Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಇಸ್ರಾಯೇಲರು ತಮ್ಮ ಸಹೋದರರಾದ ಬೆನ್ಯಾಮೀನನ ವಿಷಯವಾಗಿ ಪಶ್ಚಾತ್ತಾಪಪಟ್ಟು, “ಈ ಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಕಡಿದು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸ್ರಾಯೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ಕಂಡು ದುಃಖದಿಂದ, “ಅಯ್ಯೋ, ಇಸ್ರಾಯೇಲರಾದ ನಮ್ಮಲ್ಲಿ ಒಂದು ಕುಲವು ಕಡಿಮೆಯಾಯಿತಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಸ್ರಯೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ನೆನೆಸಿ ದುಃಖದಿಂದ, “ಅಯ್ಯೋ, ಇಸ್ರಯೇಲರಾದ ನಮ್ಮಲ್ಲಿ ಒಂದು ಕುಲ ಕಡಿಮೆಯಾಯಿತಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಸ್ರಾಯೇಲ್ಯರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ನೆನಸಿ ದುಃಖದಿಂದ - ಅಯ್ಯೋ, ಇಸ್ರಾಯೇಲ್ಯರಾದ ನಮ್ಮಲ್ಲಿ ಒಂದು ಕುಲವು ಕಡಮೆಯಾಯಿತಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಇಸ್ರೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಬಗ್ಗೆ ವ್ಯಥೆಪಟ್ಟರು. ಅವರು, “ಇಂದು ಇಸ್ರೇಲರಿಂದ ಒಂದು ಕುಲವು ಇಲ್ಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:6
8 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಇಸ್ರಾಯೇಲ್ ಗೋತ್ರಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನರಿಗಾಗಿ ಪಶ್ಚಾತ್ತಾಪ ಪಟ್ಟರು.


“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


ಆಗ ಅಬ್ನೇರನು ಯೋವಾಬನಿಗೆ, “ಖಡ್ಗವು ಯಾವಾಗಲೂ ನುಂಗಿ ಬಿಡುವುದೋ? ಅಂತ್ಯದಲ್ಲಿ ಅದು ಕಹಿತನಕ್ಕೆ ನಡೆಸುವುದೆಂದು ನಿನಗೆ ಗೊತ್ತಾಗಲಿಲ್ಲವೋ? ತಮ್ಮ ಸಹೋದರರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಕ್ಕೆ ತಿರುಗುವಂತೆ ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದು ಕೂಗಿ ಹೇಳಿದನು.


ಇಸ್ರಾಯೇಲರು ಯೆಹೋವ ದೇವರ ಬಳಿಗೆ ಹೋಗಿ, ಅವರ ಮುಂದೆ ಸಂಜೆಯವರೆಗೆ ಅತ್ತು, “ನಮ್ಮ ಸಹೋದರರಾದ ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕೋ?” ಎಂದು ಯೆಹೋವ ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಅವರ ಮೇಲೆ ಹೋಗಿರಿ,” ಎಂದರು. ಎರಡನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರ ಬಳಿಗೆ ಬಂದರು.


ಅವನು ಅವಳನ್ನು ನೋಡಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದೆ. ನನ್ನನ್ನು ತೊಂದರೆ ಪಡಿಸುವವರಲ್ಲಿ ನೀನೂ ಒಬ್ಬಳಾದೆ. ಏಕೆಂದರೆ ನಾನು ಯೆಹೋವ ದೇವರಿಗೆ ನನ್ನ ಬಾಯಿತೆರೆದು, ಪ್ರಮಾಣಮಾಡಿದೆನು, ಹಿಂದೆಗೆಯಲಾರೆನು,” ಎಂದನು.


ಅನಂತರ ಅವರು, “ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಬಾರದವರು ಯಾರು?” ಎಂದರು. ಏಕೆಂದರೆ ಯೆಹೋವ ದೇವರ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆ ಇಟ್ಟುಕೊಂಡಿದ್ದರು.


ನಾವು ನಮ್ಮ ಪುತ್ರಿಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವುದಿಲ್ಲ, ಎಂದು ನಾವು ಯೆಹೋವ ದೇವರ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು