Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:4 - ಕನ್ನಡ ಸಮಕಾಲಿಕ ಅನುವಾದ

4 ತಾವು ಮೋಶೆಯ ಮುಖಾಂತರವಾಗಿ ಇಸ್ರಾಯೇಲರ ಪಿತೃಗಳಿಗೆ ಆಜ್ಞಾಪಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೇಳುವರೋ ಇಲ್ಲವೋ ಎಂದು ಪರೀಕ್ಷಿಸುವುದಕ್ಕೆ ಯೆಹೋವ ದೇವರು ಅವರನ್ನು ಉಳಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತಾನು ಮೋಶೆಯ ಮೂಲಕವಾಗಿ ಇವರ ಪೂರ್ವಿಕರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೈಕೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತಾವು ಮೋಶೆಯ ಮೂಲಕ ಇವರ ಪೂರ್ವಜರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಯೇಲರು ಕೈಗೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕಾಗಿ ಸರ್ವೇಶ್ವರ ಅವರನ್ನು ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತಾನು ಮೋಶೆಯ ಮೂಲಕವಾಗಿ ಇವರ ಪಿತೃಗಳಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲ್ಯರು ಕೈಕೊಂಡು ನಡೆಯುವರೋ ಇಲ್ಲವೋ ಎಂಬದನ್ನು ಪರೀಕ್ಷಿಸಿ ತಿಳುಕೊಳ್ಳುವದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಇಸ್ರೇಲರನ್ನು ಪರೀಕ್ಷಿಸುವುದಕ್ಕಾಗಿ ಬೇರೆ ಜನಾಂಗದವರನ್ನು ಆ ಪ್ರದೇಶದಲ್ಲಿ ಬಿಟ್ಟಿದ್ದನು. ಯೆಹೋವನು ಮೋಶೆಯ ಮೂಲಕ ಅವರ ಪೂರ್ವಿಕರಿಗೆ ಕೊಟ್ಟ ಆಜ್ಞೆಗಳನ್ನು ಇಸ್ರೇಲರು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಆತನು ನೋಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:4
7 ತಿಳಿವುಗಳ ಹೋಲಿಕೆ  

ದೇವರ ಮೆಚ್ಚುಗೆ ನಿಮ್ಮಲ್ಲಿ ಯಾರ ಮೇಲೆ ಇದೆ ಎಂಬುದು ಕಂಡುಬರುವಂತೆ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.


ಕಾನಾನ್ ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲರನ್ನು ಪರೀಕ್ಷಿಸುವುದಕ್ಕೂ,


ಇಸ್ರಾಯೇಲರು ತಮ್ಮ ತಂದೆಗಳು ಕೈಗೊಂಡು ನಡೆದ ಯೆಹೋವ ದೇವರ ಮಾರ್ಗದಲ್ಲಿ ತಾವು ಕೈಗೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ,


ಲೇವಿ ಕುಲದ ವಿಷಯದಲ್ಲಿ ಹೇಳಿದ್ದೇನೆಂದರೆ: “ನಿಮ್ಮ ನಿರ್ಣಯವನ್ನು ತಿಳಿಸುವ ಊರೀಮ್, ತುಮ್ಮೀಮ್ ಎಂಬ ವಸ್ತುಗಳು ನಿಮ್ಮ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀವು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿರಿ. ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿರಿ.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.


ಅವನು ಯೆಹೋವ ದೇವರಿಗೆ ಮೊರೆಯಿಟ್ಟನು. ಯೆಹೋವ ದೇವರು ಅವನಿಗೆ ಒಂದು ಗಿಡವನ್ನು ತೋರಿಸಿದರು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಗಿ ಬಿಟ್ಟಿತು. ಅಲ್ಲಿ ದೇವರು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿದರು. ಅಲ್ಲಿಯೇ ದೇವರು ಅವರನ್ನು ಪರೀಕ್ಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು