Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:11 - ಕನ್ನಡ ಸಮಕಾಲಿಕ ಅನುವಾದ

11 ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಪೂರ್ವದಲ್ಲಿದ್ದ ಡೇರೆಗಳಲ್ಲಿ ಸುರಕ್ಷಿತವಾಗಿ ವಾಸಿಸಿರುವವರ ಮಾರ್ಗವಾಗಿ ಹೋಗಿ ಅವರು ನಿರೀಕ್ಷಿಸದ ಸಮಯದಲ್ಲಿ ಅವರ ಮೇಲೆ ದಾಳಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಗಿದ್ಯೋನನು ಕಾಡುಗೊಲ್ಲರ ಪ್ರದೇಶಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳುಕೊಂಡಿದ್ದ ಆ ಪಾಳೆಯದ ಮೇಲೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಗಿದ್ಯೋನನು ಕಾಡುಗೊಲ್ಲರ ಪ್ರದೇಶ ಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳಿದುಕೊಂಡಿದ್ದ ಆ ಪಾಳೆಯದ ಮೇಲೆ ದಾಳಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಗಿದ್ಯೋನನು ಕಾಡುಗೊಲ್ಲರ ಪ್ರದೇಶಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳುಕೊಂಡಿದ್ದ ಆ ಪಾಳೆಯದ ಮೇಲೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಗಿದ್ಯೋನ ಮತ್ತು ಅವನ ಸೈನಿಕರು ಕಾಡುಗೊಲ್ಲರ ಪ್ರದೇಶದ ಮಾರ್ಗವನ್ನು ಬಳಸಿದರು. ಆ ಮಾರ್ಗವು ನೋಬಹ, ಯೊಗ್ಬೆಹಾ ನಗರಗಳ ಪೂರ್ವಕ್ಕೆ ಇದೆ. ಗಿದ್ಯೋನನು ಕರ್ಕೋರ ನಗರಕ್ಕೆ ಬಂದು ಶತ್ರುಗಳ ಮೇಲೆ ಧಾಳಿ ಮಾಡಿದನು. ಶತ್ರುಸೈನ್ಯವು ಈ ಧಾಳಿಯನ್ನು ನಿರೀಕ್ಷಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:11
8 ತಿಳಿವುಗಳ ಹೋಲಿಕೆ  

ನೋಬಹನು ಹೋಗಿ ಕೆನಾತ್ ಎಂಬ ಪಟ್ಟಣವನ್ನೂ, ಅದರ ಗ್ರಾಮಗಳನ್ನೂ ತೆಗೆದುಕೊಂಡು, ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂಬ ಹೆಸರಿಟ್ಟನು.


ಅಟ್ರೋತ್ಷೋಫಾನ್, ಯಜ್ಜೇರ್, ಯೊಗ್ಬೆಹಾ,


ಅವರು ಮೀಕನು ಮಾಡಿಕೊಂಡವುಗಳನ್ನೂ, ಅವನಿಗಿದ್ದ ಯಾಜಕನನ್ನೂ ತೆಗೆದುಕೊಂಡು ವಿಶ್ರಾಂತಿಯಿಂದಲೂ, ಭರವಸದಿಂದಲೂ ಇದ್ದ ಲಯಿಷಿನ ಜನರ ಮೇಲೆ ಬಂದು, ಅವರನ್ನು ಖಡ್ಗದಿಂದ ಹೊಡೆದು, ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಇವನು ದಾವೀದನನ್ನು ಕರೆದುಕೊಂಡು ಅಲ್ಲಿಗೆ ಹೋದಾಗ, ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶದಲ್ಲಿಯೂ, ಯೆಹೂದ ದೇಶದಲ್ಲಿಯೂ ವ್ಯಾಪಿಸಿಕೊಂಡು, ಸಮಸ್ತ ಕೊಳ್ಳೆ ತೆಗೆದುಕೊಂಡು ಬಂದುದರಿಂದ, ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.


ಸಮುಯೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ,” ಎಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ, “ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತು,” ಎಂದುಕೊಂಡನು.


ಜೆಬಹನೂ, ಚಲ್ಮುನ್ನನೂ ತಮ್ಮ ಸೈನ್ಯದ ಹೆಚ್ಚು ಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರಷ್ಟೂ, ಖಡ್ಗ ಹಿಡಿಯತಕ್ಕ ಒಂದು ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ, ಪೂರ್ವದೇಶದ ಸಮಸ್ತ ಜನರು ಅಲ್ಲಿ ಉಳಿದರು.


ಜೆಬಹನೂ, ಚಲ್ಮುನ್ನನೂ ಓಡಿ ಹೋದದ್ದರಿಂದ, ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹನನ್ನೂ, ಚೆಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ಪಾಳೆಯನ್ನೆಲ್ಲಾ ಚದರಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು