ನ್ಯಾಯಸ್ಥಾಪಕರು 5:17 - ಕನ್ನಡ ಸಮಕಾಲಿಕ ಅನುವಾದ17 ಗಿಲ್ಯಾದನು ಯೊರ್ದನ್ ನದಿಯ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು, ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಗಿಲ್ಯಾದ್ಯರು ಯೊರ್ದನಿನ ಆಚೆಯಲ್ಲೇ ಉಳಿದರು. ದಾನ್ ಕುಲದವರು ಹಡಗುಗಳಲ್ಲಿಯೇ ಉಳಿದದ್ದೇಕೆ? ಆಶೇರ್ ಕುಲದವರು ತಮ್ಮ ರೇವುಗಳನ್ನು ಬಿಡದೆ ಸಮುದ್ರ ತೀರದಲ್ಲಿ ಸುಮ್ಮನೆ ಕುಳಿತುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಗಿಲ್ಯಾದರು ಉಳಿದರು ಜೋರ್ಡನಿನ ಆಚೆಯಲ್ಲೇ ದಾನ್ ಕುಲದವರು ಉಳಿಯರೇಕೆ, ಹಡಗುಗಳಲ್ಲೇ? ಅಶೇರ್ ಕುಲದವರೋ ಅಂಟುಕೊಂಡರು ತಮ್ಮ ರೇವುಗಳಿಗೇ ನೆಮ್ಮದಿಯಾಗಿ ಕೂತುಬಿಟ್ಟರು ಸಮುದ್ರತೀರದಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಗಿಲ್ಯಾದ್ಯರು ಯೊರ್ದನಿನ ಆಚೆಯಲ್ಲೇ ಉಳಿದರು; ದಾನ್ ಕುಲದವರು ಹಡಗುಗಳಲ್ಲಿಯೇ ಉಳಿದದ್ದೇಕೆ? ಆಶೇರ್ ಕುಲದವರು ತಮ್ಮ ರೇವುಗಳನ್ನು ಬಿಡದೆ ಸಮುದ್ರತೀರದಲ್ಲಿ ಸುಮ್ಮನೆ ಕೂತುಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಗಿಲ್ಯಾದಿನ ಜನರು ಜೋರ್ಡನ್ ನದಿಯ ಆಚೆಯ ದಡದಲ್ಲಿದ್ದ ತಮ್ಮ ಶಿಬಿರಗಳಲ್ಲಿ ಇದ್ದುಬಿಟ್ಟರು. ದಾನ್ ಕುಲದವರೇ, ನೀವೇಕೆ ನಿಮ್ಮ ಹಡಗುಗಳಲ್ಲಿಯೇ ಉಳಿದುಬಿಟ್ಟಿರಿ? ಆಶೇರ್ ಕುಲದವರು ಸಮುದ್ರತೀರದಲ್ಲಿರುವ ತಮ್ಮ ಸುರಕ್ಷಿತವಾದ ಬಂದರುಗಳಲ್ಲಿ ಉಳಿದುಕೊಂಡರು. ಅಧ್ಯಾಯವನ್ನು ನೋಡಿ |