Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:22 - ಕನ್ನಡ ಸಮಕಾಲಿಕ ಅನುವಾದ

22 ಮುನ್ನೂರು ಜನರು ತುತೂರಿಗಳನ್ನು ಊದುವಾಗ, ಯೆಹೋವ ದೇವರು ಪಾಳೆಯದಲ್ಲಿ ಎಲ್ಲೆಲ್ಲಿಯೂ ಒಬ್ಬನ ಖಡ್ಗವನ್ನು ಒಬ್ಬನ ಮೇಲೆ ಬರಮಾಡಿದರು. ಪಾಳೆಯ ಚೆರೇರಿನಲ್ಲಿರುವ ಬೇತ್ ಷಿಟ್ಟದವರೆಗೂ, ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾದ ಮೇರೆಯವರೆಗೂ ಓಡಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆ ಮುನ್ನೂರು ಮಂದಿ ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಸರ್ವೇಶ್ವರ ಮಾಡಿದರು. ಪಾಳೆಯದವರು ಚೇರೆರದ ದಾರಿಯಲ್ಲಿರುವ ಬೇತ್‍ಷೀಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಗಿದ್ಯೋನನ ಮುನ್ನೂರು ಜನರು ತಮ್ಮ ತುತ್ತೂರಿಗಳನ್ನು ಊದಿದ ಕೂಡಲೆ ಮಿದ್ಯಾನ್ಯರು ತಮ್ಮತಮ್ಮಲ್ಲಿಯೇ ಒಬ್ಬರನ್ನೊಬ್ಬರು ಕತ್ತಿಯಿಂದ ಇರಿದು ಕೊಲ್ಲುವಂತೆ ಯೆಹೋವನು ಮಾಡಿದನು. ಶತ್ರುಗಳ ಸೈನ್ಯವು ಚೆರೇರದ ದಾರಿಯಲ್ಲಿರುವ ಬೇತ್‌ಷಿಟ್ಟಿನವರೆಗೂ ಓಡಿಹೋಯಿತು. ಅವರು ಟಬ್ಬಾತಿನ ಬಳಿಯಲ್ಲಿರುವ ಅಬೇಲ್ಮೆಹೋಲಾ ನಗರದವರೆಗೂ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:22
18 ತಿಳಿವುಗಳ ಹೋಲಿಕೆ  

ಅಹೀಲೂದನ ಮಗ ಬಾಣಾ ಎಂಬವನು ತಾನಕ್, ಮೆಗಿದ್ದೋ, ಬೇತ್ ಷೆಯಾನಿನ ಎಲ್ಲಾ ಕಡೆಗಳಲ್ಲಿಯೂ ಆಳಿಕೆಮಾಡುತ್ತಿದ್ದನು. ಬೇತ್ ಶಾನ್ ಚಾರೆತಾನಿನ ಪಕ್ಕದಲ್ಲಿದ್ದ ಇಜ್ರೆಯೇಲ್ ಎಂಬ ಪಟ್ಟಣದ ಕೆಳಗಿತ್ತು. ಅವನ ಪ್ರಾಂತವು ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೆ ಯೊಕ್ಮೆಯಾಮಿನಲ್ಲಿ ಅಂತ್ಯಗೊಂಡಿತ್ತು.


ಅಮ್ಮೋನಿಯರು, ಮೋವಾಬ್ಯರು ಸೇಯೀರ್ ಪರ್ವತದ ನಿವಾಸಿಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯೀರನ ನಿವಾಸಿಗಳನ್ನು ಪೂರ್ಣವಾಗಿ ವಧಿಸಿದ ತರುವಾಯ, ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.


ಇದಲ್ಲದೆ ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಆಬೇಲ್ ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷನನ್ನು ನಿನಗೆ ಪ್ರತಿಯಾಗಿ ಪ್ರವಾದಿಯಾಗಿರಲು ಅಭಿಷೇಕಿಸು.


ಕೂಡಲೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತೂರಿಯ ಶಬ್ದವನ್ನು ಜನರು ಕೇಳಿ ಮಹಾಧ್ವನಿಯಿಂದ ಆರ್ಭಟಿಸಿದಾಗ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು. ಹೀಗೆ ಜನರಲ್ಲಿ ಪ್ರತಿಯೊಬ್ಬನು ಮುಂದೆ ನೇರವಾಗಿ ಒಳಗೆ ನುಗ್ಗಿದರು. ಆಗ ಪಟ್ಟಣವು ಅವರಿಗೆ ಸ್ವಾಧೀನವಾಯಿತು.


ಇದಲ್ಲದೆ ನಾನು ಈಜಿಪ್ಟಿನವನಿಗೆ ವಿರೋಧವಾಗಿ ಈಜಿಪ್ಟಿನವನನ್ನು ಎಬ್ಬಿಸುವೆನು. ಸಹೋದರನಿಗೆ ವಿರುದ್ಧವಾಗಿ ಸಹೋದರನೂ, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೊರಾಡುವವು.


ಏಕೆಂದರೆ ಅವನ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ, ಮಿದ್ಯಾನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀರಿ.


ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡಿರಿ.


ಏಳನೆಯ ಸಾರಿ ಯಾಜಕರು ತುತೂರಿಗಳನ್ನು ಊದುವಾಗ, ಯೆಹೋಶುವನು ಜನರಿಗೆ, “ಆರ್ಭಟಿಸಿರಿ! ಯೆಹೋವ ದೇವರು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾರೆ.


ಏಳುಮಂದಿ ಯಾಜಕರು ಹೊತ್ತುಕೊಂಡಿದ್ದ ಮಂಜೂಷದ ಮುಂದೆ ಟಗರುಗಳ ಏಳು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡು ಹೋಗಬೇಕು. ಆದರೆ ಅವರು ಏಳನೆಯ ದಿವಸ ಪಟ್ಟಣವನ್ನು ಏಳು ಸಾರಿ ಸುತ್ತಿ ಬರಬೇಕು. ಯಾಜಕರು ತುತೂರಿಗಳನ್ನು ಊದಬೇಕು.


ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ.


ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಮದುವೆಮಾಡಿಕೊಡುವ ಸಮಯ ಬಂದಾಗ, ಅವಳನ್ನು ಮೆಹೋಲದವನಾದ ಅದ್ರಿಯೇಲ್ ಎಂಬವನಿಗೆ ಕೊಟ್ಟು ಮದುವೆಮಾಡಿದನು.


ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಖಡ್ಗವನ್ನು ಕರೆಯುವೆನೆಂದೂ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರತಿಯೊಬ್ಬ ಮನುಷ್ಯನ ಖಡ್ಗವೂ ಅವನ ಸಹೋದರನಿಗೆ ವಿರೋಧವಾಗಿರುವುದು.


ನಮ್ಮನ್ನು ಚದುರಿಸಲು ಅವನ ಯುದ್ಧವೀರರು ಮುತ್ತಿಗೆ ಹಾಕಿದಾಗ, ಅವನ ಸ್ವಂತ ಭರ್ಜಿಯಿಂದಲೇ ಅವನ ತಲೆಯನ್ನು ತಿವಿದಿ. ಅವರು ಅಡಗಿಕೊಂಡಿರುವ ಬಡವರನ್ನು ನುಂಗಲು ಬಂದವರೋ ಎಂಬಂತೆ ಬಂದಿದ್ದರಲ್ಲವೇ?


ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು.


ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು.


ನೀವು ಜನಾಂಗವನ್ನು ವೃದ್ಧಿಗೊಳಿಸಿದ್ದೀರಿ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀರಿ. ಸುಗ್ಗಿ ಕಾಲದ ಸಂತೋಷದಂತೆಯೂ, ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾಸಿಸುವ ಹಾಗೆಯೂ ನಿಮ್ಮ ಮುಂದೆ ಸಂತೋಷಿಸುವರು.


ಆ ದಿವಸದಲ್ಲಿ, ಯೆಹೋವ ದೇವರಿಂದಾದ ದೊಡ್ಡ ಕೋಲಾಹಲದಿಂದ ಜನರು ಭಯಭೀತಿಗೆ ಒಳಗಾಗುವರು. ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಒಬ್ಬರ ಮೇಲೊಬ್ಬರು ಕೈಯೆತ್ತುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು