Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:5 - ಕನ್ನಡ ಸಮಕಾಲಿಕ ಅನುವಾದ

5 ಗಿದ್ಯೋನನು ಜನರನ್ನು ಹಳ್ಳದ ಬಳಿಗೆ ಕರಕೊಂಡು ಬಂದನು. ಆಗ ಯೆಹೋವ ದೇವರು ಗಿದ್ಯೋನನಿಗೆ, “ನಾಯಿ ನೆಕ್ಕುವ ಹಾಗೆ ಜಲವನ್ನು ತನ್ನ ನಾಲಿಗೆಯಿಂದ ನೆಕ್ಕುವ ಪ್ರತಿಯೊಬ್ಬನನ್ನೂ, ಕುಡಿಯುವುದಕ್ಕೆ ಮೊಣಕಾಲೂರಿ ಬಗ್ಗುವ ಪ್ರತಿಯೊಬ್ಬನನ್ನೂ ಬೇರೆಬೇರೆಯಾಗಿ ನಿಲ್ಲಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಯೆಹೋವನು ಅವನಿಗೆ, “ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ, ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಸರ್ವೇಶ್ವರ ಅವನಿಗೆ, “ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಯೆಹೋವನು ಅವನಿಗೆ - ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲುಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ಗಿದ್ಯೋನನು ಅವರನ್ನು ನದಿಯ ಹತ್ತಿರ ಕರೆದುಕೊಂಡು ಹೋದನು. ಅಲ್ಲಿ ಯೆಹೋವನು ಗಿದ್ಯೋನನಿಗೆ, “ನೀರನ್ನು ನಾಯಿಯಂತೆ ತಮ್ಮ ನಾಲಿಗೆಯಿಂದ ನೆಕ್ಕಿ ಕುಡಿಯುವವರನ್ನು ಒಂದು ಗುಂಪನ್ನಾಗಿ ಮತ್ತು ನೆಲಕ್ಕೆ ಮೊಣಕಾಲೂರಿ ನೀರನ್ನು ಕುಡಿಯುವವರನ್ನು ಇನ್ನೊಂದು ಗುಂಪನ್ನಾಗಿ ವಿಂಗಡಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:5
4 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಗಿದ್ಯೋನನಿಗೆ, “ಜನರು ಇನ್ನೂ ತುಂಬ ಇದ್ದರೆ; ಅವರನ್ನು ಹತ್ತಿರದ ಹಳ್ಳಕ್ಕೆ ಕರೆದುಕೊಂಡು ಹೋಗು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡಿ ಆರಿಸುವೆನು. ನಿನ್ನ ಸಂಗಡ ಹೋಗುವವರಲ್ಲಿ ಯಾವನನ್ನು ಕುರಿತು ಹೇಳುವೆನೋ, ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು ನಿನ್ನ ಸಂಗಡ ಬರಬಾರದೆಂದು ಯಾವನನ್ನು ಕುರಿತು ಹೇಳುವೆನೋ, ಅವನು ಹೋಗಬಾರದು,” ಎಂದರು.


ಆಗ ನೀರನ್ನು ತಮ್ಮ ಕೈಯಿಂದ ತೆಗೆದುಕೊಂಡು, ತಮ್ಮ ಬಾಯಿಗೆ ಎತ್ತಿ ನೆಕ್ಕಿದವರು ಮುನ್ನೂರು ಜನ, ಉಳಿದ ಜನರೆಲ್ಲಾ ನೀರು ಕುಡಿಯುವುದಕ್ಕೆ ಮೊಣಕಾಲೂರಿ ಬಗ್ಗಿದರು.


ಕರ್ತ ಆಗಿರುವವರು ದಾರಿಯುದ್ದಕ್ಕೂ ಹಳ್ಳದಿಂದ ನೀರು ಕುಡಿಯುತ್ತಾ, ಜಯದ ಮಾರ್ಗದಲ್ಲಿ ತಲೆಯೆತ್ತಿ ನಡೆದುಹೋಗುವರು.


ಆಗ ಎಲೀಯನು ಅವಳಿಗೆ, “ಭಯಪಡಬೇಡ, ನೀನು ಹೇಳಿದ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿಮಾಡಿ, ನನ್ನ ಬಳಿಗೆ ತೆಗೆದುಕೊಂಡು ಬಾ. ತರುವಾಯ ನಿನಗೂ, ನಿನ್ನ ಮಗನಿಗೂ ಸಿದ್ಧಮಾಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು