Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:25 - ಕನ್ನಡ ಸಮಕಾಲಿಕ ಅನುವಾದ

25 ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ, “ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೆಯದಾದ ಏಳು ವರ್ಷದ ಎರಡನೆಯ ಹೋರಿಯನ್ನು ತೆಗೆದುಕೊಂಡುಹೋಗಿ, ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ, ಅದರ ಸಮೀಪದಲ್ಲಿರುವ ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದೇ ದಿನ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ, ಏಳು ವರ್ಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡು ಹೋಗಿ ನಿನ್ನ ತಂದೆಯು ಕಟ್ಟಿರುವ ಬಾಳನ ಯಜ್ಞವೇದಿಯನ್ನು ಕೆಡವಿ, ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹಸ್ತಂಭವನ್ನು ಕಡಿದುಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅದೇ ದಿನ ರಾತ್ರಿ ಸರ್ವೇಶ್ವರ ಅವನಿಗೆ, “ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ ಏಳು ವರ್ಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡು ಹೋಗಿ ನಿನ್ನ ತಂದೆ ಕಟ್ಟಿರುವ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹಸ್ತಂಭವನ್ನು ಕಡಿದುಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದೇ ದಿನ ರಾತ್ರಿಯಲ್ಲಿ ಯೆಹೋವನು ಅವನಿಗೆ - ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ ಏಳು ವರುಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡುಹೋಗಿ ನಿನ್ನ ತಂದೆಯು ಕಟ್ಟಿರುವ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹ ಸ್ತಂಭವನ್ನು ಕಡಿದುಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅದೇ ರಾತ್ರಿ ಯೆಹೋವನು ಗಿದ್ಯೋನನೊಂದಿಗೆ ಮಾತನಾಡಿ, “ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನು ಮತ್ತು ಏಳು ವರ್ಷದ ಹೋರಿಯನ್ನು ತೆಗೆದುಕೊಂಡು ಹೋಗಿ ನಿನ್ನ ತಂದೆಯು ಸುಳ್ಳುದೇವರಾದ ಬಾಳನಿಗೆ ಕಟ್ಟಿರುವ ಯಜ್ಞವೇದಿಕೆಯನ್ನು ಕೆಡವಿಬಿಡು; ಅದರ ಬಳಿಯಲ್ಲಿರುವ ಅಶೇರ ಎಂಬ ವಿಗ್ರಹಸ್ತಂಭವನ್ನು ಕಡಿದುಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:25
14 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತು, ಬಾಳನನ್ನೂ ಅಶೇರನನ್ನೂ ಸೇವಿಸಿದರು.


ಆದರೆ ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


ಪೇತ್ರ ಮತ್ತು ಇತರ ಅಪೊಸ್ತಲರು ಉತ್ತರವಾಗಿ, “ನಾವು ಮನುಷ್ಯರಿಗೆ ವಿಧೇಯರಾಗಿರುವುದಕ್ಕಿಂತ ದೇವರಿಗೆ ವಿಧೇಯರಾಗಿರಬೇಕಲ್ಲ!


“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.


ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.


ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ.


ದೋಷರಹಿತ ಮಾರ್ಗದಲ್ಲಿ ನಡೆಯಲು ಜಾಗರೂಕನಾಗಿರುವೆನು; ನೀವು ಯಾವಾಗ ನನ್ನ ಬಳಿಗೆ ಬರುವಿರಿ? ನಾನು ನಿರ್ದೋಷ ಹೃದಯದಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.


ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರಮಾಡಿ, ಸರ್ವಶಕ್ತರ ಕಡೆಗೆ ನೀನು ತಿರುಗಿಕೊಂಡರೆ, ನೀನು ಪುನಃಸ್ಥಾಪಿತವಾಗುವೆ.


ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಅವರ ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ನೀವು ಅವರಿಗೆ ಹೀಗೆ ಮಾಡತಕ್ಕದ್ದು.


ಆಗ ಯಾಕೋಬನು ತನ್ನ ಮನೆಯವರಿಗೂ, ತನ್ನ ಸಂಗಡ ಇದ್ದವರೆಲ್ಲರಿಗೂ, “ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ, ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ.


ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟತನ ಮಾಡಿ, ಬಾಳನನ್ನು ಸೇವಿಸಿ,


ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಆ ಎರಡನೆಯ ಹೋರಿಯನ್ನು ತಂದು, ನೀನು ಕಡಿದುಹಾಕಿದ ಅಶೇರ ಸ್ತಂಭವನ್ನು ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು