ನ್ಯಾಯಸ್ಥಾಪಕರು 7:19 - ಕನ್ನಡ ಸಮಕಾಲಿಕ ಅನುವಾದ19 ಮಧ್ಯರಾತ್ರಿ ಆರಂಭದ ಜಾವದಲ್ಲಿ ಕಾವಲುಗಾರರನ್ನು ಬದಲಾಯಿಸಿದಾಗ, ಗಿದ್ಯೋನನೂ, ಅವನ ಸಂಗಡ ಇದ್ದ ನೂರು ಮಂದಿಯೂ ಪಾಳೆಯ ಹೊರಗೆ ಬಂದು, ತುತೂರಿಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ರಾತ್ರಿಯ ಎರಡನೆಯ ಜಾವದಲ್ಲಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ (ಶತ್ರುಗಳ) ಪಾಳೆಯದ ಅಂಚಿಗೆ ಬಂದು, ಕೊಂಬುಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮಧ್ಯರಾತ್ರಿ ಪ್ರಾರಂಭವಾಗುತ್ತಿದ್ದಂತೆ ಮೊದಲ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನು ಮತ್ತು ಅವನ ಸಂಗಡ ಇದ್ದ ನೂರುಮಂದಿ (ಶತ್ರುಗಳ) ಪಾಳೆಯದ ಅಂಚಿಗೆ ಬಂದು ಕೊಂಬುಗಳನ್ನು ಊದಿ, ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ರಾತ್ರಿಯ ಮಧ್ಯಯಾಮವು ಪ್ರಾರಂಭಿಸಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ [ಶತ್ರುಗಳ] ಪಾಳೆಯದ ಅಂಚಿಗೆ ಬಂದು ಕೊಂಬುಗಳನ್ನು ಊದಿ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಗಿದ್ಯೋನನು ಮತ್ತು ಅವನ ಜೊತೆಯಲ್ಲಿದ್ದ ನೂರು ಜನರು ಶತ್ರುಗಳ ಪಾಳೆಯದ ಬಳಿಗೆ ಹೋದರು. ಶತ್ರುಗಳ ಪಾಳೆಯದ ಕಾವಲುಗಾರರು ಬದಲಾದ ಕೂಡಲೆ ಅವರು ಅಲ್ಲಿಗೆ ಹೋಗಿದ್ದರು. ಆಗ ಮಧ್ಯರಾತ್ರಿಯಾಗಿತ್ತು. ಗಿದ್ಯೋನ ಮತ್ತು ಅವನ ಜನರು ತಮ್ಮ ತುತ್ತೂರಿಗಳನ್ನು ಊದಿದರು ಮತ್ತು ಮಡಕೆಗಳನ್ನು ಒಡೆದುಹಾಕಿದರು. ಅಧ್ಯಾಯವನ್ನು ನೋಡಿ |