ನ್ಯಾಯಸ್ಥಾಪಕರು 5:28 - ಕನ್ನಡ ಸಮಕಾಲಿಕ ಅನುವಾದ28 “ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿಯಿಂದ ಕೂಗಿದಳು, ‘ಅವನ ರಥವು ಬರುವುದಕ್ಕೆ ಇಷ್ಟು ತಡವಾದದ್ದೇನು? ಅವನ ರಥಗಳ ಗಾಲಿಗಳು ಹಿಂದುಳಿದಿರುವುದೇನು?’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 “ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ‘ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು! ಅವನ ಕುದುರೆಗಳ ಗೊರಸುಗಳಿಗೆ ಇಷ್ಟು ಸಾವಕಾಶವೇಕೆ’ ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಸೀಸೆರನ ತಾಯಿ ಇಣುಕಿ ನೋಡಿದಳು ಕಿಟಕಿಯಿಂದ ಕೂಗಿದಳು ಆ ಕಿಟಕಿಯ ಜಾಲರಿಗಳಿಂದ; ‘ಇಷ್ಟು ಹೊತ್ತಾಗಬೇಕೆ ರಥ ಬರುವುದಕ್ಕೆ? ಕುದುರೆಗಳ ಕಾಲುಗಳಿಗೆ ಇಷ್ಟು ಸಾವಕಾಶವೇಕೆ?’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ಅವನ ರಥವು ಬರುವದಕ್ಕೆ ಇಷ್ಟು ಹೊತ್ತೇಕಾಯಿತು! ಅವನ ಕುದುರೆಗಳ ಕಾಲುಗಳಿಗೆ ಇಷ್ಟು ಸಾವಕಾಶವೇಕೆ ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಸೀಸೆರನ ತಾಯಿ ಕಿಟಿಕಿಯ ಮೂಲಕ ನೋಡಿದಳು; ಆಕೆಯು ತೆರೆಯ ಮೂಲಕ ನೋಡಿ ಕೂಗಿದಳು. ‘ಸೀಸೆರನ ರಥಾಗಮನಕ್ಕೆ ಇಷ್ಟು ತಡವೇಕೆ? ಅವನ ರಥದ ಕುದುರೆಗಳ ಧ್ವನಿ ಬರಲು ಇಷ್ಟು ತಡವೇಕೆ?’ ಅಂದಳು. ಅಧ್ಯಾಯವನ್ನು ನೋಡಿ |