Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:26 - ಕನ್ನಡ ಸಮಕಾಲಿಕ ಅನುವಾದ

26 ತನ್ನ ಕೈಯಲ್ಲಿ ಮೊಳೆಯನ್ನೂ, ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆಯನ್ನೂ ತೆಗೆದುಕೊಂಡಳು. ಸುತ್ತಿಗೆಯಿಂದ ಸೀಸೆರನನ್ನು ಅವಳು ಹೊಡೆದಳು. ಅವಳು ಅವನ ತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಕೈಚಾಚಿ ಗೂಟವನ್ನು ತೆಗೆದುಕೊಂಡಳು; ಬಲಗೈಯಲ್ಲಿ ದೊಡ್ಡ ಸುತ್ತಿಗೆಯನ್ನು ಹಿಡಿದಳು; ಆ ಸುತ್ತಿಗೆಯಿಂದ ಸೀಸೆರನ ತಲೆಯನ್ನು ಒಡೆದುಬಿಟ್ಟಳು. ಅವನ ನೆತ್ತಿಗೆ ತಿವಿದು ಜಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಗೂಟ ತೆಗೆದುಕೊಂಡಳು ಕೈಚಾಚಿ ಹಿಡಿದಳು ಬಲಗೈಯಲಿ ದೊಡ್ಡಕೊಡತಿ ಜಡಿದಳು ಸೀಸೆರನ ತಲೆಯನು ಬಡಿದಳಾ ಕೊಡತಿಯಿಂದ ಕಣತಲೆಗೇ ತಿವಿದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಕೈಚಾಚಿ ಗೂಟವನ್ನು ತೆಗೆದುಕೊಂಡಳು; ಬಲಗೈಯಲ್ಲಿ ದೊಡ್ಡ ಕೊಡತಿಯನ್ನು ಹಿಡಿದಳು; ಆ ಕೊಡತಿಯಿಂದ ಸೀಸೆರನ ತಲೆಯನ್ನು ಒಡೆದುಬಿಟ್ಟಳು. ಅವನ ಕಣತಲೆಗೆ ತಿವಿದು ಬಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಂತರ ಯಾಯೇಲಳು ಕೈಚಾಚಿ ಗುಡಾರದ ಗೂಟವನ್ನು ತೆಗೆದುಕೊಂಡಳು. ಅವಳು ಬಲಗೈಯನ್ನು ಚಾಚಿ ದೊಡ್ಡ ಕೊಡತಿಯನ್ನು ತೆಗೆದುಕೊಂಡಳು, ಆ ಕೊಡತಿಯಿಂದ ಸೀಸೆರನ ತಲೆಯನ್ನು ಬಿರುಸಾಗಿ ಒಡೆದುಬಿಟ್ಟಳು; ಅವನ ಕಣತಲೆಗೆ ತಿವಿದು ಬಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:26
5 ತಿಳಿವುಗಳ ಹೋಲಿಕೆ  

ಆ ಸ್ತ್ರೀಯು ತನ್ನ ಜ್ಞಾನದಿಂದ ಸಮಸ್ತ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರಿಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ, ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನೂ ತಮ್ಮ ತಮ್ಮ ಮನೆಗಳಿಗೆ ಹೋದರು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂದಿರುಗಿ ಬಂದನು.


ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆಯನ್ನು ತೆಗೆದು, ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದುಕೊಂಡು, ಅವನು ಆಯಾಸದಿಂದ ನಿದ್ರೆ ಮಾಡುತ್ತಿರುವಾಗ, ಮೆಲ್ಲನೆ ಅವನ ಬಳಿಗೆ ಬಂದು, ಅವನ ತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿಸಿದಳು. ಅವನು ಮರಣಹೊಂದಿದನು.


ಅವನು ನೀರನ್ನು ಕೇಳಿದನು. ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು.


ಅವಳ ಕಾಲುಗಳ ಹತ್ತಿರ ಮುದುರಿ ಬಿದ್ದು ಮಲಗಿದನು. ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು. ಎಲ್ಲಿ ಬಾಗಿ ಬಿದ್ದನೋ, ಅಲ್ಲಿಯೇ ಬಿದ್ದು ಮರಣಹೊಂದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು