Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:13 - ಕನ್ನಡ ಸಮಕಾಲಿಕ ಅನುವಾದ

13 “ಆದರೆ ದ್ರಾಕ್ಷಿ ಗಿಡವು ಅವುಗಳಿಗೆ, ‘ದೇವರನ್ನೂ, ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದು ಅವುಗಳಿಗೆ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಆ ಬಳ್ಳಿ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮಾನವರಿಗೂ ಆನಂದ ತರುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದು ಅವುಗಳಿಗೆ - ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವದನ್ನು ಬಿಟ್ಟು ಮರಗಳ ಮೇಲೆ ಓಲಾಡುವದಕ್ಕೆ ಬರಬೇಕೋ ಅಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಆದರೆ ದ್ರಾಕ್ಷಾಲತೆಯು, ‘ನನ್ನ ರಸವು ಎಲ್ಲ ಜನರಿಗೂ ಮತ್ತು ರಾಜರುಗಳಿಗೂ ಸಂತೋಷವನ್ನು ಉಂಟುಮಾಡುತ್ತದೆ. ಕೇವಲ ಬೇರೆ ಮರಗಳ ಮೇಲೆ ಅಧಿಕಾರ ನಡೆಸುವುದಕ್ಕಾಗಿ ನಾನು ನನ್ನ ರಸ ಕೊಡುವುದನ್ನು ನಿಲ್ಲಿಸಬೇಕೇ?’ ಎಂದು ಕೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:13
9 ತಿಳಿವುಗಳ ಹೋಲಿಕೆ  

ವಿನೋದಕ್ಕಾಗಿ ಔತಣ ಮಾಡುತ್ತಾರೆ, ಆನಂದಕ್ಕಾಗಿ ದ್ರಾಕ್ಷಾರಸ ಕುಡಿಯುತ್ತಾರೆ; ಎಲ್ಲವನ್ನೂ ಒದಗಿಸಿಕೊಡುವುದಕ್ಕಾಗಿ ಹಣವು.


ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ.


ಇದಲ್ಲದೆ, ಪಾನದ್ರವ್ಯಕ್ಕಾಗಿ ಒಂದುವರೆ ಲೀಟರ್ ದ್ರಾಕ್ಷಾರಸವನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಯಾಗುವುದು.


ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡ ಒಂದು ಕುರಿಗೋಸ್ಕರ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು.


ನಾಶವಾಗುವವರಿಗೆ ಮದ್ಯಪಾನವಿರಲಿ. ಮನೋವ್ಯಥೆಪಡುವವರಿಗೆ ಮದ್ಯವಿರಲಿ.


ಪಾನದ ಸಮರ್ಪಣೆಯಾಗಿ ಯೆಹೋವ ದೇವರಿಗೆ ಸುವಾಸನೆಗಾಗಿ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು.


“ಮರಗಳು ದ್ರಾಕ್ಷಿ ಗಿಡಕ್ಕೆ, ‘ನೀನು ಬಂದು ನಮ್ಮನ್ನು ಆಳು,’ ಎಂದವು.


“ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ, ‘ನೀನು ಬಂದು ನಮ್ಮನ್ನು ಆಳು,’ ಎಂದವು.


ಆಕಾಶದ ಕೆಳಗೆ ಮನುಷ್ಯರು ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಹಿತ ಎಂದು ನಾನು ತಿಳಿದುಕೊಳ್ಳಲು ಬಯಸಿದೆ. ನನ್ನ ಮನಸ್ಸು ಇನ್ನೂ ಜ್ಞಾನದಿಂದಿರುವಾಗಲೇ ದ್ರಾಕ್ಷಾರಸದಿಂದ ಸಂತೋಷ ಪಡೋಣ, ಮೂರ್ಖತನವನ್ನು ಅಪ್ಪಿಕೊಳ್ಳೋಣ ಎಂದುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು