ನ್ಯಾಯಸ್ಥಾಪಕರು 8:5 - ಕನ್ನಡ ಸಮಕಾಲಿಕ ಅನುವಾದ5 ಅವನು ಸುಕ್ಕೋತನವರಿಗೆ, “ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಏಕೆಂದರೆ ಅವರು ದಣಿದಿದ್ದಾರೆ. ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ, ಚಲ್ಮುನ್ನನನ್ನೂ ಹಿಂದಟ್ಟುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನರನ್ನು ಹಿಂದಟ್ಟುತ್ತಾ ಇದ್ದೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಸ್ವಲ್ಪ ರೊಟ್ಟಿ ಕೊಡಿ. ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಗಿದ್ಯೋನನು ಸುಖೋತಿನವರಿಗೆ - ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ವಿುದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಗಿದ್ಯೋನನು ಸುಖೋತ್ ನಗರದ ಜನರಿಗೆ, “ನನ್ನ ಸೈನಿಕರಿಗೆ ತಿನ್ನಲು ಏನಾದರೂ ಕೊಡಿ; ಅವರು ಬಹಳ ದಣಿದು ಹೋಗಿದ್ದಾರೆ. ನಾವು ಮಿದ್ಯಾನ್ಯರ ಅರಸನಾದ ಜೆಬಹನನ್ನೂ ಚಲ್ಮುನ್ನನನ್ನೂ ಬೆನ್ನಟ್ಟಿಕೊಂಡು ಹೋಗುತ್ತಿದ್ದೇವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |