Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:11 - ಕನ್ನಡ ಸಮಕಾಲಿಕ ಅನುವಾದ

11 ನೀರು ಸೇದುವ ಸ್ಥಳಗಳ ಹತ್ತಿರ ಗಾಯಕರ ಶಬ್ದದಿಂದ ಯೆಹೋವ ದೇವರ ನೀತಿಸಾಧನೆಗಳನ್ನು ವರ್ಣಿಸುತ್ತಾರೆ. ಇಸ್ರಾಯೇಲಿನಲ್ಲಿ ಅವರ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ಮಹತ್ಕಾರ್ಯಗಳನ್ನು ತಿರುಗಿ ಪ್ರಕಟಿಸುವರು. “ಆಗ ಯೆಹೋವ ದೇವರ ಜನರು ಪಟ್ಟಣದ ಬಾಗಿಲುಗಳಿಗೆ ಇಳಿದು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೇದುವ ಬಾವಿಗಳ ಬಳಿಯಲ್ಲಿ ಬಿಲ್ಲುಗಾರರ ಧ್ವನಿಗಿಂತ ಗಟ್ಟಿಯಾಗಿ ಯೆಹೋವನ ನೀತಿಸಾಧನೆಯ ವರ್ಣನೆಯನ್ನು ಕೇಳಿರಿ. ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ. ಆ ಕಾಲದಲ್ಲಿ ಯೆಹೋವನ ಜನರು ಊರುಬಾಗಿಲುಗಳಿಗೆ ಇಳಿದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸೇದುವ ಬಾವಿಗಳ ಬಳಿ ಕುಳಿತು ಕೊಳ್ಳೆಹಂಚಿಕೊಳ್ಳುವವರ ಧ್ವನಿಯನಾಲಿಸು! ವರ್ಣಿಸುತಿಹರವರು ಸರ್ವೇಶ್ವರ ಸಾಧಿಸಿದ ನೀತಿಯನು, ತನ್ನ ಪ್ರಜೆ ಇಸ್ರಯೇಲ್ ಊರುಗಳಲ್ಲಾತನು ಸ್ಥಾಪಿಸಿದ ನ್ಯಾಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೇದುವ ಬಾವಿಗಳ ಬಳಿಯಲ್ಲಿ ಕೊಳ್ಳೆಯನ್ನು ಹಂಚಿಕೊಳ್ಳುವವರ ಧ್ವನಿಗಿಂತ ಗಟ್ಟಿಯಾಗಿ ಯೆಹೋವನ ನೀತಿಸಾಧನೆಯನ್ನು ವರ್ಣಿಸುತ್ತಾರೆ. ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ. ಆ ಕಾಲದಲ್ಲಿ ಯೆಹೋವನ ಜನರು ಊರು ಬಾಗಲುಗಳಿಗೆ ಇಳಿದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತಾಳ ಝಲ್ಲರಿಗಳ ಧ್ವನಿಯನ್ನು ಕೇಳಿರಿ; ಬಾವಿಗಳ ಹತ್ತಿರ ನೆರೆದ ಜನಸಮೂಹದ ಧ್ವನಿಯನ್ನು ಕೇಳಿರಿ; ಅಲ್ಲಿ ಅವು ಯೆಹೋವನ ವಿಜಯದ ಬಗ್ಗೆ ಹೇಳುತ್ತವೆ. ಯೆಹೋವನ ಜನರು ಪಟ್ಟಣ ದ್ವಾರದಲ್ಲಿ ಯುದ್ಧಕ್ಕೆ ಹೋದಾಗ ಇಸ್ರೇಲಿನಲ್ಲಿ ಅವರ ವಿಜಯದ ಬಗ್ಗೆ ಹೇಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:11
19 ತಿಳಿವುಗಳ ಹೋಲಿಕೆ  

ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿದ್ದನ್ನೂ ಬೆಯೋರನ ಮಗ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲುಗೊಂಡು ಗಿಲ್ಗಾಲಿನ ವರೆಗೆ ಆದ ನಿಮ್ಮ ಪ್ರಯಾಣವನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಆಗ ಯೆಹೋವ ದೇವರ ನೀತಿಯ ಕೃತ್ಯಗಳನ್ನು ತಿಳಿದುಕೊಳ್ಳುವಿರಿ.


ಆದ್ದರಿಂದ ಈಗ ನಿಲ್ಲಿರಿ. ಯೆಹೋವ ದೇವರು ನಿಮಗೂ, ನಿಮ್ಮ ಪಿತೃಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಯೆಹೋವ ದೇವರ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.


ಅವರು ಹೊಸ ದೇವರುಗಳನ್ನು ಆಯ್ದುಕೊಂಡರು. ಆಗ ಯುದ್ಧವು ಬಾಗಿಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಲವತ್ತು ಸಾವಿರ ಸೈನಿಕರಲ್ಲಿ ಗುರಾಣಿಯೂ, ಕಠಾರಿಯೂ ಇರಲಿಲ್ಲ.


ಅಡವಿಯ ಖಡ್ಗದ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.


ನಾವು ನಮ್ಮ ನೀರನ್ನು ಹಣಕೊಟ್ಟು ಕುಡಿಯಬೇಕಾಗಿದೆ. ನಮ್ಮ ಸೌದೆಯು ನಮಗೇ ಮಾರಲಾಗಿದೆ.


“ಯೆಹೋವ ದೇವರ ಆಲಯದ ಬಾಗಿಲಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು: “ ‘ಯೆಹೂದ್ಯರೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.


ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ, ಬಾಗಿಲಿನ ಕಡೆಗೆ ಯುದ್ಧವನ್ನು ತಿರುಗಿಸುವವನಿಗೆ ಪರಾಕ್ರಮವೂ ಆಗಿರುವನು.


ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.


“ನಾನು ಪಟ್ಟಣದ ಮುಂಬಾಗಿಲಿಗೆ ಹೋದಾಗ, ಬೀದಿಯಲ್ಲಿ ನನ್ನ ಪೀಠದ ಮೇಲೆ ಕುಳಿತುಕೊಂಡಾಗ,


ಅವರಿಬ್ಬರನ್ನೂ ಆ ಪಟ್ಟಣದ ಬಾಗಿಲಿನ ಹೊರಗೆ ತಂದು, ಅವರು ಸಾಯುವ ಹಾಗೆ ಕಲ್ಲೆಸೆಯಬೇಕು. ಆ ಹುಡುಗಿಯು ಪಟ್ಟಣದಲ್ಲಿ ಇದ್ದರೂ, ಕೂಗದೆ ಇದ್ದದ್ದರಿಂದಲೂ, ಆ ಮನುಷ್ಯನು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.


ನಿಮ್ಮ ಬಹು ಒಳ್ಳೆಯತನದ ಜ್ಞಾಪಕವನ್ನು ಅವರು ನುಡಿಯುವರು; ನಿಮ್ಮ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.


ಆಗ ಸ್ತ್ರೀಯರು ನೀರು ತರಲು ಬರುವ ಸಂಜೆಯ ಸಮಯವಾಗಿತ್ತು. ಅವನು ಪಟ್ಟಣದ ಹೊರಗೆ ನೀರಿನ ಬಾವಿಯ ಬಳಿಯಲ್ಲಿ ಒಂಟೆಗಳನ್ನು ಮಲಗಿಸಿದನು.


ಅವನು ಕಣ್ಣೆತ್ತಿ ನೋಡಲಾಗಿ, ಹೊಲದಲ್ಲಿ ಒಂದು ಬಾವಿ ಇತ್ತು. ಅದರ ಸಮೀಪದಲ್ಲಿ ಮೂರು ಕುರಿಮಂದೆಗಳು ಮಲಗಿದ್ದವು. ಏಕೆಂದರೆ ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲು ಇತ್ತು.


ಅಲ್ಲಿ ಮಂದೆಗಳೆಲ್ಲಾ ಕೂಡಿದಾಗ, ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ, ಕುರಿಗಳಿಗೆ ನೀರನ್ನು ಕುಡಿಸಿ, ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.


ಅವನು ಉತ್ತಮವಾದ ನಾಡನ್ನು ತನಗಾಗಿ ಆಯ್ದುಕೊಂಡನು. ನಾಯಕರ ಪಾಲು ಅವನಿಗಾಗಿ ದೊರಕಿತು. ಅವನು ಜನರ ಮುಖ್ಯಸ್ಥರ ಸಂಗಡ ಬಂದು, ಇಸ್ರಾಯೇಲರೊಡನೆ ಯೆಹೋವ ದೇವರ ನೀತಿಯನ್ನೂ ದೇವರ ನ್ಯಾಯಗಳನ್ನೂ ಸ್ಥಾಪಿಸಿದನು.”


ಹೀಗೆ ವರ್ಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಪುತ್ರಿಯರು ಹೋಗಿ, ಗಿಲ್ಯಾದ್ಯನಾದ ಯೆಫ್ತಾಹನ ಮಗಳಿಗಾಗಿ ಗೋಳಾಡುವುದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.


ನನ್ನ ಬಾಯಿ ದಿನವೆಲ್ಲಾ ನಿಮ್ಮ ನೀತಿಯನ್ನೂ ನಿಮ್ಮ ರಕ್ಷಣೆಯನ್ನೂ ಪ್ರಕಟಿಸುವುದು. ಅವುಗಳನ್ನು ವಿವರಿಸಲು ನನಗೆ ತಿಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು