ನ್ಯಾಯಸ್ಥಾಪಕರು 4:22 - ಕನ್ನಡ ಸಮಕಾಲಿಕ ಅನುವಾದ22 ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವುದಕ್ಕೆ ಹೊರಟುಹೋಗಿ ಅವನಿಗೆ, “ಬಾ, ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು,” ಎಂದು ಹೇಳಿದಳು. ಬಾರಾಕನು ಅವಳ ಬಳಿಗೆ ಬಂದಾಗ, ಸೀಸೆರನು ಮರಣಹೊಂದಿದ್ದನು. ಮೊಳೆಯು ಅವನ ತಲೆಯಲ್ಲಿ ಹೊಡೆದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿಗೆ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು, “ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆ” ಎಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತು ಬಿದ್ದದ್ದನ್ನು ಕಂಡನು. ಅವನ ಕಣ್ತಲೆಯಲ್ಲಿ ಗೂಟವು ಜಡಿದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿಗೆ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು, “ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆ,” ಎಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತುಬಿದ್ದದ್ದನ್ನು ಕಂಡನು. ಅವನ ತಲೆಯಲ್ಲಿ ಗೂಟವು ಜಡಿದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು - ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತು ಬಿದ್ದದ್ದನ್ನು ಕಂಡನು. ಅವನ ತಲೆಯಲ್ಲಿ ಗೂಟವು ಜಡಿಯಲ್ಪಟ್ಟಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅದೇ ಕ್ಷಣದಲ್ಲಿ ಬಾರಾಕನು ಯಾಯೇಲಳ ಗುಡಾರದ ಹತ್ತಿರಕ್ಕೆ ಬಂದನು. ಅವನನ್ನು ಬರಮಾಡಿಕೊಳ್ಳುವುದಕ್ಕಾಗಿ ಯಾಯೇಲಳು ಹೊರಗೆ ಬಂದು, “ಇಲ್ಲಿ ಒಳಗೆ ಬನ್ನಿ. ನೀನು ಹುಡುಕುತ್ತಿರುವ ಮನುಷ್ಯನನ್ನು ತೋರಿಸುತ್ತೇನೆ” ಎಂದಳು. ಬಾರಾಕನು ಯಾಯೇಲಳ ಜೊತೆ ಗುಡಾರವನ್ನು ಪ್ರವೇಶಿಸಿದನು. ಅಲ್ಲಿ ಬಾರಾಕನು ಕಣತಲೆಯಲ್ಲಿ ಗೂಟವನ್ನು ಜಡಿಸಿಕೊಂಡು ನೆಲದ ಮೇಲೆ ಸತ್ತು ಬಿದ್ದಿದ್ದ ಸೀಸೆರನನ್ನು ಕಂಡನು. ಅಧ್ಯಾಯವನ್ನು ನೋಡಿ |