ನ್ಯಾಯಸ್ಥಾಪಕರು 7:18 - ಕನ್ನಡ ಸಮಕಾಲಿಕ ಅನುವಾದ18 ನಾನೂ, ನನ್ನ ಸಂಗಡ ಇರುವವರೆಲ್ಲರೂ ತುತೂರಿಯನ್ನು ಊದುವಾಗ, ನೀವೆಲ್ಲರೂ ಪಾಳೆಯ ಸುತ್ತಲೂ, ಎಲ್ಲಾ ಕಡೆಯಲ್ಲಿಯೂ ತುತೂರಿಗಳನ್ನು ಊದಿ, ‘ಯೆಹೋವ ದೇವರಿಗಾಗಿ, ಗಿದ್ಯೋನನಿಗಾಗಿ,’ ಎಂದು ಕೂಗಿರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನೂ ನನ್ನ ಸಂಗಡ ಇದ್ದವರೂ ಕೊಂಬುಗಳನ್ನು ಊದಲು ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ, ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ ಎಂದು ಕೂಗಿರಿ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಾನೂ ನನ್ನ ಸಂಗಡಿಗರೂ ಕೊಂಬುಗಳನ್ನು ಊದುವಾಗ ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ, ‘ಸರ್ವೇಶ್ವರಗೆ ಜಯ, ಗಿದ್ಯೋನನಿಗೆ ಜಯ’ ಎಂದು ಕೂಗಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾನೂ ನನ್ನ ಸಂಗಡ ಇದ್ದವರೂ ಕೊಂಬುಗಳನ್ನು ಊದಲು ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ - ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ ಎಂದು ಕೂಗಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನೀವು ಶತ್ರುಗಳ ಪಾಳೆಯಕ್ಕೆ ಮುತ್ತಿಗೆ ಹಾಕಿರಿ. ನನ್ನ ಸಂಗಡವಿರುವ ಜನರು ತುತ್ತೂರಿಯನ್ನು ಊದುವರು. ನಾವು ನಮ್ಮ ತುತ್ತೂರಿಗಳನ್ನು ಊದಿದಾಗ ನೀವು ಸಹ ನಿಮ್ಮ ತುತ್ತೂರಿಗಳನ್ನು ಊದಿರಿ. ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ,’ ಎಂದು ಕೂಗಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |