ನ್ಯಾಯಸ್ಥಾಪಕರು 3:9 - ಕನ್ನಡ ಸಮಕಾಲಿಕ ಅನುವಾದ9 ತರುವಾಯ ಇಸ್ರಾಯೇಲರು ಯೆಹೋವ ದೇವರನ್ನು ಕೂಗುವಾಗ, ಯೆಹೋವ ದೇವರು ಇಸ್ರಾಯೇಲರಿಗೆ ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ, ಕಾಲೇಬನ ತಮ್ಮನಾದ ಕೆನಾಜನ ಮಗ ಒತ್ನಿಯೇಲನನ್ನು ಎಬ್ಬಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇಸ್ರಯೇಲರು ಮೊರೆಯಿಟ್ಟಾಗ ಅವರನ್ನು ಬಿಡುಗಡೆ ಮಾಡಲು ಸರ್ವೇಶ್ವರ ಒಬ್ಬ ವ್ಯಕ್ತಿಯನ್ನು ಎಬ್ಬಿಸಿದರು; ಆತನೇ ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇಸ್ರಾಯೇಲ್ಯರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು; ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಒತ್ನೀಯೇಲ. ಅವನು ಕೆನಜ ಎಂಬವನ ಮಗನು. ಕೆನಜನು ಕಾಲೇಬನ ತಮ್ಮ. ಒತ್ನೀಯೇಲನು ಇಸ್ರೇಲರನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿ |