Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:7 - ಕನ್ನಡ ಸಮಕಾಲಿಕ ಅನುವಾದ

7 ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತು, ಬಾಳನನ್ನೂ ಅಶೇರನನ್ನೂ ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಅವರ ದೃಷ್ಟಿಯಲ್ಲಿ ದ್ರೋಹಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಅಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:7
28 ತಿಳಿವುಗಳ ಹೋಲಿಕೆ  

ಆದರೆ ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


ಅವನು ಅಶೇರ ಸ್ತಂಭವನ್ನು ಯೆಹೋವ ದೇವರ ಆಲಯದೊಳಗಿಂದ ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ತರಿಸಿ, ಅದನ್ನು ಕಿದ್ರೋನ್ ಕಣಿವೆಯ ಬಳಿಯಲ್ಲಿ ಸುಟ್ಟು, ಅದನ್ನು ಧೂಳಾಗಿ ಪುಡಿಮಾಡಿ, ಆ ಧೂಳಿನ ಪುಡಿಯನ್ನು ಸಾಮಾನ್ಯ ಜನರ ಸಮಾಧಿಗಳ ಮೇಲೆ ಹಾಕಿದನು.


ಇದಲ್ಲದೆ ಅವನ ಪ್ರಾರ್ಥನೆಯೂ, ಅವನು ದೇವರಿಗೆ ಭಿನ್ನವಿಸಿದ್ದೂ, ಅವನ ಸಮಸ್ತ ಪಾಪವೂ, ಅವನ ಅಪನಂಬಿಕೆಯೂ, ಅವನು ತಗ್ಗಿಸಿಕೊಳ್ಳುವುದಕ್ಕಿಂತ ಮುಂಚೆ ಕಟ್ಟಿಸಿದ ಉನ್ನತ ಸ್ಥಳಗಳನ್ನೂ, ನಿಲ್ಲಿಸಿದ ಅಶೇರ ಸ್ತಂಭಗಳೂ, ಕೆತ್ತಿಸಿದ ವಿಗ್ರಹಗಳೂ, ಸ್ಥಾಪಿಸಿದ ಸ್ಥಳಗಳೂ ಪ್ರವಾದಿಗಳ ದಾಖಲೆಗಳಲ್ಲಿ ಬರೆದಿರುತ್ತವೆ.


ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.


ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಬಿಟ್ಟು, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ದೇವರ ಕೋಪಾಗ್ನಿಯು ಬಂತು.


ಅರಸನಾದ ಆಸನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಇದಲ್ಲದೆ ಆಸನು ಆ ಮೂರ್ತಿಯನ್ನು ಕಡಿದು ಚೂರುಚೂರು ಮಾಡಿ, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.


ಇದಲ್ಲದೆ ಯೋಷೀಯನು ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದುಬಿಟ್ಟು, ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.


ಆದ್ದರಿಂದ ನೀನು ಕರ್ಮೆಲು ಬೆಟ್ಟದ ಬಳಿಯಲ್ಲಿ ಸಮಸ್ತ ಇಸ್ರಾಯೇಲನ್ನೂ, ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ, ಈಜೆಬೆಲಳ ಮೇಜಿನ ಹತ್ತಿರ ಭೋಜನಮಾಡುವ ಅಶೇರನ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕೂಡಿಸು,” ಎಂದನು.


ಅಹಾಬನು ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆಯೇ ಅಹಾಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಉಕ್ಕುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕವಾಗಿ ಕೆಟ್ಟತನ ಮಾಡಿದನು.


ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ, “ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೆಯದಾದ ಏಳು ವರ್ಷದ ಎರಡನೆಯ ಹೋರಿಯನ್ನು ತೆಗೆದುಕೊಂಡುಹೋಗಿ, ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ, ಅದರ ಸಮೀಪದಲ್ಲಿರುವ ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಿ,


ಇಸ್ರಾಯೇಲರು ಯೆಹೋವ ದೇವರ ಮುಂದೆ ತಿರುಗಿ ಕೆಟ್ಟದ್ದನ್ನೇ ಮಾಡಿದರು. ಅವರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನೇ ಮಾಡಿದ್ದರಿಂದ, ಯೆಹೋವ ದೇವರು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲಪಡಿಸಿದರು.


ನಿಮ್ಮ ಯೆಹೋವ ದೇವರಿಗಾಗಿ ಕಟ್ಟುವ ಬಲಿಪೀಠದ ಸಮೀಪದಲ್ಲಿ ಮರದಿಂದ ಮಾಡಿದ ಯಾವುದೇ ಅಶೇರ ಸ್ತಂಭವನ್ನು ನಿಲ್ಲಿಸಬಾರದು.


ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ.


ಅವನು ಬಲಿಪೀಠಗಳನ್ನೂ, ಅಶೇರ ಸ್ತಂಭಗಳನ್ನೂ ಕೆಡವಿಹಾಕಿ, ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿಮಾಡಿ, ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡವಿದ ತರುವಾಯ ಯೆರೂಸಲೇಮಿಗೆ ಹಿಂದಿರುಗಿದನು.


ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡು, ಅವರನ್ನು ಅರಾಮ್ ನಹರೈಮ್‌ದ ಅರಸನಾದ ಕೂಷನ್ ರಿಷಾತಯಿಮನ ಕೈಗೆ ಮಾರಿಬಿಟ್ಟರು. ಇಸ್ರಾಯೇಲರು ಕೂಷನ್‌ರಿಷಾತಯಿಮ್ ಎಂಬವನಿಗೆ ಎಂಟು ವರ್ಷ ಗುಲಾಮರಾಗಿದ್ದರು.


ಸುತ್ತಲೂ ಇದ್ದ ತಮ್ಮ ಎಲ್ಲಾ ಶತ್ರುಗಳ ಕೈಯಿಂದ ತಮ್ಮನ್ನು ತಪ್ಪಿಸಿಬಿಟ್ಟ ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟರು.


“ಆದರೆ ಅವರು ತಮ್ಮ ದೇವರಾದ ಯೆಹೋವ ದೇವರನ್ನು ಮರೆತು ಹೋದಾಗ, ದೇವರು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟರು.


ಇವರು ಅವರ ಸಂಗಡ ಯುದ್ಧಮಾಡಿದರು. ಆದ್ದರಿಂದ ಅವರು ಯೆಹೋವ ದೇವರಿಗೆ ಮೊರೆಯಿಟ್ಟು, ‘ನಾವು ಯೆಹೋವ ದೇವರಾದ ನಿಮ್ಮನ್ನು ಬಿಟ್ಟು ಬಾಳನನ್ನೂ, ಅಷ್ಟೋರೆತನನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀವು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸಿರಿ; ನಾವು ನಿಮ್ಮ ಸೇವೆ ಮಾಡುವೆವು,’ ಎಂದರು.


ನಮ್ಮ ಪಿತೃಗಳು ಈಜಿಪ್ಟಿನಲ್ಲಿ ನಿಮ್ಮ ಅದ್ಭುತಗಳಿಗೆ ಲಕ್ಷಕೊಡದೆ, ನಿಮ್ಮ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ ಅಂದರೆ ಕೆಂಪುಸಮುದ್ರದ ಹತ್ತಿರ ತಿರುಗಿಬಿದ್ದರು.


ಅವರ ಪಿತೃಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ, ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತುಬಿಡುವಂತೆ ಮಾಡುವುದಕ್ಕೆ ಯೋಚಿಸುತ್ತಾರೆ.


ನಾನು ಈ ಹೊತ್ತು ನಿಮಗೆ ಕೊಡುವ ದೇವರ ಆಜ್ಞೆಗಳನ್ನೂ ನಿಯಮಗಳನ್ನೂ ತೀರ್ಪುಗಳನ್ನೂ ಕೈಕೊಳ್ಳದವರೂ, ಯೆಹೋವ ದೇವರನ್ನು ಮರೆಯದವರೂ ಆಗದಂತೆ ನೋಡಿಕೊಳ್ಳಿರಿ.


ನಿಮ್ಮ ಹೃದಯವು ಗರ್ವಗೊಂಡು, ನಿಮ್ಮನ್ನು ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ ನಿಮ್ಮ ದೇವರಾದ ಯೆಹೋವ ದೇವರನ್ನೇ ಮರೆತುಬಿಡಬೇಡಿರಿ.


ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.


ಗಿದ್ಯೋನನ ಮರಣದ ತರುವಾಯ, ಇಸ್ರಾಯೇಲರು ದೇವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜೆ ಮಾಡುತ್ತಾ ಬಾಳ್ ಬೆರೀತನ್ನು ತಮಗೆ ದೇವರಾಗಿ ಮಾಡಿಕೊಂಡರು.


ಆದರೆ ಇತರ ಜನಾಂಗಗಳ ಸಂಗಡ ಕೂಡಿಕೊಂಡು, ಅವರ ಪದ್ಧತಿಗಳನ್ನು ಕಲಿತುಕೊಂಡರು.


ಅವರ ವಿಗ್ರಹಗಳಿಗೆ ಆರಾಧನೆ ಮಾಡಿದರು; ಅವು ಅವರಿಗೆ ಉರುಲಿನಂತಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು