Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:39 - ಕನ್ನಡ ಸಮಕಾಲಿಕ ಅನುವಾದ

39 ಗಿದ್ಯೋನನು ದೇವರಿಗೆ, “ನಾನು ಇನ್ನೊಂದು ಸಾರಿ ಮಾತನಾಡುವುದರಿಂದ ನಿಮ್ಮ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆಯ ತುಪ್ಪಟದಿಂದ ಇನ್ನೊಂದು ಸಾರಿ ನಾನು ನಿಮ್ಮನ್ನು ಶೋಧಿಸುವೆನು. ತುಪ್ಪಟ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವನು ತಿರುಗಿ ದೇವರಿಗೆ, “ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತನಾಡುತ್ತೇನೆ. ಇನ್ನು ಒಂದೇ ಸಾರಿ ಈ ಉಣ್ಣೆಯಿಂದ ನಿನ್ನನ್ನು ಪರೀಕ್ಷಿಸುವುದಕ್ಕೆ ಅಪ್ಪಣೆಯಾಗಲಿ; ಈ ಉಣ್ಣೆ ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿ ಬಿದ್ದಿರಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅವನು ಪುನಃ ದೇವರಿಗೆ, “ಸ್ವಾಮೀ, ಸಿಟ್ಟಾಗಬೇಡಿ; ಇನ್ನೊಂದು ಸಾರಿ ಮಾತಾಡುತ್ತೇನೆ. ಇನ್ನು ಒಂದೇ ಸಾರಿ ಈ ತುಪ್ಪಟದಿಂದ ನಿಮ್ಮನ್ನು ಪರೀಕ್ಷಿಸುವುದಕ್ಕೆ ಅಪ್ಪಣೆಯಾಗಲಿ; ಈ ತುಪ್ಪಟ ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿಬಿದ್ದಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವನು ತಿರಿಗಿ ದೇವರಿಗೆ - ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತಾಡುತ್ತೇನೆ. ಇನ್ನು ಒಂದೇ ಸಾರಿ ಈ ತುಪ್ಪಟದಿಂದ ನಿನ್ನನ್ನು ಪರೀಕ್ಷಿಸುವದಕ್ಕೆ ಅಪ್ಪಣೆಯಾಗಲಿ; ಈ ತುಪ್ಪಟವು ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿಬಿದ್ದಿರಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆಗ ಗಿದ್ಯೋನನು ದೇವರಿಗೆ, “ನನ್ನ ಮೇಲೆ ಕೋಪಿಸಿಕೊಳ್ಳಬೇಡ. ನಾನು ಇನ್ನೊಂದು ಸಾಕ್ಷ್ಯವನ್ನು ಕೇಳುತ್ತೇನೆ. ಇನ್ನೊಂದು ಸಲ ಕುರಿಯ ತುಪ್ಪಟದಿಂದ ನಿನ್ನನ್ನು ಪರೀಕ್ಷಿಸುತ್ತೇನೆ. ಈ ಸಲ, ಸುತ್ತಮುತ್ತಲಿನ ಭೂಮಿಯ ಮಂಜಿನಿಂದ ಹಸಿಯಾಗಿ, ಕುರಿಯ ತುಪ್ಪಟ ಮಾತ್ರ ಒಣಗಿರಲಿ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:39
14 ತಿಳಿವುಗಳ ಹೋಲಿಕೆ  

ಆಗ ಅವನು, “ಯೆಹೋವ ದೇವರೇ, ನಿಮಗೆ ಕೋಪಬಾರದೆ ಇರಲಿ. ಇನ್ನು ಒಂದೇ ಸಾರಿ ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಿದರೆ,” ಎಂದಾಗ, ದೇವರು, “ಹತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.


ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.


“ಆದ್ದರಿಂದ, ದೇವರ ರಾಜ್ಯವು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನರಿಗೆ ಕೊಡಲಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.


ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ.


ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ದಬ್ಬಲಾಗುವರು, ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಎಂದು ನಿಮಗೆ ಹೇಳುತ್ತೇನೆ,” ಎಂದರು.


“ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.


“ಆಗ ಕರ್ತ ಯೇಸುವು, ‘ಹೋಗು, ನಾನು ಯೆಹೂದ್ಯರಲ್ಲದವರ ಬಳಿಗೆ ನಿನ್ನನ್ನು ದೂರಪ್ರದೇಶಗಳಿಗೆ ಕಳುಹಿಸುವೆನು,’ ಎಂದು ನನಗೆ ಹೇಳಿದರು.”


ಅದು ಹಾಗೆಯೇ ಆಯಿತು. ಅವನು ಮರುದಿವಸ ಉದಯದಲ್ಲಿ ಎದ್ದು, ಉಣ್ಣೆಯ ತುಪ್ಪಟವನ್ನು ತೆಗೆದುಕೊಂಡು, ಅದರೊಳಗಿದ್ದ ಮಂಜಿನ ನೀರನ್ನು ಒಂದು ಬೋಗುಣಿಯ ತುಂಬಾ ಹಿಂಡಿದನು.


ಆ ರಾತ್ರಿ ದೇವರು ಹಾಗೆಯೇ ಮಾಡಿದರು. ತುಪ್ಪಟ ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿಬಿದ್ದಿತ್ತು.


ಅವನು, “ಯೆಹೋವ ದೇವರಿಗೆ ಕೋಪಬಾರದೆ ಇರಲಿ, ನಾನು ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಇದ್ದರೆ,” ಎಂದಾಗ, ದೇವರು, “ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ, ನಾಶಮಾಡುವುದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು