Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:32 - ಕನ್ನಡ ಸಮಕಾಲಿಕ ಅನುವಾದ

32 ಗಿದ್ಯೋನನು ಬಾಳನ ಬಲಿಪೀಠವನ್ನು ಕೆಡವಿದ ಕಾರಣ ಅವರು ಆ ದಿವಸದಲ್ಲಿ, “ಬಾಳನೇ ವ್ಯಾಜ್ಯವಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆ ದಿನದಲ್ಲಿ ಅವನು, “ಬಾಳನು ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟವನೊಡನೆ ತಾನೇ ವ್ಯಾಜ್ಯಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆ ದಿವಸದಲ್ಲಿ ಅವನು, “ಬಾಳನು ತನ್ನ ಬಲಿಪೀಠವನ್ನು ಕೆಡವಿದವನೊಡನೆ ತಾನೇ ವ್ಯಾಜ್ಯ ಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ‘ಯೆರುಬ್ಬಾಳ’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆ ದಿವಸದಲ್ಲಿ ಅವನು - ಬಾಳನು ತನ್ನ ಯಜ್ಞವೇದಿಯನ್ನು ಕೆಡವಿದವನೊಡನೆ ತಾನೇ ವ್ಯಾಜ್ಯವಾಡಲಿ ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳನೆಂಬ ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೋವಾಷನು, “ಗಿದ್ಯೋನನು ಬಾಳನ ಯಜ್ಞವೇದಿಕೆಯನ್ನು ಕೆಡವಿದ ಪಕ್ಷದಲ್ಲಿ ಬಾಳನು ಅವನೊಡನೆ ವಾದಿಸಲಿ” ಎಂದು ಹೇಳಿದನು. ಅಂದು ಯೋವಾಷನು ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೊಸ ಹೆಸರನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:32
7 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಯೆರುಬ್ಬಾಳನನ್ನೂ, ಬಾರಾಕನನ್ನೂ, ಯೆಫ್ತಾಹನನ್ನೂ, ಸಮುಯೇಲನನ್ನೂ ಕಳುಹಿಸಿ, ನಿಮ್ಮ ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರುಗಳ ಕೈಯಿಂದ ಬಿಡಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.


ಅವರು ಗೋಡೆಯಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗ ಅಬೀಮೆಲೆಕನನ್ನು ಕೊಂದವರ‍್ಯಾರು? ತೆಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ, ಅವನು ಸತ್ತನಲ್ಲವೋ? ನೀವು ಗೋಡೆಗೆ ಅಷ್ಟು ಸಮೀಪ ಏಕೆ ಹೋದಿರಿ?’ ಎಂದು ಕೇಳಿದರೆ; ಆಗ ನೀನು ಅವನಿಗೆ, ನಿಮ್ಮ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು,” ಎಂದನು.


ಗಿದ್ಯೋನನೆಂಬ ಯೆರುಬ್ಬಾಳನೂ, ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು, ಹೆರೋದಿನ ಬಾವಿಯ ಬಳಿಯಲ್ಲಿ ದಂಡಿಳಿಸಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.


“ನಾನು ಮರುಭೂಮಿಯಲ್ಲಿ ದ್ರಾಕ್ಷಾಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು. ಆದರೆ ಅವರು ಬಾಳ್ ಪೆಯೋರನ ಹತ್ತಿರ ಬಂದು ನಾಚಿಕೆಯ ವಿಗ್ರಹಕ್ಕೆ ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ಪ್ರೀತಿಸಿದ ವಿಗ್ರಹಗಳ ಹಾಗೆ ಅಸಹ್ಯರಾದರು.


ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು. ಯೆರೂಸಲೇಮಿಗೆ ಎಷ್ಟು ಬೀದಿಗಳೋ, ಅಷ್ಟು ಬಲಿಪೀಠಗಳನ್ನು ನಾಚಿಗೆಗೆ ಎಂದರೆ, ಅಷ್ಟು ಬಲಿಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವುದಕ್ಕೆ ಇಟ್ಟಿದ್ದೀ.’


ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ, “ನೀವು ಬಾಳನಿಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸುವಿರೋ? ಅವನಿಗಾಗಿ ವ್ಯಾಜ್ಯ ಮಾಡುವವನು ಈ ಉದಯಕಾಲದಲ್ಲೇ ಹತನಾಗಲಿ. ಅವನು ದೇವರಾದರೆ ತನ್ನ ಬಲಿಪೀಠವನ್ನು ಕೆಡವಿದ್ದರಿಂದ, ಅವನು ತನ್ನನ್ನು ರಕ್ಷಿಸಿಕೊಳ್ಳಲಿ” ಎಂದನು.


ಗಿದ್ಯೋನನೆಂಬ ಯೆರುಬ್ಬಾಳನು ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ದಯೆಯನ್ನು ಅವನ ಮನೆಗೆ ಮಾಡದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು