Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:20 - ಕನ್ನಡ ಸಮಕಾಲಿಕ ಅನುವಾದ

20 ತನ್ನ ಚೊಚ್ಚಲಮಗನಾದ ಎತೆರನಿಗೆ, “ನೀನೆದ್ದು ಅವರನ್ನು ಕೊಂದುಹಾಕು,” ಎಂದನು. ಆದರೆ ಆ ಯುವಕನು ತನ್ನ ಖಡ್ಗವನ್ನು ಬಿಚ್ಚದೆ ಹೋದನು. ಏಕೆಂದರೆ ಅವನು ಇನ್ನೂ ಹುಡುಗನಾದ್ದರಿಂದ ಭಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತನ್ನ ಹಿರೀ ಮಗನಾದ ಎತೆರನಿಗೆ, “ನೀನೆದ್ದು ಇವರನ್ನು ಕೊಂದುಹಾಕು” ಅಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ತನ್ನ ಹಿರಿಯ ಮಗನಾದ ಎತೆರನಿಗೆ, “ನೀನೆದ್ದು ಇವರನ್ನು ಕೊಂದುಹಾಕು,” ಎಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದುದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತನ್ನ ಹಿರೀ ಮಗನಾದ ಎತೆರನಿಗೆ - ನೀನೆದ್ದು ಇವರನ್ನು ಕೊಂದುಹಾಕು ಅಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಗಿದ್ಯೋನನು ಎತೆರನ ಕಡೆಗೆ ತಿರುಗಿದನು. ಎತೆರನು ಗಿದ್ಯೋನನ ಹಿರಿಯ ಮಗ. ಗಿದ್ಯೋನನು ಅವನಿಗೆ, “ಈ ಅರಸರನ್ನು ಕೊಲ್ಲು” ಎಂದು ಹೇಳಿದನು. ಆದರೆ ಎತೆರನು ಇನ್ನೂ ಹುಡುಗನಾಗಿದ್ದುದರಿಂದ ಭಯಪಟ್ಟನು. ಅವನು ತನ್ನ ಕತ್ತಿಯನ್ನು ಹೊರ ತೆಗೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:20
5 ತಿಳಿವುಗಳ ಹೋಲಿಕೆ  

ಬರೆದಿರುವ ನ್ಯಾಯವಿಧಿಯು ಅವರಲ್ಲಿ ನೆರವೇರಲಿ, ದೇವರ ಭಕ್ತರೆಲ್ಲರಿಗೆ ಈ ಗೌರವವಿರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.


ಆದರೆ ಸಮುಯೇಲನು ಅವನಿಗೆ, “ನಿನ್ನ ಖಡ್ಗವು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗಿ ಮಾಡಿತೋ, ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು,” ಎಂದು ಹೇಳಿ, ಸಮುಯೇಲನು ಗಿಲ್ಗಾಲಿನಲ್ಲಿ ಯೆಹೋವ ದೇವರ ಮುಂದೆ ಅಗಾಗನಿಗೆ ಮರಣದಂಡನೆ ವಿಧಿಸಿದನು.


ಅವರನ್ನು ಯೆಹೋಶುವನ ಬಳಿ ತೆಗೆದುಕೊಂಡು ಬಂದಾಗ, ಯೆಹೋಶುವನು ಇಸ್ರಾಯೇಲರೆಲ್ಲರನ್ನು ಕರೆಸಿ ತನ್ನ ಸಂಗಡ ಬಂದ ಯುದ್ಧಭಟರಾದ ಅಧಿಕಾರಿಗಳಿಗೆ, “ನೀವು ಸಮೀಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸರ ಕೊರಳಿನ ಮೇಲೆ ಇಡಿರಿ,” ಎಂದನು. ಆಗ ಅವರು ಸಮೀಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕೊರಳಿನ ಮೇಲೆ ಇಟ್ಟರು.


ಅದಕ್ಕವನು, “ಅವರು ನನ್ನ ತಾಯಿಯ ಮಕ್ಕಳು, ನನ್ನ ಸಹೋದರರು. ಯೆಹೋವ ದೇವರ ಜೀವದ ಆಣೆ ನೀವು ಅವರನ್ನು ಬದುಕಿಸಿದ್ದರೆ ನಿಮ್ಮನ್ನು ಕೊಲ್ಲುತ್ತಿರಲಿಲ್ಲ,” ಎಂದನು.


ಆಗ ಜೆಬಹನೂ, ಚಲ್ಮುನ್ನನೂ, “ನೀನು ಎದ್ದು ನಮ್ಮ ಮೇಲೆ ಬೀಳು. ಏಕೆಂದರೆ ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವುದು,” ಎಂದರು. ಗಿದ್ಯೋನನು ಎದ್ದು ಜೆಬಹನನ್ನೂ, ಚೆಲ್ಮುನ್ನನನ್ನೂ ಕೊಂದುಹಾಕಿ, ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು