Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:15 - ಕನ್ನಡ ಸಮಕಾಲಿಕ ಅನುವಾದ

15 ಅದಕ್ಕವನು ಅವರಿಗೆ, “ನನ್ನ ಒಡೆಯನೇ, ಕ್ಷಮಿಸಿರಿ ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು. ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಗಿದ್ಯೋನನು ಆತನಿಗೆ, “ಕರ್ತನೇ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಗಿದ್ಯೋನನು, “ಸ್ವಾಮೀ, ನಾನು ಇಸ್ರಯೇಲರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆ ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಗಿದ್ಯೋನನು ಆತನಿಗೆ - ಸ್ವಾಮೀ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅದಕ್ಕೆ ಗಿದ್ಯೋನನು, “ಸ್ವಾಮೀ, ಮನಸ್ಸೆ ಕುಲದಲ್ಲಿ ನನ್ನ ಕುಟುಂಬವು ಕೇವಲ ಅಲ್ಪವಾದದ್ದು. ನನ್ನ ಕುಟುಂಬದಲ್ಲಿ ನಾನು ಎಲ್ಲರಿಗಿಂತ ಚಿಕ್ಕವನು. ನಾನು ಇಸ್ರೇಲರನ್ನು ರಕ್ಷಿಸಲು ಹೇಗೆ ಸಾಧ್ಯ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:15
13 ತಿಳಿವುಗಳ ಹೋಲಿಕೆ  

ಸೌಲನು ಅದಕ್ಕೆ, “ಆದರೆ ನಾನು ಇಸ್ರಾಯೇಲನ ಸಣ್ಣ ಗೋತ್ರವಾದ ಬೆನ್ಯಾಮೀನನು ನಾನಲ್ಲವೋ, ಬೆನ್ಯಾಮೀನನ ಗೋತ್ರದಲ್ಲಿ ನನ್ನ ವಂಶವು ಸಣ್ಣದಾದದ್ದಲ್ಲವೋ? ಇಂಥ ಸಂಗತಿಯನ್ನು ನನಗೇಕೆ ಹೇಳುತ್ತೀ?” ಎಂದನು.


ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗಿ, ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತರುವುದಕ್ಕೆ ನಾನು ಎಷ್ಟರವನು?” ಎಂದನು.


ಮೋಶೆಯು ಯೆಹೋವ ದೇವರಿಗೆ, “ಸ್ವಾಮಿ, ನನ್ನನ್ನು ಕ್ಷಮಿಸಿರಿ, ನಾನು ಮೊದಲಿನಿಂದಲೂ ನೀವು ನಿಮ್ಮ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ,” ಎಂದನು.


ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ ನಾನು ಮಾತು ಬಲ್ಲವನಲ್ಲ, ನಾನು ಚಿಕ್ಕವನು,” ಎಂದೆನು.


ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ


ನಾನಾದರೋ ಅಪೊಸ್ತಲರಲ್ಲಿ ಕನಿಷ್ಠನು, ಅಪೊಸ್ತಲನೆನಿಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ, ಏಕೆಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿದೆನು.


ಮರಿಯಳು ಆ ದೇವದೂತನಿಗೆ, “ಇದು ಹೇಗಾಗುವುದು, ನಾನು ಕನ್ಯೆ?” ಎಂದಳು.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ಆದ್ದರಿಂದ ಯೆಹೋವ ದೇವರು ಬಾಬಿಲೋನಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ಅವರು ಬಾಬಿಲೋನಿಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ; ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ಖಂಡಿತವಾಗಿ, ಅವುಗಳ ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.


ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು, “ನಾನು ದರಿದ್ರನೂ ಅಲ್ಪನೂ ಆಗಿರುವಾಗ, ನಾನು ಅರಸನಿಗೆ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿಯೆಂದು ನೆನಸುತ್ತೀರೋ?” ಎಂದನು.


ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.


ಯೆಹೋವ ದೇವರ ದೂತನು ಬಂದು ಅಬೀಯೆಜೆರನಾದ ಯೋವಾಷನಿಗೆ ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷಿಯ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು