Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:8 - ಕನ್ನಡ ಸಮಕಾಲಿಕ ಅನುವಾದ

8 ಆಗ ಜನರು ಆಹಾರವನ್ನೂ, ತಮ್ಮ ತುತೂರಿಗಳನ್ನೂ ತಮ್ಮ ಕೈಗಳಲ್ಲಿ ತೆಗೆದುಕೊಂಡರು. ಆದರೆ ಗಿದ್ಯೋನನು ಇಸ್ರಾಯೇಲರನ್ನೆಲ್ಲಾ ಅವರವರ ಗುಡಾರಗಳಿಗೆ ಕಳುಹಿಸಿ, ಆ ಮುನ್ನೂರು ಜನರನ್ನು ಇಟ್ಟುಕೊಂಡನು. ಮಿದ್ಯಾನ್ಯರ ದಂಡು ಅವನಿಗೆ ಕೆಳಭಾಗದ ಕಣಿವೆಯಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ, ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ಮಿದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳಿದುಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಯೇಲರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ ಕೊಂಬುಗಳನ್ನೂ ತನ್ನ ಜನರಿಗಾಗಿ ತೆಗೆದುಕೊಂಡನು. ಮಿದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳಿದುಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ವಿುದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳುಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗಿದ್ಯೋನನು ಉಳಿದ ಇಸ್ರೇಲರನ್ನು ಮನೆಗೆ ಕಳುಹಿಸಿ ಆಯ್ಕೆಗೊಂಡ ಮುನ್ನೂರು ಜನರನ್ನು ಉಳಿಸಿಕೊಂಡನು. ಆ ಮುನ್ನೂರು ಜನರು ಮನೆಗೆ ಹಿಂತಿರುಗಿ ಹೋದವರ ಆಹಾರವನ್ನೂ ತುತ್ತೂರಿಗಳನ್ನೂ ತೆಗೆದುಕೊಂಡರು. ಮಿದ್ಯಾನ್ಯರು ಗಿದ್ಯೋನನ ಪಾಳೆಯದ ಕೆಳಭಾಗದ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:8
11 ತಿಳಿವುಗಳ ಹೋಲಿಕೆ  

ಆದರೆ ಒಂದು ಕ್ಷಣದಲ್ಲೇ, ರೆಪ್ಪೆ ಬಡಿಯುವಷ್ಟರಲ್ಲಿ, ಕಡೇ ತುತೂರಿಯು ಊದಲಾಗುವುದು. ತುತೂರಿ ಧ್ವನಿಯಾಗುವಾಗ, ಸತ್ತವರು ಅಮರತ್ವಪಡೆದು ಎಬ್ಬಿಸಲಾಗುವರು, ನಾವು ರೂಪಾಂತರವಾಗುವೆವು.


ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.


ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಒಟ್ಟಾಗಿ ಕೂಡಿ, ಯೊರ್ದನ್ ಹೊಳೆ ದಾಟಿ ಬಂದು, ಇಜ್ರೆಯೇಲ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಅವನು ಅಲ್ಲಿ ಬಂದಾಗ, ಎಫ್ರಾಯೀಮನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲರು ಅವನ ಸಂಗಡ ಬೆಟ್ಟದಿಂದ ಇಳಿದರು. ಅವನು ಇವರ ಮುಂದೆ ನಡೆದರು.


ಕೂಡಲೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತೂರಿಯ ಶಬ್ದವನ್ನು ಜನರು ಕೇಳಿ ಮಹಾಧ್ವನಿಯಿಂದ ಆರ್ಭಟಿಸಿದಾಗ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು. ಹೀಗೆ ಜನರಲ್ಲಿ ಪ್ರತಿಯೊಬ್ಬನು ಮುಂದೆ ನೇರವಾಗಿ ಒಳಗೆ ನುಗ್ಗಿದರು. ಆಗ ಪಟ್ಟಣವು ಅವರಿಗೆ ಸ್ವಾಧೀನವಾಯಿತು.


ಏಳುಮಂದಿ ಯಾಜಕರು ಹೊತ್ತುಕೊಂಡಿದ್ದ ಮಂಜೂಷದ ಮುಂದೆ ಟಗರುಗಳ ಏಳು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡು ಹೋಗಬೇಕು. ಆದರೆ ಅವರು ಏಳನೆಯ ದಿವಸ ಪಟ್ಟಣವನ್ನು ಏಳು ಸಾರಿ ಸುತ್ತಿ ಬರಬೇಕು. ಯಾಜಕರು ತುತೂರಿಗಳನ್ನು ಊದಬೇಕು.


ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರವಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ಜನರನ್ನು ಎಚ್ಚರಿಸುವಂತೆ ತುತೂರಿಗಳನ್ನು ಆರ್ಭಟವಾಗಿ ಊದಬೇಕು. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನೆನಪು ಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ಬಿಡಿಸುವನು.


ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೆಯ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸಬೇಕು. ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.


“ಇಸ್ರಾಯೇಲರೊಂದಿಗೆ ಮಾತನಾಡಿ: ‘ಏಳನೆಯ ತಿಂಗಳಿನಲ್ಲಿ ಮೊದಲನೆಯ ದಿನದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥವಾದ ಸಬ್ಬತ್ ದಿನವಾಗಿರಬೇಕು. ಆ ದಿನ ಪರಿಶುದ್ಧ ಸಭೆಯ ಕೂಟವೂ ಇರಬೇಕು.


ಆಗ ಯೆಹೋವ ದೇವರು ಗಿದ್ಯೋನನಿಗೆ, “ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ, ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸುವೆನು. ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ,” ಎಂದರು.


ಆಗ ರಾತ್ರಿಯಲ್ಲಿ, ಯೆಹೋವ ದೇವರು ಅವನಿಗೆ, “ನೀನು ಎದ್ದು ಪಾಳೆಗೆ ವಿರೋಧವಾಗಿ ಇಳಿದು ಹೋಗು. ಏಕೆಂದರೆ ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು