Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:30 - ಕನ್ನಡ ಸಮಕಾಲಿಕ ಅನುವಾದ

30 ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಂದ ಜನಿಸಿದ ಎಪ್ಪತ್ತು ಮಂದಿ ಮಕ್ಕಳು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರು ಇದ್ದರು. ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಗಿದ್ಯೋನನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಅವನಿಗೆ ಅನೇಕ ಹೆಂಡತಿಯರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:30
20 ತಿಳಿವುಗಳ ಹೋಲಿಕೆ  

ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ, ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಪುತ್ರರನ್ನು ಒಂದು ಬಂಡೆಯ ಮೇಲೆ ಕೊಂದುಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗ ಯೋತಾಮನು ಒಬ್ಬನೇ ಉಳಿದನು. ಏಕೆಂದರೆ ಅವನು ಅಡಗಿಕೊಂಡನು.


“ನೀವು ದಯಮಾಡಿ ಶೆಕೆಮಿನ ಹಿರಿಯರಿಗೆ, ‘ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವುದು ಒಳ್ಳೆಯದೋ? ಒಬ್ಬನು ಆಳುವುದು ಒಳ್ಳೆಯದೋ?’ ಎಂದು ವಿಚಾರಿಸಿರಿ. ನಾನು ನಿಮ್ಮ ಎಲುಬೂ, ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕಮಾಡಿಕೊಳ್ಳಿರಿ,” ಎಂದನು.


ಅವನಿಗೆ ರಾಜಪುತ್ರಿಯರಾದ ಏಳು ನೂರು ಮಂದಿ ಪತ್ನಿಯರೂ, ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದಾರಿ ತಪ್ಪಿಸಿದರು.


ಅರಸನು ದಾರಿತಪ್ಪಿ ಹೋಗದಂತೆ ತನಗೆ ಹೆಚ್ಚು ಜನ ಹೆಂಡತಿಯರನ್ನು ಮದುವೆ ಮಾಡಿಕೊಳ್ಳಬಾರದು. ಅವನು ತನಗಾಗಿ ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.


ನಿನ್ನನ್ನು ಸೃಷ್ಟಿಸಿದವನು ಒಬ್ಬನೇ ಅಲ್ಲವೇ? ನೀವು ದೇಹ ಮತ್ತು ಆತ್ಮದಲ್ಲಿ ಅವರಿಗೆ ಸೇರಿದವರು. ಮತ್ತು ಒಬ್ಬರೇ ದೇವರಾಗಿರುವ ದೇವರು ಏನು ಹುಡುಕುತ್ತಾರೆ? ದೈವಿಕ ಸಂತಾನ. ಆದ್ದರಿಂದ ನೀವು ಜಾಗರೂಕರಾಗಿರಿ ಮತ್ತು ನಿಮ್ಮ ಯೌವನದ ಹೆಂಡತಿಗೆ ವಿಶ್ವಾಸದ್ರೋಹ ಮಾಡಬೇಡಿ.


ಆಗ ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದರು, ಯೇಹುವು ಸಮಾರ್ಯದಲ್ಲಿರುವ ಇಜ್ರೆಯೇಲ್ ಊರಿನ ಪ್ರಧಾನರಿಗೂ ಹಿರಿಯರಿಗೂ ಅಹಾಬನ ಮಕ್ಕಳನ್ನು ಪೋಷಿಸುವವರಿಗೂ ಪತ್ರಗಳನ್ನು ಬರೆದು, ಸಮಾರ್ಯಕ್ಕೆ ಕಳುಹಿಸಿದನು. ಅವನು,


ಅವನಿಗೆ ಎಪ್ಪತ್ತು ಕತ್ತೆಗಳ ಮೇಲೆ ಏರುವ ನಾಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲಿಗೆ ಎಂಟು ವರ್ಷ ನ್ಯಾಯತೀರಿಸಿದನು.


ಅವನಿಗೆ ಮೂವತ್ತು ಮಂದಿ ಪುತ್ರರು, ಮೂವತ್ತು ಮಂದಿ ಪುತ್ರಿಯರು ಇದ್ದರು. ಪುತ್ರಿಯರನ್ನು ಹೊರಗೆ ಮದುವೆ ಮಾಡಿಕೊಟ್ಟನು; ಹೊರಗಿನಿಂದ ಮೂವತ್ತು ಮಂದಿ ಕನ್ಯೆಯರನ್ನು ತನ್ನ ಪುತ್ರರಿಗೆ ತೆಗೆದುಕೊಂಡನು. ಅವನು ಇಸ್ರಾಯೇಲಿಗೆ ಏಳು ವರ್ಷ ನ್ಯಾಯತೀರಿಸಿದನು.


ಅವನಿಗೆ ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುವ ಮೂವತ್ತು ಮಂದಿ ಪುತ್ರರು ಇದ್ದರು. ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳು ಅವರ ಅಧಿಕಾರದಲ್ಲಿದ್ದವು. ಅವುಗಳಿಗೆ ಈ ದಿನದವರೆಗೂ ಹವೋತ್ ಯಾಯೀರ್ ಎಂಬ ಹೆಸರಿದೆ.


ಯಾಕೋಬನ ವಂಶಜರು ಒಟ್ಟು ಎಪ್ಪತ್ತು ಮಂದಿ ಆದರೆ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು.


ಯಾಕೋಬನ ಪುತ್ರರ ಹೆಂಡತಿಯರಲ್ಲದೆ, ಯಾಕೋಬನ ಸಂಗಡ ಈಜಿಪ್ಟಿಗೆ ಹೋದವರು ಒಟ್ಟು ಅರವತ್ತಾರು ಮಂದಿ.


ಆಗ ನೋಹನು ಪ್ರಳಯದ ನಿಮಿತ್ತವಾಗಿ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯಲ್ಲಿ ಸೇರಿದನು.


ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.


ಶೆಖೆಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕನೆಂದು ಹೆಸರಿಟ್ಟನು.


ನೀವು ಈ ಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು, ಅವನ ಎಪ್ಪತ್ತು ಮಕ್ಕಳನ್ನು ಒಂದೇ ಬಂಡೆ ಮೇಲೆ ಕೊಂದು, ಅವನ ದಾಸಿಯ ಮಗನಾದ ಅಬೀಮೆಲೆಕನನ್ನು, ಅವನು ನಿಮ್ಮ ಸಹೋದರನಾಗಿರುವುದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು,


ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ, ಅವರ ಸಂಗಡ ಮತ್ತು ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆಲ್ಲರ ಸಂಗಡ ಮಾತನಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು