ನ್ಯಾಯಸ್ಥಾಪಕರು 7:25 - ಕನ್ನಡ ಸಮಕಾಲಿಕ ಅನುವಾದ25 ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನನ್ನೂ, ಜೇಬನನ್ನೂ ಹಿಡಿದು, ಓರೇಬನನ್ನು ಓರೇಬೆಂಬ ಬಂಡೆಯಲ್ಲಿಯೂ, ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ, ಮಿದ್ಯಾನ್ಯರನ್ನು ಹಿಂದಟ್ಟಿ, ಓರೇಬ್, ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇದಲ್ಲದೆ ಅವರು ಮಿದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬುವರನ್ನು ಹಿಡಿದು ಓರೇಬನನ್ನು, ಓರೇಬನ ಬಂಡೆಯ ಮೇಲೆಯೂ, ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ಮಿದ್ಯಾನ್ಯರನ್ನು ಹಿಂದಟ್ಟುತ್ತಾ ಯೊರ್ದನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇದಲ್ಲದೆ ಅವರು ಮಿದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬವರನ್ನು ಹಿಡಿದು ಓರೇಬನನ್ನು ಓರೇಬನ ಬಂಡೆಯ ಮೇಲೂ ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯಲ್ಲೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ಮಿದ್ಯಾನ್ಯರನ್ನು ಹಿಂದಟ್ಟುತ್ತಾ ಜೋರ್ಡನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇದಲ್ಲದೆ ಅವರು ವಿುದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬವರನ್ನು ಹಿಡಿದು ಓರೇಬನನ್ನು ಓರೇಬನ ಬಂಡೆಯ ಮೇಲೆಯೂ ಜೇಬನನ್ನು ಜೇಬನ ದ್ರಾಕ್ಷೆಯ ಆಲೆಯಲ್ಲಿಯೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ವಿುದ್ಯಾನ್ಯರನ್ನು ಹಿಂದಟ್ಟುತ್ತಾ ಯೊರ್ದನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಎಫ್ರಾಯೀಮ್ಯರು ಮಿದ್ಯಾನ್ಯರ ಇಬ್ಬರು ನಾಯಕರನ್ನು ಹಿಡಿದುಕೊಂಡರು. ಆ ಇಬ್ಬರು ನಾಯಕರುಗಳ ಹೆಸರುಗಳು ಓರೇಬ್ ಮತ್ತು ಜೇಬ್. ಎಫ್ರಾಯೀಮ್ಯರು ಓರೇಬನನ್ನು, ಓರೇಬ್ ಬಂಡೆಯ ಮೇಲೆಯೂ ಜೇಬನನ್ನು, ಜೇಬ್ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದುಹಾಕಿದರು. ಎಫ್ರಾಯೀಮ್ಯರು ಮಿದ್ಯಾನ್ಯರನ್ನು ಬೆನ್ನಟ್ಟುತ್ತಲೇ ಹೋದರು. ಅವರು ಓರೇಬ್ ಮತ್ತು ಜೇಬನ ತಲೆಗಳನ್ನು ಕತ್ತರಿಸಿ ಅವುಗಳನ್ನು ತೆಗೆದುಕೊಂಡು ಜೋರ್ಡನ್ ನದಿಯ ಹಾಯಗಡದಲ್ಲಿದ್ದ ಗಿದ್ಯೋನನ ಬಳಿಗೆ ತೆಗೆದುಕೊಂಡು ಬಂದರು. ಅಧ್ಯಾಯವನ್ನು ನೋಡಿ |