Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:1 - ಕನ್ನಡ ಸಮಕಾಲಿಕ ಅನುವಾದ

1 ಗಿದ್ಯೋನನೆಂಬ ಯೆರುಬ್ಬಾಳನೂ, ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು, ಹೆರೋದಿನ ಬಾವಿಯ ಬಳಿಯಲ್ಲಿ ದಂಡಿಳಿಸಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆನಂತರ ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ, ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಬಿಡಾರ ಹಾಕಿಕೊಂಡರು. ಇವರ ಉತ್ತರದಿಕ್ಕಿನಲ್ಲಿ ಮೋರೆಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ‘ಯೆರುಬ್ಬಾಳ’ ಎನಿಸಿಕೊಂಡ ಗಿದ್ಯೋನನೂ ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟುಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು. ಇವರಿಗೆ ಉತ್ತರದಿಕ್ಕಿನಲ್ಲಿ ಮೋರೆ ಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟುಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಇಳುಕೊಂಡರು. ಇವರಿಗೆ ಉತ್ತರದಿಕ್ಕಿನಲ್ಲಿ ಮೋರೆ ಗುಡ್ಡದ ಹಿಂದಿನ ತಗ್ಗಿನಲ್ಲಿ ವಿುದ್ಯಾನ್ಯರ ದಂಡಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬೆಳಗಿನ ಜಾವ ಯೆರುಬ್ಬಾಳನು (ಗಿದ್ಯೋನನು) ಮತ್ತು ಅವನ ಎಲ್ಲಾ ಜನರು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು. ಮಿದ್ಯಾನ್ಯರು ಮೋರೆ ಎಂಬ ಬೆಟ್ಟದ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡರು. ಇದು ಗಿದ್ಯೋನ ಮತ್ತು ಅವನ ಜನರ ಉತ್ತರಕ್ಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:1
14 ತಿಳಿವುಗಳ ಹೋಲಿಕೆ  

ಗಿದ್ಯೋನನು ಬಾಳನ ಬಲಿಪೀಠವನ್ನು ಕೆಡವಿದ ಕಾರಣ ಅವರು ಆ ದಿವಸದಲ್ಲಿ, “ಬಾಳನೇ ವ್ಯಾಜ್ಯವಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆ ಎಂಬ ಮಹಾವೃಕ್ಷದವರೆಗೆ ಪ್ರಯಾಣಮಾಡಿದನು. ಆಗ ಕಾನಾನ್ಯರು ಆ ದೇಶದಲ್ಲಿ ಇದ್ದರು.


ಯೆಹೋಶುವನು ಮರುದಿನ ಬೆಳಿಗ್ಗೆ ಎದ್ದನು. ಯಾಜಕರು ಯೆಹೋವ ದೇವರ ಮಂಜೂಷವನ್ನು ತೆಗೆದುಕೊಂಡರು.


ಯೆಹೋಶುವನು ಬೆಳಿಗ್ಗೆ ಎದ್ದು, ಅವನೂ, ಇಸ್ರಾಯೇಲರೆಲ್ಲರೂ ಶಿಟ್ಟೀಮಿನಿಂದ ಪ್ರಯಾಣಮಾಡಿ, ಯೊರ್ದನ್ ನದಿ ಬಳಿಗೆ ಬಂದು, ದಾಟುವುದಕ್ಕಿಂತ ಮುಂಚೆ ಅಲ್ಲಿ ಇಳಿದುಕೊಂಡರು.


ಇವು ಯೊರ್ದನ್ ನದಿಯ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಅರಾಬಾ ಪ್ರದೇಶದಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬಯಲಿನೊಳಗೆ ಮೋರೆ ಎಂಬ ಮಹಾವೃಕ್ಷದ ಸಮೀಪ ವಾಸಮಾಡುವ ಕಾನಾನ್ಯರ ದೇಶದಲ್ಲಿ ಇರುತ್ತವೆ.


ಅಬ್ರಹಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಗೆ ತಡಿ ಕಟ್ಟಿ, ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗ ಇಸಾಕನನ್ನೂ, ದಹನಬಲಿಗಳಿಗಾಗಿ ಕಟ್ಟಿಗೆಗಳನ್ನೂ ತೆಗೆದುಕೊಂಡು, ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.


ಆ ರಾತ್ರಿ ದೇವರು ಹಾಗೆಯೇ ಮಾಡಿದರು. ತುಪ್ಪಟ ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿಬಿದ್ದಿತ್ತು.


ಯೋವಾಷನ ಮಗ ಯೆರುಬ್ಬಾಳನು ಹೋಗಿ ತನ್ನ ಸ್ವಂತ ಮನೆಯಲ್ಲಿ ವಾಸವಾಗಿದ್ದನು.


ಆಗ ಯೆಹೋವ ದೇವರು ಯೆರುಬ್ಬಾಳನನ್ನೂ, ಬಾರಾಕನನ್ನೂ, ಯೆಫ್ತಾಹನನ್ನೂ, ಸಮುಯೇಲನನ್ನೂ ಕಳುಹಿಸಿ, ನಿಮ್ಮ ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರುಗಳ ಕೈಯಿಂದ ಬಿಡಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.


ಹರೋದಿನವನಾದ ಶಮ್ಮನು; ಹರೋದಿನವನಾದ ಎಲೀಕನು;


ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡಿರಿ.


ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಒಟ್ಟಾಗಿ ಕೂಡಿ, ಯೊರ್ದನ್ ಹೊಳೆ ದಾಟಿ ಬಂದು, ಇಜ್ರೆಯೇಲ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಫಿಲಿಷ್ಟಿಯರು ತಮ್ಮ ಸಮಸ್ತ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿಕೊಂಡರು. ಹಾಗೆಯೇ ಇಸ್ರಾಯೇಲರು ಇಜ್ರೆಯೇಲ್ ಎಂಬ ಬುಗ್ಗೆಯ ಬಳಿಯಲ್ಲಿ ದಂಡಿಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು