Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:27 - ಕನ್ನಡ ಸಮಕಾಲಿಕ ಅನುವಾದ

27 ಅವನು ಅಲ್ಲಿ ಬಂದಾಗ, ಎಫ್ರಾಯೀಮನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲರು ಅವನ ಸಂಗಡ ಬೆಟ್ಟದಿಂದ ಇಳಿದರು. ಅವನು ಇವರ ಮುಂದೆ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸೆಯೀರಾ ಎಂಬಲ್ಲಿಗೆ ಬಂದು ಎಫ್ರಯಿಮ್ ಪರ್ವತಪ್ರದೇಶದಲ್ಲಿ ಕಹಳೆಯನ್ನು ಊದಿದನು. ಕೂಡಲೆ ಇಸ್ರಯೇಲರು ಅವನ ಬಳಿಗೆ ಬಂದು, ಗುಡ್ಡದಿಂದ ಇಳಿದು ಅವನ ಸಂಗಡ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲ್ಯರು ಅವನ ಬಳಿಗೆ ಬಂದು ಗಟ್ಟಾ ಇಳಿದು ಅವನ ಸಂಗಡ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಸೆಯೀರಾ ಎಂಬ ಸ್ಥಳಕ್ಕೆ ಬಂದನು. ಅಲ್ಲಿ ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅವನು ತುತ್ತೂರಿಯನ್ನು ಊದಿದನು. ಇಸ್ರೇಲರು ತುತ್ತೂರಿಯ ಧ್ವನಿಯನ್ನು ಕೇಳಿ ಬೆಟ್ಟದಿಂದ ಇಳಿದು ಏಹೂದನನ್ನು ಹಿಂಬಾಲಿಸಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:27
13 ತಿಳಿವುಗಳ ಹೋಲಿಕೆ  

ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ತಿಳಿದುಬಂತು. ಆದ್ದರಿಂದ ಸೌಲನು ದೇಶದಲ್ಲೆಲ್ಲಾ ಹಿಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.


ಆದರೆ ಯೆಹೋವ ದೇವರ ಆತ್ಮರು ಗಿದ್ಯೋನನ ಮೇಲೆ ಬಂದರು. ಅವನು ತುತೂರಿಯನ್ನು ಊದಿದಾಗ, ಅಬೀಯೆಜೆರಿನವರು ಅವನ ಹಿಂದೆ ಕೂಡಿಬಂದರು.


ಆಗ ಅವರು ತ್ವರೆಪಟ್ಟು ಪ್ರತಿಯೊಬ್ಬರು ತಮ್ಮ ಹೊರ ಉಡುಪುಗಳನ್ನು ತೆಗೆದು, ಮೆಟ್ಟಿಲುಗಳ ಮೇಲೆ ಹಾಸಿ, ಇವನನ್ನು ಕುಳ್ಳಿರಿಸಿ, ತುತೂರಿಗಳನ್ನು ಊದಿ, “ಯೇಹುವು ಅರಸನಾಗಿದ್ದಾನೆ,” ಎಂದು ಆರ್ಭಟಿಸಿದರು.


ಆ ಸ್ತ್ರೀಯು ತನ್ನ ಜ್ಞಾನದಿಂದ ಸಮಸ್ತ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರಿಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ, ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನೂ ತಮ್ಮ ತಮ್ಮ ಮನೆಗಳಿಗೆ ಹೋದರು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂದಿರುಗಿ ಬಂದನು.


ಇಸ್ರಾಯೇಲಿನಲ್ಲಿ ಆ ದಿವಸಗಳಲ್ಲಿ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟದ ಒಂದು ಮೂಲೆಯಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಅವನು ಯೆಹೂದದ ಬೇತ್ಲೆಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು.


ಎಫ್ರಾಯೀಮ್ ಬೆಟ್ಟದ ಪ್ರಾಂತದಲ್ಲಿ ಮೀಕ ಎಂಬ ಹೆಸರುಳ್ಳ ಒಬ್ಬ ಮನುಷ್ಯನು ಇದ್ದನು.


ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಬೆಟ್ಟದಲ್ಲೆಲ್ಲಾ ದೂತರನ್ನು ಕಳುಹಿಸಿ, “ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ, ಬೇತ್‌ಬಾರದವರೆಗಿರುವ ನೀರನ್ನೂ, ಯೊರ್ದನನ್ನೂ ಅವರಿಗೆ ಮುಂದಾಗಿ ಹಿಡಿಯಿರಿ,” ಎಂದು ಹೇಳಿದನು. ಹಾಗೆಯೇ ಎಫ್ರಾಯೀಮನ ಜನರೆಲ್ಲರೂ ಕೂಡಿಕೊಂಡು, ಬೇತ್‌ಬಾರದವರೆಗೆ ನೀರನ್ನೂ, ಯೊರ್ದನನ್ನೂ ಹಿಡಿದರು.


ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯೀಮಿನಿಂದ ಉಂಟಾಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾಮೀನನು ಮಾಕೀರನಲ್ಲಿಂದ ಅಧಿಪತಿಗಳೂ, ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವವರೂ ಬಂದರು.


ಏಕೆಂದರೆ ಅದು ಅಡವಿಯಾಗಿದೆ. ಅದನ್ನು ನೀವು ಕಡಿಯಬೇಕು. ಅದರ ಅಂತ್ಯಗಳವರೆಗೂ ನಿಮ್ಮದಾಗಿರುವುದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿಬಿಡಲು ನಿಮಗೆ ಸಾಧ್ಯ,” ಎಂದನು.


ಅದಕ್ಕೆ ಯೆಹೋಶುವನು ಉತ್ತರವಾಗಿ ಅವರಿಗೆ, “ನೀವು ಹೆಚ್ಚು ಜನರಾಗಿದ್ದರೆ ಮತ್ತು ನಿಮಗೆ ಎಫ್ರಾಯೀಮ್ ಪರ್ವತವು ಸಾಲದಿದ್ದರೆ, ನೀವು ಪೆರಿಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡನ್ನು ಕಡಿದು ನಿಮಗೆ ಸ್ಥಳಮಾಡಿಕೊಳ್ಳಿರಿ,” ಎಂದನು.


ಅವರು ಆಲಸ್ಯ ಮಾಡುತ್ತಿರುವಾಗ, ಏಹೂದನು ತಪ್ಪಿಸಿಕೊಂಡು ವಿಗ್ರಹಗಳನ್ನು ದಾಟಿ, ಸೇಯೀರಾತನ್ನು ಸೇರಿ ತಪ್ಪಿಸಿಕೊಂಡನು.


ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲರನ್ನು ರಕ್ಷಿಸುವುದಕ್ಕೆ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸಮಾಡಿದನು.


ನಾನು ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು ಶ್ರೇಷ್ಠರಿಗೂ, ಅಧಿಕಾರಸ್ಥರಿಗೂ, ಇತರ ಜನರಿಗೂ ಸಂಬೋಧಿಸಿ, “ನೀವು ಅವರಿಗೋಸ್ಕರ ಭಯಪಡಬೇಡಿರಿ. ದೊಡ್ಡವನಾಗಿಯೂ, ಭಯಂಕರನಾಗಿಯೂ ಇರುವ ಯೆಹೋವ ದೇವರನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಪುತ್ರರಿಗೋಸ್ಕರ, ಪುತ್ರಿಯರಿಗೋಸ್ಕರ, ನಿಮ್ಮ ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ,” ಎಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು