Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:1 - ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ಆದ್ದರಿಂದ ಯೆಹೋವ ದೇವರು ಅವರನ್ನು ಏಳು ವರ್ಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದ್ದರಿಂದ ಆತನು ಅವರನ್ನು ಏಳು ವರ್ಷಗಳ ಕಾಲ ಮಿದ್ಯಾನ್ಯರ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಮತ್ತೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದ್ದರಿಂದ ಸರ್ವೇಶ್ವರ ಅವರನ್ನು ಏಳುವರ್ಷಕಾಲ ಮಿದ್ಯಾನ್ಯರ ಕೈಗೊಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ಏಳು ವರುಷಗಳ ಪರ್ಯಂತರ ವಿುದ್ಯಾನ್ಯರ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲರು ಯೆಹೋವನಿಗೆ ವಿರೋಧವಾಗಿ ಮತ್ತೆ ದುಷ್ಕೃತ್ಯಗಳನ್ನೇ ಮಾಡಿದರು. ಆದ್ದರಿಂದ ಮಿದ್ಯಾನ್ಯರು ಇಸ್ರೇಲರ ಮೇಲೆ ಏಳುವರ್ಷ ಪ್ರಭುತ್ವ ನಡೆಸುವಂತೆ ಯೆಹೋವನು ಆಸ್ಪದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:1
16 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟತನ ಮಾಡಿ, ಬಾಳನನ್ನು ಸೇವಿಸಿ,


ಆಕೆಯು ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.


ಕೂಷಾನಿನ ಡೇರೆಗಳು ಕಷ್ಟದಲ್ಲಿರುವುದನ್ನು ಕಂಡೆನು. ಮಿದ್ಯಾನಿನ ನಿವಾಸಗಳು ವೇದನೆಯಿಂದ ನಡುಗಿದವು.


ಇನ್ನೂ ಏನು ಹೇಳಬೇಕು? ಗಿಡಿಯೋನ್, ಬಾರಾಕ್, ಸಂಸೋನ್, ಎಪ್ತಾಹ, ದಾವೀದ, ಸಮುಯೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವುದಕ್ಕೆ ನನಗೆ ಸಮಯ ಸಾಲದು.


ಈ ಪ್ರಕಾರ ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ, ಅವರು ಯೋಸೇಫನನ್ನು ಗುಂಡಿಯಿಂದ ಮೇಲೆತ್ತಿ, ಇಷ್ಮಾಯೇಲರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ಅವರು ಯೋಸೇಫನನ್ನು ಈಜಿಪ್ಟಿಗೆ ಕರೆದುಕೊಂಡು ಹೋದರು.


ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ, ಈಗ ಈ ಸಮೂಹವು ನಮ್ಮ ಸುತ್ತಲಿರುವುದನ್ನೆಲ್ಲಾ ಮೇಯುವುದು,” ಎಂದನು. ಆ ಕಾಲದಲ್ಲಿ ಚಿಪ್ಪೋರನ ಮಗ ಬಾಲಾಕನು ಮೋವಾಬ್ಯರ ಅರಸನಾಗಿದ್ದನು.


ಆಗ ಗಿದ್ಯೋನನು ಅವನಿಗೆ, “ಒಡೆಯನೇ, ಕ್ಷಮಿಸಿರಿ, ಯೆಹೋವ ದೇವರು ನಮ್ಮ ಸಂಗಡ ಇದ್ದರೆ, ಇದೆಲ್ಲಾ ನಮಗೆ ಏಕೆ ಸಂಭವಿಸಿತು? ಯೆಹೋವ ದೇವರು ನಮ್ಮನ್ನು ಈಜಿಪ್ಟಿನಿಂದ ಬರಮಾಡಲಿಲ್ಲವೋ? ಎಂದು ನಮ್ಮ ಪಿತೃಗಳು ನಮಗೆ ವಿವರಿಸಿ ಹೇಳಿದಂಥ ಅದ್ಭುತಗಳು ಎಲ್ಲಿ? ಈಗ ಯೆಹೋವ ದೇವರು ನಮ್ಮನ್ನು ಕೈಬಿಟ್ಟು, ಮಿದ್ಯಾನ್ಯರ ಕೈಗೆ ನಮ್ಮನ್ನು ಒಪ್ಪಿಸಿದ್ದಾರೆ,” ಎಂದನು.


ಅವರು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ಯೆಹೋವ ದೇವರು ಇಸ್ರಾಯೇಲ್ಯರ ಮೇಲೆ ಕೋಪವುಳ್ಳವರಾಗಿ ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಮಾರಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು