Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:10 - ಕನ್ನಡ ಸಮಕಾಲಿಕ ಅನುವಾದ

10 ‘ನಾನೇ ನಿಮ್ಮ ದೇವರಾದ ಯೆಹೋವ ದೇವರು. ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡಬೇಡಿರಿ,’ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಸ್ವರವನ್ನು ಕೇಳದೆ ಹೋದಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ, ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುತ್ತಿದ್ದಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಆಜ್ಞಾಪಿಸಿದ್ದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯೆ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆ. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ ಎಂಬದೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ನಾನು ನಿಮಗೆ, ‘ಯೆಹೋವನಾದ ನಾನೇ ನಿಮ್ಮ ದೇವರು! ಅಮೋರಿಯರ ಪ್ರದೇಶದಲ್ಲಿದ್ದರೂ ಅವರ ಸುಳ್ಳುದೇವರುಗಳನ್ನು ನೀವು ಪೂಜಿಸಕೂಡದು ಎಂದು ಹೇಳಿದ್ದೆ.’ ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:10
23 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: ಬೇರೆ ಜನಾಂಗಗಳ ಆಚರಣೆಗಳನ್ನು ಅನುಸರಿಸಬೇಡಿರಿ. ಅವರು ಆಕಾಶದ ಗುರುತುಗಳಿಗೆ ಹೆದರುತ್ತಾರೆ. ನೀವು ಅವುಗಳಿಗೆ ಹೆದರಬೇಡಿರಿ.


ಯೆಹೋವ ದೇವರು ಹೇಳುವುದೇನೆಂದರೆ, “ನಾನು ಅವರ ಮುಂದೆ ಇಟ್ಟ ನನ್ನ ನಿಯಮವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ,


ಏಕೆಂದರೆ ಅವರು ಯೆಹೋವ ದೇವರ ಮಾತಿಗೆ ಕಿವಿಗೊಡಲಿಲ್ಲ. ಹೀಗೆ ಅವರು ಈಜಿಪ್ಟಿಗೆ ಹೋಗಿ ತಹಪನೇಸಿಗೆ ಬಂದರು.


ಈ ಪ್ರಕಾರ ಕಾರೇಹನ ಮಗ ಯೋಹಾನಾನನೂ, ಸೈನ್ಯಾಧಿಪತಿಗಳೆಲ್ಲರೂ, ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ, ಯೆಹೋವ ದೇವರ ಮಾತಿಗೆ ಕಿವಿಗೊಡಲಿಲ್ಲ.


ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಶಬ್ದವನ್ನಾದರೂ ಅವರು ಯಾವುದರ ವಿಷಯವಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೋ ಅದರಲ್ಲಿ ಯಾವುದನ್ನಾದರೂ ಕೇಳಲಿಲ್ಲ.


ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ. ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ. ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ. ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ.”


ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, ಒಂದೊಂದು ಹಸುರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


‘ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ, ಅವರ ಬಲಿಪೀಠಗಳನ್ನು ಕೆಡಿವಿಬಿಡಿರಿ,’ ಎಂದು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಏಕೆ ಮಾಡಿದಿರಿ?


ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.


ಆದರೆ ಇಸ್ರಾಯೇಲರಲ್ಲಿ ಎಲ್ಲರೂ ಸುವಾರ್ತೆಯನ್ನು ಸ್ವೀಕರಿಸಲಿಲ್ಲ. ಏಕೆಂದರೆ, “ಕರ್ತನೇ, ನಮ್ಮ ಸಂದೇಶವನ್ನು ಯಾರು ನಂಬಿದರು?” ಎಂದು ಯೆಶಾಯ ಪ್ರವಾದಿಯು ಹೇಳುತ್ತಾನೆ.


ಅವಳು ಯಾರಿಗೂ ವಿಧೇಯಳಾಗಲಿಲ್ಲ; ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ; ಯೆಹೋವ ದೇವರಲ್ಲಿ ಭರವಸೆ ಇಡಲಿಲ್ಲ; ತನ್ನ ದೇವರ ಸಮೀಪಕ್ಕೆ ಬರಲಿಲ್ಲ.


ನನ್ನ ಬೋಧಕರ ಸ್ವರಕ್ಕೆ ನಾನು ವಿಧೇಯನಾಗದೆ ಹೋದೆ. ನನ್ನ ಉಪದೇಶಕರಿಗೆ ನಾನು ಕಿವಿಗೊಡದೆ ಹೋದೆ.


ಅವರು ಯೆಹೋವ ದೇವರಿಗೆ ಆರಾಧನೆ ಮಾಡಿದರು. ಆದರೂ ಅವರು ಬಿಟ್ಟುಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳನ್ನು ಸಹ ಸೇವಿಸಿದರು.


ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.


ನಿಮ್ಮನ್ನು ಈಜಿಪ್ಟಿನವರ ಕೈಯಿಂದ ತಪ್ಪಿಸಿ, ಅವರನ್ನು ನಿಮ್ಮ ಮುಂದೆ ಹೊರಗೆ ಹಾಕಿ, ಅವರ ದೇಶವನ್ನು ನಿಮಗೆ ಕೊಟ್ಟೆನು.


ಇಸ್ರಾಯೇಲರನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಇದೆಲ್ಲವೂ ಆಯಿತು. ಅವರು ಬೇರೆ ದೇವರುಗಳನ್ನು ಆರಾಧಿಸಿದರು.


ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಪ್ಪಂದವನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವುದು.


ಏಕೆಂದರೆ, ‘ರೋಷವುಳ್ಳವನು,’ ಎಂದು ಹೆಸರುಳ್ಳ ಯೆಹೋವ ದೇವರು ರೋಷವುಳ್ಳ ದೇವರಾಗಿರುವುದರಿಂದ ನೀನು ಬೇರೆ ದೇವರುಗಳನ್ನು ಆರಾಧಿಸಬಾರದು.


“ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ, ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ಮೋಶೆಯ ಎಲ್ಲಾ ನಿಯಮದ ಪ್ರಕಾರ ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳಿರಿ,” ಎಂದು ಯೆಹೋವ ದೇವರು ಸಮಸ್ತ ಪ್ರವಾದಿಗಳ ಮುಖಾಂತರವಾಗಿಯೂ, ಸಮಸ್ತ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ, ಯೆಹೂದಕ್ಕೂ ಎಚ್ಚರಿಕೆ ಕೊಟ್ಟಿದ್ದರು.


“ನೀವು ಅವರನ್ನು ನಿಮ್ಮ ನಿಯಮಕ್ಕೆ ಮರಳಿ ಬರುವ ಹಾಗೆ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಗರ್ವಪಟ್ಟು, ನಿಮ್ಮ ಆಜ್ಞೆಗಳನ್ನು ಅನುಸರಿಸದೆ ಹೋದರು. ನಿಮ್ಮ ವಾಕ್ಯಗಳನ್ನು ಕೈಗೊಳ್ಳುವುದರಿಂದ ಮನುಷ್ಯರು ಬದುಕುವರು ಎಂಬುದನ್ನು ಅವರು ತಿಳಿದಿದ್ದರೂ, ಆ ನಿಮ್ಮ ವಾಕ್ಯಗಳಿಗೆ ವಿರೋಧವಾಗಿ ಪಾಪಮಾಡಿ, ತಮ್ಮ ಹೃದಯವನ್ನು ಕಠಿಣಪಡಿಸಿಕೊಂಡು ನಿಮ್ಮ ಮಾತನ್ನು ಕೇಳದೆ ಹೋದರು.


ಆದರೆ ಅವರು ವಿಧೇಯರಾಗಲಿಲ್ಲ, ಕಿವಿಗೊಟ್ಟು ಕೇಳಲಿಲ್ಲ. ಆದರೆ ವಿಧೇಯರಾಗದ ಹಾಗೆಯೂ, ಉಪದೇಶ ಹೊಂದದ ಹಾಗೆಯೂ ಹಟಮಾರಿಯಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು