ನ್ಯಾಯಸ್ಥಾಪಕರು 4:2 - ಕನ್ನಡ ಸಮಕಾಲಿಕ ಅನುವಾದ2 ಆದ್ದರಿಂದ ಯೆಹೋವ ದೇವರು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟರು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತ್ ಹಗ್ಗೊಯಿಮ್‌ನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ಒಪ್ಪಿಸಿಕೊಟ್ಟನು. ಹರೋಷೆತ್ ಹಗೊಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಧಿಪತಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಈ ಕಾರಣ ಸರ್ವೇಶ್ವರ ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ವಶಪಡಿಸಿದರು. ಮ್ಲೇಚ್ಛರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿ ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆತನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯರಾಜನಾದ ಯಾಬೀನನಿಗೆ ಮಾರಿಬಿಟ್ಟನು. ಮ್ಲೇಚ್ಫರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿಯಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಇಸ್ರೇಲರನ್ನು ಸೋಲಿಸುವಂತೆ ಯೆಹೋವನು ಅವಕಾಶ ಮಾಡಿದನು. ಯಾಬೀನನು ಹಾಚೋರ್ ಎಂಬ ನಗರದಲ್ಲಿ ಆಳುತ್ತಿದ್ದನು. ಸೀಸೆರ ಎಂಬವನು ಅವನ ಸೇನಾಧಿಪತಿಯಾಗಿದ್ದನು. ಸೀಸೆರನು ಹರೋಷೆತ್ ಹಗ್ಗೋಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿ |