Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:13 - ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಸೀಸೆರನು ಒಂಬೈನೂರು ಕಬ್ಬಿಣದ ರಥಗಳನ್ನೂ, ತನ್ನ ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಹರೋಷೆತ್ ಹಗ್ಗೋಯಿಮಿನಿಂದ ಕೀಷೋನ್ ಹಳ್ಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನೂ, ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಅನ್ಯಜನರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವನು ತನ್ನ ಒಂಬೈನೂರು ಕಬ್ಬಿಣದ ರಥಗಳನ್ನೂ ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಮ್ಲೇಚ್ಛರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನೂ ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಮ್ಲೇಚ್ಫರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸೀಸೆರನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನು ಒಟ್ಟುಗೂಡಿಸಿದನು. ಸೀಸೆರನು ತನ್ನ ಎಲ್ಲಾ ಜನರನ್ನು ತನ್ನ ಜೊತೆ ಸೇರಿಸಿಕೊಂಡನು. ಅವರು ಹರೋಷೆತ್ ಹೆಗ್ಗೋಯಿಮ್‌ನಿಂದ ಕೀಷೋನ್ ನದಿಗೆ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:13
7 ತಿಳಿವುಗಳ ಹೋಲಿಕೆ  

ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ, ಅವನ ರಥಗಳನ್ನೂ, ಅವನ ಸೈನ್ಯವನ್ನೂ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು, ನಿನ್ನ ಕೈಗೆ ಒಪ್ಪಿಸುವೆನು,’ ಎಂದು ಆಜ್ಞಾಪಿಸಿದನು,” ಎಂದಳು.


ಅದಕ್ಕೆ ಯೋಸೇಫನ ಸಂತತಿಯರು, “ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿರುವ ಬೇತ್ ಷೆಯಾನ್‌ನಲ್ಲಿಯೂ ಇಜ್ರೆಯೇಲ್ ಕಣಿವೆಯಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಇವೆ,” ಎಂದರು.


ಯೆಹೋವ ದೇವರು ಯೆಹೂದ ಗೋತ್ರದವರ ಸಂಗಡ ಇದ್ದುದರಿಂದ, ಅವರು ಬೆಟ್ಟದ ಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿಣದ ರಥಗಳಿದ್ದುದರಿಂದ, ಅವರು ಅವರನ್ನು ಹೊರಡಿಸಲಾರದೆ ಹೋದರು.


ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟದಲ್ಲಿ ಏರಿದನೆಂದು ಸೀಸೆರನಿಗೆ ತಿಳಿಸಲಾಯಿತು.


“ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸಮೀಪವಾದ ತಾನಕದಲ್ಲಿ ಯುದ್ಧಮಾಡಿದರು. ಅವರು ಬೆಳ್ಳಿ ದ್ರವ್ಯಗಳನ್ನು ತೆಗೆದುಕೊಳ್ಳಲಿಲ್ಲ.


ಆಗ ಎಲೀಯನು ಅವರಿಗೆ, “ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದೆ ಇರಲಿ,” ಎಂದನು. ಇವರು ಅವರನ್ನು ಹಿಡಿದರು. ಎಲೀಯನು ಅವರನ್ನು ಕೀಷೋನು ಹಳ್ಳದ ಬಳಿಗೆ ತೆಗೆದುಕೊಂಡುಹೋಗಿ ಅಲ್ಲಿ ಅವರನ್ನು ಕೊಂದುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು