Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:4 - ಕನ್ನಡ ಸಮಕಾಲಿಕ ಅನುವಾದ

4 ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲರಿಗೆ ನ್ಯಾಯ ತೀರಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ, ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲರಲ್ಲಿ ನ್ಯಾಯತೀರ್ಪನ್ನು ಮಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ ದೆಬೋರಳೆಂಬ ಪ್ರವಾದಿನಿ ಇಸ್ರಯೇಲರಲ್ಲಿ ನ್ಯಾಯ ತೀರಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲ್ಯರಲ್ಲಿ ನ್ಯಾಯತೀರಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ದೆಬೋರಳೆಂಬ ಒಬ್ಬ ಪ್ರವಾದಿನಿ ಇದ್ದಳು. ಅವಳು ಲಪ್ಪೀದೋತ್ ಎಂಬವನ ಪತ್ನಿಯಾಗಿದ್ದಳು. ಅವಳು ಆಗ ಇಸ್ರೇಲಿನ ನ್ಯಾಯಾಧೀಶೆಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:4
13 ತಿಳಿವುಗಳ ಹೋಲಿಕೆ  

ಅಲ್ಲಿ ಆಶೇರನ ಗೋತ್ರದ ಫನೂಯೇಲನ ಮಗಳಾದ ಅನ್ನಳೆಂಬ ಒಬ್ಬ ಬಹು ಮುಪ್ಪಿನ ಪ್ರವಾದಿನಿಯಿದ್ದಳು. ಅವಳು ಮದುವೆಯಾಗಿ ಗಂಡನೊಂದಿಗೆ ಏಳು ವರ್ಷ ಬಾಳಿದ್ದಳು.


ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಅಸಾಯ ಎಂಬವರು ಪ್ರವಾದಿನಿ ಹುಲ್ದಳ ಬಳಿಗೆ ವಿಚಾರಿಸಲು ಹೋದರು. ಆಕೆಯು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ. ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.


ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯನ್ನು ಹಿಂಬಾಲಿಸಿ ಹೊರಹೊರಟರು.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


ಆದರೆ ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆ ಮಾಡುವ ಇಲ್ಲವೆ ಪ್ರವಾದನೆ ಹೇಳುವ ಪ್ರತಿ ಸ್ತ್ರೀಯು ತನ್ನ ತಲೆಯನ್ನು ಅವಮಾನ ಪಡಿಸುತ್ತಾಳೆ. ಹೀಗೆ ಮಾಡುವ ಸ್ತ್ರೀಯು ತನ್ನ ತಲೆ ಬೋಳಿಸಿಕೊಳ್ಳುವುದಕ್ಕೆ ಸಮಾನವಾಗಿದೆ.


ಅವನಿಗೆ ಅವಿವಾಹಿತರಾದ ನಾಲ್ಕು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಪ್ರವಾದಿಸುವವರಾಗಿದ್ದರು.


ನಾನು ಈಜಿಪ್ಟ್ ದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸತ್ವದ ದೇಶದೊಳಗಿಂದ ನಿನ್ನನ್ನು ವಿಮೋಚಿಸಿ, ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಿನಗೆ ನಾಯಕರನ್ನಾಗಿ ಕಳುಹಿಸಿದೆನು.


ನನ್ನ ದೇವರೇ, ನೀವು ಅವರ ಈ ಕಾರ್ಯಗಳ ಪ್ರಕಾರ ಟೋಬೀಯನನ್ನೂ, ಸನ್ಬಲ್ಲಟನನ್ನೂ, ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.


ಆಗ ಇಸ್ರಾಯೇಲರು ಯೆಹೋವ ದೇವರಿಗೆ ಮೊರೆಯಿಟ್ಟರು. ಅವನಿಗೆ ಒಂಬೈನೂರು ಕಬ್ಬಿಣದ ರಥಗಳಿದ್ದವು. ಅವನು ಇಸ್ರಾಯೇಲರನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.


ದೆಬೋರಳು ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಎಫ್ರಾಯೀಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸುತ್ತಿದ್ದಳು. ಇಸ್ರಾಯೇಲರು ಅವಳ ಬಳಿಗೆ ನ್ಯಾಯಕ್ಕಾಗಿ ಬರುತ್ತಿದ್ದರು.


“ಈಗ ಮನುಷ್ಯಪುತ್ರನೇ, ನೀನು ತಮ್ಮ ಸ್ವಂತ ಕಲ್ಪನೆಯಿಂದ ಪ್ರವಾದಿಸುವ ನಿನ್ನ ಜನರ ಪುತ್ರಿಯರಿಗೆ ವಿರೋಧವಾಗಿ ನಿನ್ನ ಮುಖವನ್ನಿಟ್ಟು, ಅವರಿಗೆ ವಿರೋಧವಾಗಿ ಪ್ರವಾದಿಸಿ,


ಆ ದಿವಸದಲ್ಲಿ ದೆಬೋರಳೂ, ಅಬೀನೋವಮನ ಮಗ ಬಾರಾಕನೂ ಹಾಡಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು