Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟದಲ್ಲಿ ಏರಿದನೆಂದು ಸೀಸೆರನಿಗೆ ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಬೀನೋವಮನ ಮಗ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನ ಸೀಸೆರನಿಗೆ ಮುಟ್ಟಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟಕ್ಕೆ ಬಂದಿದ್ದಾನೆಂಬ ಸಮಾಚಾರ ಸೀಸೆರನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:12
11 ತಿಳಿವುಗಳ ಹೋಲಿಕೆ  

“ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, ‘ನನ್ನ ಜೀವದಾಣೆ,’ ಬೆಟ್ಟಗಳಲ್ಲಿ ತಾಬೋರಿನಂತೆಯೂ, ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು.


ಉತ್ತರವನ್ನೂ ದಕ್ಷಿಣವನ್ನೂ ನೀವೇ ನಿರ್ಮಿಸಿದ್ದೀರಿ. ತಾಬೋರೂ, ಹೆರ್ಮೋನೂ ನಿಮ್ಮ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.


ಆ ಮೇರೆಯು ಪಶ್ಚಿಮಕ್ಕೆ ಅಜ್ನೋತ್ ತಾಬೋರ್ ಕಡೆಗೆ ತಿರುಗಿ, ಅಲ್ಲಿಂದ ಹುಕ್ಕೋಕ್ ಹೊರಟು, ದಕ್ಷಿಣಕ್ಕೆ ಜೆಬುಲೂನನನ್ನೂ ಪಶ್ಚಿಮಕ್ಕೆ ಆಶೇರನ್ನೂ ಮತ್ತು ಯೆಹೂದಿಯರ ಮೇರೆಗೂ ಪೂರ್ವದಿಕ್ಕಿನಲ್ಲಿ ಯೊರ್ದನ್ ನದಿಯನ್ನು ಮುಟ್ಟಿ ಬರುವುದು.


ಅದು ಸಾರೀದಿನಿಂದ ಸೂರ್ಯನು ಉದಯಿಸುವ ಪೂರ್ವದಿಕ್ಕಿನ ಕಿಸ್ಲೋತ್ ತಾಬೋರಿನ ಮೇರೆಗೆ ತಿರುಗಿ, ಅಲ್ಲಿಂದ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.


ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವಮನ ಮಗ ಬಾರಾಕನನ್ನು ಕರೆಯಿಸಿ ಅವನಿಗೆ, “ಇಸ್ರಾಯೇಲ್ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದೇನೆಂದರೆ, ‘ನೀನು ನಫ್ತಾಲಿಯರಲ್ಲಿಯು, ಜೆಬುಲೂನರಲ್ಲಿಯು ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.


ಮೋಶೆಯ ಅಳಿಯನಾದ ಹೊಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರನು ಕೇನ್ಯರನ್ನು ಬಿಟ್ಟು, ತನ್ನನ್ನು ಪ್ರತ್ಯೇಕಿಸಿ, ಕೆದೆಷಿನ ಬಳಿಯಲ್ಲಿರುವ ಚಾನನ್ನೀಮ್ ಎಂಬ ಊರಲ್ಲಿ ಅಲ್ಲೋನ್ ಮರದ ಬಳಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು.


ಆದ್ದರಿಂದ ಸೀಸೆರನು ಒಂಬೈನೂರು ಕಬ್ಬಿಣದ ರಥಗಳನ್ನೂ, ತನ್ನ ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಹರೋಷೆತ್ ಹಗ್ಗೋಯಿಮಿನಿಂದ ಕೀಷೋನ್ ಹಳ್ಳಕ್ಕೆ ಬಂದನು.


ಆ ಎಲ್ಲೆಯು ತಾಬೋರ್, ಶಹಚೀಮಾ, ಬೇತ್ ಷೆಮೆಷ್ ಎಂಬ ಊರುಗಳಿಗೆ ಸೇರಿ ಯೊರ್ದನ್ ನದಿ ತೀರದಲ್ಲಿ ಮುಗಿಯುತ್ತದೆ. ಅಲ್ಲಿ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದ್ದವು.


ಅವನು ಜೆಬಹನಿಗೂ, ಚಲ್ಮುನ್ನನಿಗೂ, “ನೀವು ತಾಬೋರಿನಲ್ಲಿ ಕೊಂದುಹಾಕಿದ ಆ ಮನುಷ್ಯರು ಯಾವ ತರಹದವರಾಗಿದ್ದರು?” ಎಂದನು. ಅದಕ್ಕವರು, “ನಿನ್ನ ಹಾಗೆಯೇ ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಂತಿದ್ದರು,” ಎಂದರು.


ನಿಮ್ಮ ಭುಜವು ಶಕ್ತಿಯುತವಾದದ್ದು. ನಿಮ್ಮ ಕೈ ಬಲವುಳ್ಳದ್ದು; ನಿಮ್ಮ ಬಲಗೈ ಉನ್ನತವಾದದ್ದು.


“ಯಾಜಕರೇ, ಇದನ್ನು ನೀವು ಕೇಳಿರಿ; ಇಸ್ರಾಯೇಲಿನ ಮನೆತನದವರೇ ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದ ಕಾರಣ ನಿಮಗೆ ವಿರುದ್ಧವಾಗಿ ಈ ನ್ಯಾಯತೀರ್ಪು ಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು