪುನಃ ನಗರಗಳನ್ನು ಕಟ್ಟಿ ವಾಸಮಾಡಿದರು. ಅಧ್ಯಾಯವನ್ನು ನೋಡಿ |