9 ಅದಕ್ಕವಳು, “ನಾನು ನಿನ್ನ ಸಂಗಡ ಖಂಡಿತವಾಗಿ ಬರುವೆನು. ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನತೆ ನಿನ್ನದಾಗಿರುವುದಿಲ್ಲ. ಏಕೆಂದರೆ ಯೆಹೋವ ದೇವರು ಸೀಸೆರನನ್ನು ಒಬ್ಬ ಸ್ತ್ರೀಯ ಕೈಗೆ ಒಪ್ಪಿಸಿಬಿಡುವೆನು,” ಎಂದು ಹೇಳಿದಳು. ದೆಬೋರಳು ಎದ್ದು ಬಾರಾಕನ ಸಂಗಡ ಕೆದೆಷಿಗೆ ಹೋದಳು.
9 ಆಕೆಯು, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲಿ ಉಂಟಾಗುವ ಗೌರವ ನಿನಗೆ ಸಲ್ಲುವುದಿಲ್ಲ. ಯಾಕೆಂದರೆ ಒಬ್ಬ ಸ್ತ್ರೀ ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುವನು” ಎಂದು ಹೇಳಿ ದೆಬೋರಳು ಬಾರಾಕನೊಡನೆ ಕೆದೆಷಿಗೆ ಹೋದಳು.
9 ಆಕೆ, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧದಿಂದ ನಿನಗೆ ಗೌರವಗಿಟ್ಟದು; ಏಕೆಂದರೆ ಸರ್ವೇಶ್ವರ ಸೀಸೆರನನ್ನು ಒಬ್ಬ ಮಹಿಳೆಗೆ ಒಪ್ಪಿಸಿಕೊಡುವರು,” ಎಂದು ಹೇಳಿ ಬಾರಾಕನೊಡನೆ ಕೆದೆಷಿಗೆ ಹೋದಳು.
9 ಆಕೆಯು - ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲುಂಟಾಗುವ ಮಾನವು ನಿನಗಲ್ಲ. ಯೆಹೋವನು ಸೀಸೆರನನ್ನು ಒಬ್ಬ ಸ್ತ್ರೀಗೆ ಒಪ್ಪಿಸಿಕೊಡುವನು ಎಂದು ಹೇಳಿ ಎದ್ದು ಬಾರಾಕನೊಡನೆ ಕೆದೆಷಿಗೆ ಹೋದಳು.
9 ಅದಕ್ಕೆ ದೆಬೋರಳು, “ನಿಸ್ಸಂದೇಹವಾಗಿ ನಾನು ನಿನ್ನೊಂದಿಗೆ ಬರುತ್ತೇನೆ. ಆದರೆ ನಿನ್ನ ಈ ಮನೋಭಾವದಿಂದಾಗಿ ಸೀಸೆರನನ್ನು ಸೋಲಿಸಿದ ಗೌರವ ನಿನಗೆ ಸಲ್ಲುವುದಿಲ್ಲ. ಒಬ್ಬ ಹೆಂಗಸು ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ” ಎಂದು ಉತ್ತರಿಸಿದಳು. ದೆಬೋರಳು ಬಾರಾಕನ ಸಂಗಡ ಕೆದೆಷ್ ನಗರಕ್ಕೆ ಹೋದಳು.
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.
ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು.
ಅವನನ್ನು ಎದುರಿಸಿ, “ಉಜ್ಜೀಯನೇ, ಯೆಹೋವ ದೇವರಿಗೆ ಧೂಪ ಸುಡುವುದು ಪ್ರತಿಷ್ಠಿತರಾದ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು. ನೀನು ಪರಿಶುದ್ಧ ಸ್ಥಳದಿಂದ ಹೊರಟು ಹೋಗು, ಅಪರಾಧ ಮಾಡಿದೆ. ದೇವರಾದ ಯೆಹೋವ ದೇವರಿಂದ ನಿನಗೆ ಗೌರವ ದೊರಕದು,” ಎಂದನು.
ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕನನ್ನು ಕರೆದು ಅವನಿಗೆ, “ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಖಡ್ಗದಿಂದ ಇರಿದು, ನನ್ನನ್ನು ಕೊಲ್ಲು,” ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು. ಅವನು ಮರಣಹೊಂದಿದನು.