Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:5 - ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರ ಮುಂದೆ ಬೆಟ್ಟಗಳು ಕಂಪಿಸಿದವು. ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮುಂದೆ ಸೀನಾಯಿ ಪರ್ವತವು ಸಹ ಕಂಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನ ಮುಂದೆ ಪರ್ವತಗಳು ಕರಗಿಹೋದವು, ಇಸ್ರಾಯೇಲಿನ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕರಗಿಹೋದವು ಬೆಟ್ಟಗುಡ್ಡಗಳು ಆ ಸರ್ವೇಶ್ವರನ ಮುಂದೆ ನೀರಾಗಿ ಹೋಯಿತು ಸೀನಾಯಿ ಪರ್ವತವು ಇಸ್ರಯೇಲರ ದೇವನೆದುರಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನ ಮುಂದೆ ಪರ್ವತಗಳು ಕರಗಿ ಹೋದವು, ಇಸ್ರಾಯೇಲ್ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೀನಾಯಿ ಬೆಟ್ಟದ ದೇವರಾದ ಯೆಹೋವನ ಎದುರಿಗೆ, ಇಸ್ರೇಲರ ದೇವರಾದ ಯೆಹೋವನ ಎದುರಿಗೆ, ಪರ್ವತಗಳು ನಡುಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:5
14 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಅಗ್ನಿಯೊಳಗೆ ಬೆಟ್ಟದ ಮೇಲೆ ಇಳಿದಿದ್ದರಿಂದ ಸೀನಾಯಿ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ಯೆಹೋವ ದೇವರ ಸನ್ನಿಧಿಯಲ್ಲಿ ಬೆಟ್ಟಗಳು ಕರಗುತ್ತವೆ, ಸಮಸ್ತ ಭೂಮಿಯು ಮೇಣದ ಹಾಗೆ ಕರಗುತ್ತವೆ.


ಬೆಟ್ಟಗಳು ಅವರ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ, ಲೋಕವೂ, ಅದರ ನಿವಾಸಿಗಳೆಲ್ಲವೂ ಅವರ ಮುಂದೆ ನಡುಗುತ್ತವೆ.


ನೀವು ಮುಟ್ಟಬಹುದಾದ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮಬ್ಬಿಗೂ ಕತ್ತಲೆಗೂ ಬಿರುಗಾಳಿಗೂ


ಬೆಟ್ಟಗಳು ನಿನ್ನನ್ನು ಕಂಡು ನಡುಗಿದವು; ಜಲಪ್ರವಾಹವು ಹಾದುಹೋಯಿತು; ಸಾಗರವು ಗರ್ಜಿಸಿ; ತನ್ನ ತೆರೆಗಳನ್ನು ಮೇಲಕ್ಕೆ ಎತ್ತುತ್ತದೆ.


ಭೂಮಿಯು ಕದಲಿತು, ಆಕಾಶಗಳು ಸಹ ನಿಮ್ಮ ಮುಂದೆ ಮಳೆಗರೆದವು. ಇಸ್ರಾಯೇಲರ ದೇವರ ಮುಂದೆ, ಹೌದು, ದೇವರ ಮುಂದೆಯೇ ಸೀನಾಯಿ ಸಹ ಕದಲಿತು.


ಬೆಟ್ಟಗಳು ಟಗರುಗಳಂತೆ ಓಡಿತು, ಗುಡ್ಡಗಳು ಕುರಿಮರಿಗಳಂತೆಯೂ ಓಡಾಡಿದವು.


ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟದಲ್ಲಿ ಹೊಗೆ ಹಾಯುವುದನ್ನೂ ನೋಡಿದರು. ಜನರು ಅದನ್ನು ನೋಡಿ ನಡುಗುತ್ತಾ ದೂರಹೋಗಿ ನಿಂತುಕೊಂಡರು.


ಅವರು ಭೂಮಿಯನ್ನು ದೃಷ್ಟಿಸಲು, ಅದು ನಡುಗುತ್ತದೆ; ಬೆಟ್ಟಗಳನ್ನು ಮುಟ್ಟಲು, ಅವು ಹೊಗೆ ಹಾಯುತ್ತವೆ.


ದೇವರೇ, ನೀವು ಹೇರಳವಾಗಿ ಮಳೆಯನ್ನು ಸುರಿಸಿ, ದಣಿದ ನಿಮ್ಮ ಬಾಧ್ಯತೆಯನ್ನು ನೀವು ಉತ್ಸಾಹಪಡಿಸಿದಿರಿ.


ನಾವು ಆದಿಯಿಂದಲೂ ನಿಮ್ಮವರಾಗಿದ್ದೇವೆ. ಅವರ ಮೇಲೆ ನೀವು ದೊರೆತನ ಮಾಡಲಿಲ್ಲ. ಅವರು ನಿಮ್ಮ ಹೆಸರನ್ನು ಧರಿಸಲೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು