Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:26 - ಕನ್ನಡ ಸಮಕಾಲಿಕ ಅನುವಾದ

26 ಆಭರಣಗಳೂ, ಕಂಠಮಾಲೆಗಳೂ, ಮಿದ್ಯಾನರ ಅರಸರು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ, ಅವರ ಒಂಟೆಗಳ ಕೊರಳೊಳಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದುಕೊಂಡ ಬಂಗಾರದ ಓಲೆಗಳ ತೂಕವು ಇಪ್ಪತ್ತು ಕಿಲೋಗ್ರಾಂ ತೂಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ, ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಓಲೆಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ ಇವುಗಳ ಹೊರತಾಗಿ ಅವನು ಇಸ್ರಯೇಲರಿಂದ ಕೇಳಿ ತೆಗೆದುಕೊಂಡ ಮುರುವುಗಳ ಬಂಗಾರವೇ 20 ಕಿಲೋಗ್ರಾಂ ತೂಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ವಿುದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಮುರುವುಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಮುರುವುಗಳನ್ನು ಒಟ್ಟುಗೂಡಿಸಿ ತೂಕ ಹಾಕಿದಾಗ ಅವುಗಳ ತೂಕ ನಲವತ್ತಮೂರು ಪೌಂಡಿನಷ್ಟಿತ್ತು. ಗಿದ್ಯೋನನಿಗೆ ಇಸ್ರೇಲರು ಕೊಟ್ಟ ಬೇರೆ ಕಾಣಿಕೆಗಳು ಇದರಲ್ಲಿ ಸೇರಿಲ್ಲ. ಅವರು ಅರ್ಧಚಂದ್ರಾಕಾರದ ಮತ್ತು ಕಣ್ಣೀರಿನಾಕಾರದ ಆಭರಣಗಳನ್ನು ಸಹ ಕೊಟ್ಟಿದ್ದರು. ಅವರು ಅವನಿಗೆ ನೇರಳೆ ಬಣ್ಣದ ನಿಲುವಂಗಿಗಳನ್ನು ಕೊಟ್ಟಿದ್ದರು. ಈ ವಸ್ತ್ರಗಳನ್ನು ಮಿದ್ಯಾನ್ಯರ ಅರಸರು ಧರಿಸುತ್ತಿದ್ದರು. ಅವರು ಮಿದ್ಯಾನ್ಯರ ಒಂಟೆಗಳ ಸರಗಳನ್ನು ಸಹ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:26
14 ತಿಳಿವುಗಳ ಹೋಲಿಕೆ  

“ ‘ಅಯ್ಯೋ! ಅಯ್ಯೋ! ಶೋಕಭರಿತ ಮಹಾನಗರಿಯೇ, ನೀನು ನೇರಳೆ, ಕಡುಗೆಂಪು ನಾರುಮಡಿಯನ್ನು ಧರಿಸಿ, ಚಿನ್ನ, ಬೆಲೆಬಾಳುವ ಕಲ್ಲು ಮತ್ತು ಮುತ್ತುಗಳಿಂದ ಬೆಳಗುತ್ತಿದ್ದೆ.


ಅವರ ಸರಕುಗಳಾದ ಚಿನ್ನ, ಬೆಳ್ಳಿ, ಬೆಲೆಬಾಳುವ ಕಲ್ಲು ಹಾಗೂ ಮುತ್ತುಗಳು, ನಯವಾದ ನಾರುಮಡಿ, ಕಡುಗೆಂಪು ವಸ್ತ್ರ, ರೇಷ್ಮೆ, ಊದಾವರ್ಣದ ವಸ್ತ್ರ, ಅಗಿಲು ಮರ ಮತ್ತು ದಂತ ಪಾತ್ರೆಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ,


ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವರಾಗಿ ಹೊರಗೆ ಬಂದರು. ಪಿಲಾತನು ಅವರಿಗೆ, “ಇಗೋ, ಆ ಮನುಷ್ಯನು ಇವನೇ!” ಎಂದನು.


ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಯ ಮೇಲಿಟ್ಟು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ತೊಡಿಸಿ,


ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ, ಬಂಗಾರವನ್ನು ಊಫಜಿನಿಂದ ತರುತ್ತಾರೆ. ಅದು ಕೆತ್ತನೆಯವನ ಕೆಲಸವು ಮತ್ತು ಎರಕ ಹೊಯ್ಯುವವನ ಕೈಯಿಂದ ಉಂಟಾದವುಗಳೂ ಆಗಿವೆ. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ. ಅವುಗಳೆಲ್ಲಾ ಕೌಶಲ್ಯಗಾರರ ಕೈಕೆಲಸವೇ.


ಮೊರ್ದೆಕೈ ಶುಭ್ರವಾದ ನೀಲ ರಾಜವಸ್ತ್ರವನ್ನು ಧರಿಸಿ, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣವುಳ್ಳ ನಯವಾದ ನಾರಿನ ಶಾಲನ್ನು ಹೊದ್ದುಕೊಂಡು ಅರಸನ ಸಮ್ಮುಖದಿಂದ ಹೊರಟುಹೋದನು. ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.


ಆ ಸ್ತ್ರೀಯು ನೇರಳೆ ಮತ್ತು ಕಡುಗೆಂಪು ಬಣ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ, ಅಮೂಲ್ಯವಾದ ಹರಳು, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದ ವಸ್ತುಗಳಿಂದಲೂ ಮತ್ತು ತನ್ನ ಅಶುದ್ಧ ಅನೈತಿಕತೆಯಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.


ಈಜಿಪ್ಟಿನ ಕಸೂತಿಯ ನಾರುಮಡಿಯಿಂದ ನಿನ್ನ ಪಟವನ್ನು ಮಾಡಿದರು ಮತ್ತು ಅದು ನಿನ್ನ ಧ್ವಜವಾಗಿತ್ತು. ನಿಮ್ಮ ಮೇಲ್ಕಟ್ಟುಗಳು ಎಲೀಷ ಕರಾವಳಿಯಿಂದ ನೀಲಿ ಮತ್ತು ನೇರಳೆ ಬಣ್ಣದ್ದಾಗಿದ್ದವು.


ಅನಂತರ ಯೇಸು ಹೀಗೆ ಒಂದು ಸಾಮ್ಯ ಹೇಳಿದರು, “ಬಹು ಬೆಲೆಬಾಳುವ ಹಾಗೂ ನಯವಾದ ನಾರುಮಡಿ ವಸ್ತ್ರಗಳನ್ನೂ ಧರಿಸಿಕೊಂಡು ಪ್ರತಿದಿನವೂ ಭೋಗಗಳಲ್ಲಿಯೂ ಆಡಂಭರದಲ್ಲಿಯೂ ಬಾಳುತ್ತಿದ್ದ ಒಬ್ಬ ಧನವಂತನಿದ್ದನು.


ಆಗ ಜೆಬಹನೂ, ಚಲ್ಮುನ್ನನೂ, “ನೀನು ಎದ್ದು ನಮ್ಮ ಮೇಲೆ ಬೀಳು. ಏಕೆಂದರೆ ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವುದು,” ಎಂದರು. ಗಿದ್ಯೋನನು ಎದ್ದು ಜೆಬಹನನ್ನೂ, ಚೆಲ್ಮುನ್ನನನ್ನೂ ಕೊಂದುಹಾಕಿ, ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದುಕೊಂಡನು.


ಅವರು, “ನಾವು ಇಷ್ಟಪೂರ್ವಕವಾಗಿ ಕೊಡುತ್ತೇವೆ,” ಎಂದು ಹೇಳಿ, ಒಂದು ವಸ್ತ್ರವನ್ನು ಹಾಸಿ, ಅಲ್ಲಿ ಅವರವರು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ಹಾಕಿದರು.


ಆ ಬಂಗಾರದಿಂದ ಗಿದ್ಯೋನನು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲರೆಲ್ಲರೂ ಅದರ ಹಿಂದೆ ಹೋಗಿ ಪೂಜಿಸಿ ದೇವದ್ರೋಹಿಗಳಾದರು, ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.


ಆಕೆಯು ತಾನೇ ಕಂಬಳಿಗಳನ್ನು ನೇಯುತ್ತಾಳೆ. ಆಕೆಯ ಉಡುಪೋ ನಾರುಮಡಿ, ರಕ್ತಾಂಬರ.


ಆ ದಿನದಲ್ಲಿ ಯೆಹೋವ ದೇವರು ಅವರ ಕಾಲಂದಿಗೆ, ತುರುಬು ಬಲೆ, ಅರ್ಧಚಂದ್ರ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು