Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:14 - ಕನ್ನಡ ಸಮಕಾಲಿಕ ಅನುವಾದ

14 ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯೀಮಿನಿಂದ ಉಂಟಾಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾಮೀನನು ಮಾಕೀರನಲ್ಲಿಂದ ಅಧಿಪತಿಗಳೂ, ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವವರೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ ಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು. ಮಾಕೀರನ ಗೋತ್ರದಿಂದ ಪ್ರಧಾನರೂ ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಬಂದರು ಅಮಾಲೇಕ್ಯರ ಪ್ರದೇಶದೊಳು ನೆಲೆಗೊಂಡ ಎಫ್ರಯೀಮ್ಯರು, ಅವರೊಂದಿಗೆ ಬಂದರು ಬೆನ್ಯಾಮೀನ್ಯರು, ಮಾಕೀರನ ಗೋತ್ರದ ಪ್ರಧಾನರು, ಜೆಬುಲೂನ್ ಕುಲದೊಳು ದಂಡಧಾರಿಗಳಾದ ಸೇನಾನಾಯಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ ಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು; ಮಾಕೀರನ ಗೋತ್ರದಿಂದ ಪ್ರಧಾನರೂ ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಅಮಾಲೇಕ್ ಪರ್ವತ ಪ್ರದೇಶದಲ್ಲಿ ವಾಸಮಾಡುತ್ತಿದ್ದ ಎಫ್ರಾಯೀಮ್ಯರು ಬಂದರು; ನಿನ್ನನ್ನೂ ನಿನ್ನ ಜನರನ್ನೂ ಅನುಸರಿಸುತ್ತಿದ್ದ ಬೆನ್ಯಾಮೀನ್ಯರೂ ಬಂದರು; ಮಾಕೀರನ ಕುಲದಿಂದ ನಾಯಕರು ಬಂದರು; ಜೆಬುಲೂನ್ ಕುಲದಿಂದ ನಾಯಕರು ಕಂಚಿನ ದೊಣ್ಣೆಗಳೊಡನೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:14
14 ತಿಳಿವುಗಳ ಹೋಲಿಕೆ  

ಪಿರಾತೋನ್ಯನಾದ ಹಿಲ್ಲೇಲನ ಮಗನಾದ ಅಬ್ದೋನನು ಮರಣಹೊಂದಿ, ಎಫ್ರಾಯೀಮ್ ದೇಶದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಅವನ ಶವವನ್ನು ಸಮಾಧಿಮಾಡಿದರು.


ಅವನು ಅಲ್ಲಿ ಬಂದಾಗ, ಎಫ್ರಾಯೀಮನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲರು ಅವನ ಸಂಗಡ ಬೆಟ್ಟದಿಂದ ಇಳಿದರು. ಅವನು ಇವರ ಮುಂದೆ ನಡೆದರು.


ಅವನು ಅಮ್ಮೋನನ ಮತ್ತು ಅಮಾಲೇಕ್ಯರನ್ನು ಕೂಡಿಸಿಕೊಂಡು ಬಂದು, ಇಸ್ರಾಯೇಲರನ್ನು ಹೊಡೆದು, ಖರ್ಜೂರ ಗಿಡಗಳಿರುವ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.


ಆಗ ದೆಬೋರಳು ಬಾರಾಕನಿಗೆ, “ನೀನು ಏಳು. ಏಕೆಂದರೆ ಯೆಹೋವ ದೇವರು ಸೀಸೆರನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವ ದಿನವು ಇದೇ. ಯೆಹೋವ ದೇವರು ನಿನ್ನ ಮುಂದೆ ಹೊರಡಲಿಲ್ಲವೋ?” ಎಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು, ತಾಬೋರ್ ಬೆಟ್ಟದಿಂದ ಇಳಿದನು.


ಬಾರಾಕನು ಜೆಬುಲೂನನ್ನೂ, ನಫ್ತಾಲಿಯನ್ನೂ ಕೆದೆಷಿಗೆ ಕರೆದನು. ಅವನು ಹತ್ತು ಸಾವಿರ ಜನರಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.


“ಆಗ ಉಳಿದವನನ್ನು ಅವರು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದರು. ಯೆಹೋವ ದೇವರ ಜನರು ನನ್ನ ಸಹಾಯಕ್ಕಾಗಿ ಬಂದು, ಪರಾಕ್ರಮಶಾಲಿಗಳ ವಿರುದ್ಧ ಯುದ್ಧಮಾಡಿದರು.


ಬೆನ್ಯಾಮೀನನ ಚಿಕ್ಕ ಗೋತ್ರವು ಅವರನ್ನು ನಡೆಸುವುದು. ಯೆಹೂದದ ಪ್ರಧಾನರೂ, ಜೆಬುಲೂನನ ಪ್ರಧಾನರೂ ನಫ್ತಾಲಿಯ ಪ್ರಧಾನರೂ ಅಲ್ಲಿ ಇದ್ದಾರೆ.


“ಗಿಬೆಯದಲ್ಲಿ ತುತೂರಿಯನ್ನೂ ರಾಮದಲ್ಲಿ ಕೊಂಬನ್ನೂ ಊದಿರಿ. ಬೆನ್ಯಾಮೀನೇ, ನಿನ್ನ ಹಿಂದೆ ನೋಡು! ಬೇತಾವೆನಿನಲ್ಲಿ ಗಟ್ಟಿಯಾಗಿ ಕೂಗು.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ, ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿ ಬಿಲ್ಹಳ ಸಂಗಡ ಮಲಗಿದನು. ಈ ವಿಷಯ ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಪುತ್ರರು ಇದ್ದರು.


ಅವರಲ್ಲಿ ಲೇಯಳ ಪುತ್ರರು: ಯಾಕೋಬನ ಚೊಚ್ಚಲ ಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.


ರಾಹೇಲಳ ಪುತ್ರರು: ಯೋಸೇಫ್ ಮತ್ತು ಬೆನ್ಯಾಮೀನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು