ನ್ಯಾಯಸ್ಥಾಪಕರು 6:4 - ಕನ್ನಡ ಸಮಕಾಲಿಕ ಅನುವಾದ4 ಗಾಜದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು, ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿ, ದನ, ಕತ್ತೆಗಳಾದರೂ ಉಳಿಯಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಗಾಜಾ ಪ್ರಾಂತ್ಯದವರೆಗಿದ್ದ ಎಲ್ಲಾ ಭೂಮಿಯ ಹುಟ್ಟುವಳಿಯನ್ನು ಹಾಳುಮಾಡಿಬಿಡುತ್ತಿದ್ದುದರಿಂದ ಇವರಿಗೆ ದವಸಧಾನ್ಯವಾಗಲಿ, ಕುರಿ, ದನ, ಕತ್ತೆಗಳಾಗಲಿ ಉಳಿಯಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಗಾಜಾ ಪ್ರಾಂತ್ಯದವರೆಗೆ ಭೂಮಿಯ ಫಲವನ್ನೆಲ್ಲ ನಾಶ ಮಾಡುತ್ತಿದ್ದರು. ಈ ಕಾರಣ ಇಸ್ರಯೇಲರಿಗೆ ದವಸಧಾನ್ಯವಾಗಲಿ, ಕುರಿದನಕತ್ತೆಗಳಾಗಲಿ ಉಳಿಯುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಗಾಜಾ ಪ್ರಾಂತದವರೆಗಿದ್ದ ಎಲ್ಲಾ ಭೂವಿುಯ ಹುಟ್ಟುವಳಿಯನ್ನು ಹಾಳುಮಾಡಿಬಿಟ್ಟದರಿಂದ ಇವರಿಗೆ ದವಸ ಧಾನ್ಯವಾಗಲಿ ಕುರಿದನಕತ್ತೆಗಳಾಗಲಿ ಉಳಿಯಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ಈ ಪ್ರದೇಶದಲ್ಲಿ ಪಾಳೆಯಮಾಡಿಕೊಂಡು ಇಸ್ರೇಲರ ಬೆಳೆಗಳನ್ನು ನಾಶಪಡಿಸುತ್ತಿದ್ದರು. ಅವರು ಗಾಜಾ ನಗರದವರೆಗಿರುವ ಪ್ರದೇಶದಲ್ಲಿನ ಬೆಳೆಗಳನ್ನು ಹಾಳುಮಾಡಿದರು. ಅವರು ಇಸ್ರೇಲರ ಆಹಾರಕ್ಕಾಗಿ ಏನೂ ಉಳಿಸಲಿಲ್ಲ. ಅವರು ಕುರಿ, ದನ, ಕತ್ತೆಗಳನ್ನು ಸಹ ಉಳಿಸಲಿಲ್ಲ. ಅಧ್ಯಾಯವನ್ನು ನೋಡಿ |