Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:24 - ಕನ್ನಡ ಸಮಕಾಲಿಕ ಅನುವಾದ

24 ಇಸ್ರಾಯೇಲರ ಕೈ ಕಾನಾನ್ಯರ ಅರಸನಾದ ಯಾಬೀನನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯಹೊಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇಸ್ರಾಯೇಲರ ಹಸ್ತವು ಹೆಚ್ಚು ಹೆಚ್ಚು ಬಲಗೊಂಡದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇಸ್ರಯೇಲರು ಹೆಚ್ಚು ಹೆಚ್ಚು ಬಲಗೊಂಡದ್ದರಿಂದ ಕಾನಾನ್ಯರ ಅರಸ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇಸ್ರಾಯೇಲ್ಯರ ಹಸ್ತವು ಹೆಚ್ಚು ಹೆಚ್ಚು ಬಲಗೊಂಡದರಿಂದ ಕಾನಾನ್ಯರ ಅರಸನಾದ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆತನು ಇಸ್ರೇಲರನ್ನು ಬಲಪಡಿಸಿದ್ದರಿಂದ ಅವರು ಕಾನಾನ್ಯ ಅರಸನಾದ ಯಾಬೀನನನ್ನು ಸಂಪೂರ್ಣವಾಗಿ ಸೋಲಿಸಿ ಅವನನ್ನು ನಿರ್ನಾಮ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:24
3 ತಿಳಿವುಗಳ ಹೋಲಿಕೆ  

ಏಕೆಂದರೆ ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ. ನಾನು ಆರಂಭಿಸಿದ ಹಾಗೆ ಅಂತ್ಯವನ್ನು ಮಾಡುವೆನು.


ಹೀಗೆಯೇ ದೇವರು ಆ ದಿವಸದಲ್ಲಿ ಕಾನಾನ್ಯರ ಅರಸನಾದ ಯಾಬೀನನನ್ನು ಇಸ್ರಾಯೇಲರ ಮುಂದೆ ತಗ್ಗಿಸಿದರು.


ಆ ದಿವಸದಲ್ಲಿ ದೆಬೋರಳೂ, ಅಬೀನೋವಮನ ಮಗ ಬಾರಾಕನೂ ಹಾಡಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು