ನ್ಯಾಯಸ್ಥಾಪಕರು 6:5 - ಕನ್ನಡ ಸಮಕಾಲಿಕ ಅನುವಾದ5 ಅವರು ತಮ್ಮ ಪಶುಗಳ ಡೇರೆಗಳ ಸಹಿತವಾಗಿ ಮಿಡತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ, ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಅವರು ನಾಡನ್ನು ನಾಶಮಾಡುವುದಕ್ಕೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ಮಿಡತೆಗಳಂತೆ ಗುಂಪುಗುಂಪಾಗಿ ಬರುತ್ತಿದ್ದರು. ಅವರೂ ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಮೇತ ಮಿಡತೆಗಳಂತೆ ಗುಂಪು ಗುಂಪಾಗಿ ಬರುತ್ತಿದ್ದರು. ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪುಗಳಿಂದ ನಾಡೆಲ್ಲ ನಾಶವಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ವಿುಡಿತೆಗಳಂತೆ ಗುಂಪುಗುಂಪಾಗಿ ಬಂದರು; ಅವರೂ ಅವರ ಒಂಟೆಗಳೂ ಅಸಂಖ್ಯ. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಮಿದ್ಯಾನ್ಯರು ಬಂದು ಈ ಪ್ರದೇಶದಲ್ಲಿ ಪಾಳೆಯ ಮಾಡಿಕೊಂಡರು. ಅವರು ತಮ್ಮ ಸಂಗಡ ತಮ್ಮ ಕುಟುಂಬದವರನ್ನೂ ಪಶುಗಳನ್ನೂ ತಂದರು. ಅವರು ಮಿಡತೆಗಳ ಗುಂಪಿನಂತೆ ಅಸಂಖ್ಯರಾಗಿದ್ದರು. ಅವರು ಮತ್ತು ಅವರ ಒಂಟೆಗಳು ಅತಿದೊಡ್ಡ ಪ್ರಮಾಣದಲ್ಲಿದ್ದು ಎಣಿಸಲು ಸಾಧ್ಯವಿರಲಿಲ್ಲ. ಇವರೆಲ್ಲರೂ ಇಸ್ರೇಲರ ಪ್ರದೇಶಕ್ಕೆ ನುಗ್ಗಿ ಹಾಳುಮಾಡಿದರು. ಅಧ್ಯಾಯವನ್ನು ನೋಡಿ |