Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:5 - ಕನ್ನಡ ಸಮಕಾಲಿಕ ಅನುವಾದ

5 ಅನಂತರ ಅವರು, “ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಬಾರದವರು ಯಾರು?” ಎಂದರು. ಏಕೆಂದರೆ ಯೆಹೋವ ದೇವರ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆ ಇಟ್ಟುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮತ್ತು ಯೆಹೋವನ ಮುಂದೆ ಸಭೆ ಸೇರಿದಾಗ, ಬಾರದೆ ಇದ್ದಂಥ ಇಸ್ರಾಯೇಲರು ಯಾರಾರೆಂದು ವಿಚಾರಮಾಡಿದರು. ಯಾಕೆಂದರೆ ಮಿಚ್ಪೆಯಲ್ಲಿ, “ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದು ಹಾಕುವೆವು” ಎಂದು ಆಣೆಯಿಟ್ಟು ಪ್ರಮಾಣಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮತ್ತು ಸರ್ವೇಶ್ವರನ ಮುಂದೆ ಸಭೆ ನೆರೆದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರಯೇಲರು ಯಾರಾರೆಂದು ವಿಚಾರಮಾಡಿದರು. ಏಕೆಂದರೆ ಮಿಚ್ಫೆಯಲ್ಲಿ, “ಸರ್ವೇಶ್ವರನ ಸನ್ನಿಧಿಗೆ ಬಾರದವರನ್ನು ಕೊಂದುಹಾಕುವೆವೆಂದು ಆಣೆಯಿಟ್ಟು ಅವರು ದೃಢಪ್ರಮಾಣ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮತ್ತು ಯೆಹೋವನ ಮುಂದೆ ಸಭೆ ನೆರೆದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರಾಯೇಲ್ಯರು ಯಾರಾರೆಂದು ವಿಚಾರಮಾಡಿದರು. ಯಾಕಂದರೆ ವಿುಚ್ಪೆಯಲ್ಲಿ - ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದೇಹಾಕುವೆವೆಂದು ಆಣೆಯಿಟ್ಟು ಖಂಡಿತ ಪ್ರಮಾಣಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಮೇಲೆ ಇಸ್ರೇಲರು, “ಯೆಹೋವನ ಮುಂದೆ ಸಭೆ ಸೇರಿದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರೇಲರು ಯಾರಾದರೂ ಇದ್ದಾರೆಯೇ” ಎಂದು ವಿಚಾರಮಾಡಿದರು. ಮಿಚ್ಛೆ ನಗರದಲ್ಲಿ ಬೇರೆ ಕುಲಗಳ ಜೊತೆಗೆ ಯಾರು ಸೇರುವುದಿಲ್ಲವೋ ಅವರನ್ನು ಕೊಲೆ ಮಾಡುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು. ಅದಕ್ಕಾಗಿ ಅವರು ಅದರ ಬಗ್ಗೆ ವಿಚಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:5
8 ತಿಳಿವುಗಳ ಹೋಲಿಕೆ  

ಯೆಹೋವ ದೇವರ ದೂತನು ಹೀಗೆ ಹೇಳುತ್ತಾನೆ, ‘ನೀವು ಮೆರೋಜನ್ನು ಶಪಿಸಿರಿ. ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ, ಏಕೆಂದರೆ ಅವರು ಯೆಹೋವ ದೇವರ ಸಹಾಯಕ್ಕೂ, ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಯೆಹೋವ ದೇವರ ಸಹಾಯಕ್ಕೂ ಬಾರದೆ ಹೋದರು.’


“ಯೆಹೋವ ದೇವರು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ರಕ್ತದಿಂದ ತನ್ನ ಖಡ್ಗವನ್ನು ಹಿಂದೆಗೆಯುವವನಿಗೆ ಶಾಪವಾಗಲಿ.


ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ, ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿ, “ಯಾರು ಸೌಲ ಮತ್ತು ಸಮುಯೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳಿಗೆ ಈ ಪ್ರಕಾರ ಮಾಡಲಾಗುವುದು,” ಎಂದು ಹೇಳಿದನು. ಯೆಹೋವ ದೇವರಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ, ಅವರು ಒಬ್ಬ ಮನುಷ್ಯನಂತೆ ಹೊರಟು ಬಂದರು.


‘ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣು ಕೊಡುವ ಇಸ್ರಾಯೇಲ್ಯರು ಶಾಪಗ್ರಸ್ತರಾಗಲಿ,’ ಎಂದು ಆಣೆ ಇಟ್ಟುಕೊಂಡಿದ್ದರಿಂದ, ನಾವಾದರೋ ನಮ್ಮ ಪುತ್ರಿಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು,” ಎಂದರು.


ಇಸ್ರಾಯೇಲರು ತಮ್ಮಲ್ಲಿ, “ಯಾವನೂ ತನ್ನ ಮಗಳನ್ನು ಬೆನ್ಯಾಮೀನ್ಯರಿಗೆ ಮದುವೆಮಾಡಿ ಕೊಡುವುದಿಲ್ಲ,” ಎಂದು ಮಿಚ್ಪೆಯಲ್ಲಿ ಆಣೆಯಿಟ್ಟಿದ್ದರು.


ಆಗ ಇಸ್ರಾಯೇಲರು ತಮ್ಮ ಸಹೋದರರಾದ ಬೆನ್ಯಾಮೀನನ ವಿಷಯವಾಗಿ ಪಶ್ಚಾತ್ತಾಪಪಟ್ಟು, “ಈ ಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಕಡಿದು ಹೋಯಿತು.


ಇಸ್ರಾಯೇಲರು ಆ ದಿವಸ ಬಹಳ ಬಳಲಿ ಹೋದರು. ಏಕೆಂದರೆ ಸೌಲನು, “ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾಲದವರೆಗೆ ಯಾವನು ಆಹಾರ ತಿನ್ನುತ್ತಾನೋ, ಅವನು ಶಾಪಗ್ರಸ್ತನಾಗಲಿ,” ಎಂದು ಆಣೆ ಇಟ್ಟದ್ದರಿಂದ, ಜನರೆಲ್ಲರು ಆಹಾರದ ರುಚಿ ನೋಡದೆ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು