Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:30 - ಕನ್ನಡ ಸಮಕಾಲಿಕ ಅನುವಾದ

30 ಆ ಊರಿನವರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ, ಅವನು ಸಾಯಬೇಕು. ಏಕೆಂದರೆ ಬಾಳನ ಬಲಿಪೀಠವನ್ನು ಕೆಡವಿ, ಅದರ ಬಳಿಯಲ್ಲಿದ್ದ ಅಶೇರ ಸ್ತಂಭವನ್ನು ಕಡಿದುಹಾಕಿದನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ; ಅವನು ಸಾಯಬೇಕು; ಯಾಕೆಂದರೆ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ; ಅವನು ಸಾಯಬೇಕು; ಏಕೆಂದರೆ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆ ಜನರು ಯೋವಾಷನಿಗೆ - ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ; ಅವನು ಸಾಯಬೇಕು; ಯಾಕಂದರೆ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ಕಡಿದು ಹಾಕಿದ್ದಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಗರದ ಜನರು ಯೋವಾಷನಲ್ಲಿಗೆ ಬಂದು ಯೋವಾಷನಿಗೆ, “ನೀನು ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ. ಅವನು ಬಾಳನ ಯಜ್ಞವೇದಿಕೆಯನ್ನು ಕೆಡವಿದ್ದಾನೆ. ಆ ಯಜ್ಞವೇದಿಕೆಯ ಪಕ್ಕದಲ್ಲಿದ್ದ ಅಶೇರಸ್ತಂಭವನ್ನು ಕಡಿದುಹಾಕಿದ್ದಾನೆ. ಅವನನ್ನು ನಾವು ಕೊಂದು ಬಿಡುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:30
7 ತಿಳಿವುಗಳ ಹೋಲಿಕೆ  

ಆಸಕ್ತಿಯನ್ನು ನೋಡಿದರೆ, ನಾನು ಸಭೆಯ ಹಿಂಸಕನು; ಮೋಶೆಯ ನಿಯಮದಲ್ಲಿರುವ ನೀತಿಯ ಅನುಸಾರವಾಗಿ ನಾನು ನಿರ್ದೋಷಿ.


“ನಜರೇತಿನ ಯೇಸುವಿನ ಹೆಸರನ್ನು ವಿರೋಧಿಸಲು ಅನೇಕ ಸಂಗತಿಗಳನ್ನು ಮಾಡಬೇಕೆಂದು ನಾನು ಸಹ ಒಮ್ಮೆ ಯೋಚಿಸಿಕೊಂಡಿದ್ದೆನು.


ಜನರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು. ಆದರೆ ನಿಮ್ಮನ್ನು ಕೊಲ್ಲುವವರು ದೇವರಿಗೆ ಸೇವೆ ಸಲ್ಲಿಸುತ್ತಾರೆಂದು ಭಾವಿಸುವ ಸಮಯ ಬರುತ್ತದೆ.


ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿಹೋಗುವುದು; ಏಕೆಂದರೆ ಅದು ವಿಗ್ರಹಗಳ ದೇಶವೇ, ಅವರು ಭಯಂಕರವಾದ ವಿಗ್ರಹಗಳಿಂದ ಹುಚ್ಚರಾದರು.


ಆಗ ಯಾಜಕರೂ, ಪ್ರವಾದಿಗಳೂ, ಅಧಿಕಾರಿಗಳಿಗೂ, ಜನರೆಲ್ಲರಿಗೂ, “ಈ ಮನುಷ್ಯನು ಮರಣಕ್ಕೆ ತಕ್ಕವನು. ಏಕೆಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ, ಇವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ,” ಎಂದರು.


ಆಗ ಅವರು ಒಬ್ಬರಿಗೊಬ್ಬರು, “ಈ ಕಾರ್ಯವನ್ನು ಮಾಡಿದವನ್ಯಾರು?” ಎಂದರು. ವಿಚಾರಿಸಿ ಕೇಳಿದಾಗ, ಅವರು, “ಯೋವಾಷನ ಮಗ ಗಿದ್ಯೋನನು ಈ ಕಾರ್ಯ ಮಾಡಿದನು,” ಎಂದರು.


ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ, “ನೀವು ಬಾಳನಿಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸುವಿರೋ? ಅವನಿಗಾಗಿ ವ್ಯಾಜ್ಯ ಮಾಡುವವನು ಈ ಉದಯಕಾಲದಲ್ಲೇ ಹತನಾಗಲಿ. ಅವನು ದೇವರಾದರೆ ತನ್ನ ಬಲಿಪೀಠವನ್ನು ಕೆಡವಿದ್ದರಿಂದ, ಅವನು ತನ್ನನ್ನು ರಕ್ಷಿಸಿಕೊಳ್ಳಲಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು