Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:1 - ಕನ್ನಡ ಸಮಕಾಲಿಕ ಅನುವಾದ

1 ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ, ಅವರ ಸಂಗಡ ಮತ್ತು ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆಲ್ಲರ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿಗೆ ಹೋಗಿ ತನ್ನ ಸೋದರಮಾವಂದಿರಿಗೂ, ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ‘ಯೆರುಬ್ಬಾಳ’ನ ಮಗ ಅಬೀಮೆಲೆಕನು ಶೆಕೆಮಿಗೆ ಹೋಗಿ ತನ್ನ ಸೋದರ ಮಾವಂದಿರಿಗೂ ತಾಯಿಯ ಬಂಧುಗಳೆಲ್ಲರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆವಿುಗೆ ಹೋಗಿ ತನ್ನ ಸೋದರ ಮಾವಂದಿರಿಗೂ ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಬೀಮೆಲೆಕನು ಯೆರುಬ್ಬಾಳನ (ಗಿದ್ಯೋನನ) ಮಗನು. ಅಬೀಮೆಲೆಕನು ಶೆಕೆಮಿನಲ್ಲಿದ್ದ ತನ್ನ ಸೋದರ ಮಾವಂದಿರಲ್ಲಿಗೆ ಹೋದನು. ಅವನು ತನ್ನ ಸೋದರ ಮಾವಂದಿರಿಗೂ ತನ್ನ ತಾಯಿಯ ಕುಟುಂಬದವರೆಲ್ಲರಿಗೂ ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:1
13 ತಿಳಿವುಗಳ ಹೋಲಿಕೆ  

ಶೆಖೆಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕನೆಂದು ಹೆಸರಿಟ್ಟನು.


ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.


ಇಸ್ರಾಯೇಲರು ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ, ಅವರು ಸಭೆಗೆ ಅವನನ್ನು ಕರೆಕಳುಹಿಸಿ, ಸಮಸ್ತ ಇಸ್ರಾಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.


ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲರೂ ರೆಹಬ್ಬಾಮನ ಬಳಿಗೆ ಬಂದು, ಅವನ ಸಂಗಡ ಮಾತನಾಡಿ,


ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವುದಕ್ಕೆ ಸಮಸ್ತ ಇಸ್ರಾಯೇಲರು ಶೆಕೆಮಿಗೆ ಬಂದರು.


ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲರೆಲ್ಲರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲರ ಹೃದಯಗಳನ್ನು ಗೆದ್ದುಕೊಂಡನು.


ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ತೆಗೆದುಕೊಂಡುಹೋಗಿ ಮಾನಭಂಗ ಮಾಡಿದನು.


ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸೇರಿ, ಅದರ ಮುಂದೆ ತನ್ನ ಗುಡಾರಗಳನ್ನು ಹಾಕಿದನು.


ಗಿದ್ಯೋನನೆಂಬ ಯೆರುಬ್ಬಾಳನು ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ದಯೆಯನ್ನು ಅವನ ಮನೆಗೆ ಮಾಡದೆ ಹೋದರು.


ಶೆಕೆಮಿನಿಂದಲೂ ಶೀಲೋವಿನಿಂದಲೂ ಸಮಾರ್ಯದಿಂದಲೂ ಎಂಬತ್ತು ಜನರು ಗಡ್ಡವನ್ನೂ ಕ್ಷೌರ ಮಾಡಿದವರಾಗಿಯೂ ವಸ್ತ್ರಗಳನ್ನು ಹರಿದುಕೊಂಡವರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಯೆಹೋವ ದೇವರ ಆಲಯಕ್ಕೆ ತರುವುದಕ್ಕೋಸ್ಕರ ಕಾಣಿಕೆಯನ್ನೂ, ಧೂಪವನ್ನೂ ಕೈಯಲ್ಲಿ ತೆಗೆದುಕೊಂಡು ಬಂದರು.


ಅದರಂತೆ ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ, ಎಫ್ರಾಯೀಮನ ಬೆಟ್ಟಗಳಲ್ಲಿರುವ ಶೆಕೆಮನ್ನೂ, ಯೆಹೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯತ್ ಅರ್ಬವನ್ನೂ ನೇಮಿಸಿದರು.


ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಂದ ಜನಿಸಿದ ಎಪ್ಪತ್ತು ಮಂದಿ ಮಕ್ಕಳು ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು