Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:14 - ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ಅವನನ್ನು ದೃಷ್ಟಿಸಿ ನೋಡಿ, “ನಿನಗಿರುವ ಈ ಶಕ್ತಿಯಲ್ಲಿ ಹೋಗು, ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸುವೆ; ನಾನು ನಿನ್ನನ್ನು ಕಳುಹಿಸಲಿಲ್ಲವೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನು ಅವನನ್ನು ಚೆನ್ನಾಗಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ನಿನ್ನ ಈ ಬಲದಿಂದ ಇಸ್ರಾಯೇಲ್ಯರನ್ನು ಮಿದ್ಯಾನ್ಯರಿಂದ ಬಿಡಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರ ಅವನನ್ನು ದಿಟ್ಟಿಸಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಯೇಲರನ್ನು ಮಿದ್ಯಾನ್ಯರಿಂದ ಬಿಡಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಅವನನ್ನು ಚೆನ್ನಾಗಿ ನೋಡಿ - ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಾಯೇಲ್ಯರನ್ನು ವಿುದ್ಯಾನ್ಯರಿಂದ ಬಿಡಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಗಿದ್ಯೋನನ ಕಡೆಗೆ ತಿರುಗಿ, “ನಿನ್ನ ಬಲವನ್ನು ಉಪಯೋಗಿಸು. ಹೋಗು, ಮಿದ್ಯಾನ್ಯರಿಂದ ಇಸ್ರೇಲರನ್ನು ರಕ್ಷಿಸು. ನಾನು ಅವರನ್ನು ರಕ್ಷಿಸುವುದಕ್ಕಾಗಿ ನಿನ್ನನ್ನು ಕಳುಹಿಸುತ್ತಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:14
10 ತಿಳಿವುಗಳ ಹೋಲಿಕೆ  

ಬೆಂಕಿಯ ಶಕ್ತಿಯನ್ನು ಆರಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ಬಲಹೀನತೆಯಿಂದ ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರರ ಸೈನ್ಯಗಳನ್ನು ಓಡಿಸಿಬಿಟ್ಟರು,


ಆಗ ಯೆಹೋವ ದೇವರು ಯೆರುಬ್ಬಾಳನನ್ನೂ, ಬಾರಾಕನನ್ನೂ, ಯೆಫ್ತಾಹನನ್ನೂ, ಸಮುಯೇಲನನ್ನೂ ಕಳುಹಿಸಿ, ನಿಮ್ಮ ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರುಗಳ ಕೈಯಿಂದ ಬಿಡಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.


ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವಮನ ಮಗ ಬಾರಾಕನನ್ನು ಕರೆಯಿಸಿ ಅವನಿಗೆ, “ಇಸ್ರಾಯೇಲ್ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದೇನೆಂದರೆ, ‘ನೀನು ನಫ್ತಾಲಿಯರಲ್ಲಿಯು, ಜೆಬುಲೂನರಲ್ಲಿಯು ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.


ಇನ್ನೂ ಏನು ಹೇಳಬೇಕು? ಗಿಡಿಯೋನ್, ಬಾರಾಕ್, ಸಂಸೋನ್, ಎಪ್ತಾಹ, ದಾವೀದ, ಸಮುಯೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವುದಕ್ಕೆ ನನಗೆ ಸಮಯ ಸಾಲದು.


ಯೆಹೋವ ದೇವರ ದೂತನು ಬಂದು ಅಬೀಯೆಜೆರನಾದ ಯೋವಾಷನಿಗೆ ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷಿಯ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.


ಗಿದ್ಯೋನನು ದೇವರಿಗೆ, “ನೀವು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸುವಿರಿಯಾದರೆ,


ಯೆಹೋವ ದೇವರ ದೂತನು ಆ ಸ್ತ್ರೀಗೆ ಪ್ರತ್ಯಕ್ಷವಾಗಿ ಅವಳಿಗೆ, “ಇಗೋ, ನೀನು ಮಕ್ಕಳನ್ನು ಹೆರದೆ ಬಂಜೆಯಾಗಿದ್ದೀಯೆ. ಆದರೆ ನೀನು ಗರ್ಭಧರಿಸಿ ಒಬ್ಬ ಮಗನನ್ನು ಹೆರುವೆ.


ಆದ್ದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲರಾದ ನನ್ನ ಜನರನ್ನು ನೀನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಬೇಕು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು