Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:31 - ಕನ್ನಡ ಸಮಕಾಲಿಕ ಅನುವಾದ

31 ಏಹೂದನ ತರುವಾಯ ಅನಾತನ ಮಗ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರುನೂರು ಜನರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲರನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ತಿವಿಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಾಯೇಲರನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಏಹೂದನ ಬಳಿಕ ಅನಾತನ ಮಗ ಶಮ್ಗರನು ಮುಂದೆಬಂದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಯೇಲರನ್ನು ಕಾಪಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಹತಮಾಡಿ ಇಸ್ರಾಯೇಲ್ಯರನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಏಹೂದನು ಇಸ್ರೇಲರನ್ನು ರಕ್ಷಿಸಿದ ತರುವಾಯ, ಇನ್ನೊಬ್ಬ ವ್ಯಕ್ತಿಯು ಇಸ್ರೇಲರನ್ನು ರಕ್ಷಿಸಿದನು. ಅವನು ಅನಾತನ ಮಗನಾದ ಶಮ್ಗರ. ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:31
17 ತಿಳಿವುಗಳ ಹೋಲಿಕೆ  

“ಅನಾತನ ಮಗ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿವಸಗಳಲ್ಲಿಯೂ ಹೆದ್ದಾರಿಯ ಸಂಚಾರ ನಿಂತುಹೋಯಿತು. ಪ್ರಯಾಣಿಕರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.


ದೀಕ್ಷಾಸ್ನಾನ ಕೊಡುವುದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಕಳುಹಿಸದೆ ಸುವಾರ್ತೆಯನ್ನು ಸಾರುವುದಕ್ಕಾಗಿ ನನ್ನನ್ನು ಕಳುಹಿಸಿದ್ದಾರೆ. ಸುವಾರ್ತೆ ಸಾರುವಂಥದ್ದು ವಾಕ್ಚಾತುರ್ಯದಿಂದಲ್ಲ. ಹಾಗೆ ಸಾರುತ್ತಿದ್ದರೆ ಕ್ರಿಸ್ತ ಯೇಸುವಿನ ಶಿಲುಬೆಯ ಶಕ್ತಿಯು ಬರಿದಾಗಿಬಿಡುತಿತ್ತು.


ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು, ಅವನನ್ನು ಕೊಂದುಹಾಕಿದನು.


ಯೆಹೋವ ದೇವರು ಖಡ್ಗದಿಂದಲೂ, ಈಟಿಯಿಂದಲೂ ರಕ್ಷಿಸುವುದಿಲ್ಲ ಎಂಬುದು ಈ ಸಮೂಹವೆಲ್ಲಾ ತಿಳಿದುಕೊಳ್ಳುವುದು. ಏಕೆಂದರೆ ಯುದ್ಧವು ಯೆಹೋವ ದೇವರದ್ದು, ಅವರು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.


ಅವನು ಒಂದು ಕತ್ತೆಯ ದವಡೆಯ ಹೊಸ ಎಲುಬನ್ನು ಕಂಡುಕೊಂಡು, ತನ್ನ ಕೈಯನ್ನು ಚಾಚಿ ತೆಗೆದುಕೊಂಡು, ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.


ಅವರು ಹೊಸ ದೇವರುಗಳನ್ನು ಆಯ್ದುಕೊಂಡರು. ಆಗ ಯುದ್ಧವು ಬಾಗಿಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಲವತ್ತು ಸಾವಿರ ಸೈನಿಕರಲ್ಲಿ ಗುರಾಣಿಯೂ, ಕಠಾರಿಯೂ ಇರಲಿಲ್ಲ.


ಆದರೂ ಯೆಹೋವ ದೇವರು ಅವರನ್ನು ಕೊಳ್ಳೆಹೊಡೆಯುವವರ ಕೈಯಿಂದ ಬಿಡಿಸುವದಕ್ಕೋಸ್ಕರ ನ್ಯಾಯಾಧಿಪತಿಗಳನ್ನು ಎಬ್ಬಿಸಿದರು.


ಸಮುಯೇಲನ ವಾಕ್ಯವು ಇಸ್ರಾಯೇಲದಲ್ಲಿ ಹರಡಿತು. ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು, ಎಬೆನೆಜೆರಿನ ಸಮೀಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.


ಅಮ್ಮೋನಿಯರು ಏಕವಾಗಿ ಕೂಡಿಕೊಂಡು, ಗಿಲ್ಯಾದಿನಲ್ಲಿ ಪಾಳೆಯಮಾಡಿಕೊಂಡರು. ಆದರೆ ಇಸ್ರಾಯೇಲರು ಏಕವಾಗಿ ಕೂಡಿ, ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.


ಅವರು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ಯೆಹೋವ ದೇವರು ಇಸ್ರಾಯೇಲ್ಯರ ಮೇಲೆ ಕೋಪವುಳ್ಳವರಾಗಿ ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಮಾರಿಬಿಟ್ಟರು.


ಏಹೂದನು ಮರಣಹೊಂದಿದನಂತರ ಇಸ್ರಾಯೇಲರು ತಿರುಗಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು.


ಹೀಗೆ ಆ ದಿವಸದಲ್ಲಿ ಮೋವಾಬ್ ಇಸ್ರಾಯೇಲರ ಆಳಿಕೆಗೆ ಅಧೀನವಾಗಿತ್ತು. ದೇಶವು ಎಂಬತ್ತು ವರ್ಷ ವಿಶ್ರಾಂತಿಗೊಂಡಿತು.


“ಆದರೆ ಅವರು ತಮ್ಮ ದೇವರಾದ ಯೆಹೋವ ದೇವರನ್ನು ಮರೆತು ಹೋದಾಗ, ದೇವರು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟರು.


ಯೆಹೋವ ದೇವರು ಇಸ್ರಾಯೇಲರಿಗೆ, “ನಾನು ನಿಮ್ಮನ್ನು ಈಜಿಪ್ಟ್, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು