Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:15 - ಕನ್ನಡ ಸಮಕಾಲಿಕ ಅನುವಾದ

15 “ಮುಳ್ಳಿನ ಗಿಡವು ಮರಗಳಿಗೆ, ‘ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವುದು ಸತ್ಯವಾದರೆ, ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು, ಲೆಬನೋನಿನ ದೇವದಾರುಗಳು ದಹಿಸಿಬಿಡಲಿ,’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಆ ಪೊದೆ, ‘ನೀವು ನಿಜವಾದ ಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ, ಬನ್ನಿ, ಬಂದು ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ಸುಟ್ಟುಬಿಡುವುದು,’ ಎಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದು - ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ದಹಸಿಬಿಡುವದು ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಆ ಮುಳ್ಳುಪೊದೆಯು, ‘ನೀವು ನಿಜವಾಗಿಯೂ ನನ್ನನ್ನು ನಿಮ್ಮ ಅರಸನನ್ನಾಗಿ ಮಾಡಬೇಕೆಂದು ಇಚ್ಛೆಪಟ್ಟರೆ, ನೀವು ಬಂದು ನನ್ನ ನೆರಳಿನಲ್ಲಿ ಆಶ್ರಯಪಡೆಯಿರಿ; ನೀವು ಹೀಗೆ ಮಾಡಲು ಒಪ್ಪದಿದ್ದರೆ ನನ್ನಿಂದ ಬೆಂಕಿ ಹೊರಡಲಿ. ಆ ಬೆಂಕಿಯು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡಲಿ’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:15
19 ತಿಳಿವುಗಳ ಹೋಲಿಕೆ  

ಫರೋಹನಲ್ಲಿ ತಾವು ಬಲಗೊಳ್ಳುವ ಆಶ್ರಯವನ್ನು ಈಜಿಪ್ಟಿನ ನೆರಳಿನಲ್ಲಿ ಭರವಸವಿಡಬೇಕೆಂದು ನನ್ನ ಮಾತನ್ನು ಕೇಳದೆ, ಈಜಿಪ್ಟಿಗೆ ಪ್ರಯಾಣವಾಗಿ ಹೊರಟಿದ್ದಾರೆ.


ಆತನ ನೆರಳಿನಲ್ಲಿ ಜನರು ವಾಸಿಸುವರು, ಧಾನ್ಯದ ಹಾಗೆ ಜೀವಿಸುವರು, ದ್ರಾಕ್ಷಿಬಳ್ಳಿಯ ಹಾಗೆ ಫಲಪ್ರದವಾಗುವರು. ಇಸ್ರಾಯೇಲಿನ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಇರುವುದು.


ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳೂ ಹಾಗೂ ಬಾಷಾನಿನ ಎಲ್ಲಾ ಏಲಾ ಮರಗಳ ಮೇಲೆಯೂ


ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿ ಹೊರಟು ಶೆಕೆಮಿನ ಹಿರಿಯರನ್ನೂ, ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನರಿಂದಲೂ, ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ,” ಎಂದನು.


ಅದರ ಎಲೆಗಳು ಅಂದವಾಗಿದ್ದವು. ಅದರ ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರವಿತ್ತು. ಕಾಡುಮೃಗಗಳಿಗೆ ಅದರ ಕೆಳಗೆ ನೆರಳಲ್ಲಿ ಆಶ್ರಯ ದೊರಕುತ್ತಿತ್ತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು. ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ದೊರಕುತ್ತಿತ್ತು.


ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು, ಅದರಲ್ಲಿ ಫಲವನ್ನು ತಿಂದುಬಿಟ್ಟಿದೆ. ಅದರಲ್ಲಿ ಆಳುವುದಕ್ಕೆ ರಾಜದಂಡಕ್ಕಾಗಿ ತಕ್ಕ ಬಲವುಳ್ಳ ಬಳ್ಳಿಯು ಈಗ ಇಲ್ಲ.’ ಇದು ಪ್ರಲಾಪವಾಗಿದೆ. ಪ್ರಲಾಪಕ್ಕಾಗಿಯೇ ಇದೆ.”


ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು, ‘ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಉನ್ನತವಾದ ಸ್ಥಳವನ್ನೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.


ಯೆಹೋವ ದೇವರು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.


ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ, “ಲೆಬನೋನಿನಲ್ಲಿದ್ದ ಮುಳ್ಳುಗಿಡವು ಲೆಬನೋನಿನಲ್ಲಿರುವ ದೇವದಾರು ಮರಕ್ಕೆ, ‘ನನ್ನ ಮಗನಿಗೆ ಹೆಂಡತಿಯಾಗಿರಲು ನೀನು ನಿನ್ನ ಮಗಳನ್ನು ಕೊಡು,’ ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿಯಿತು.


“ಏಕೆಂದರೆ ಬೆಂಕಿ ಹೆಷ್ಬೋನಿನಿಂದಲೂ, ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು, ಮೋವಾಬಿನ ಆರ್ ಎಂಬ ಪಟ್ಟಣವನ್ನೂ, ಅರ್ನೋನ್ ಹೊಳೆಯ ಬಳಿಯಲ್ಲಿರುವ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.


ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದ್ದರೂ ಅದು ಬೆಳೆದಾಗ, ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು, ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡುತ್ತವೆ.”


ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಬಹಳ ಎತ್ತರವಾಗಿದೆ, ಅದರ ತುದಿಯು ದಟ್ಟವಾದ ಕೊಂಬೆಗಳ ನಡುವೆಯಿತ್ತು.


ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕೆಲಸ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವುವು.”


ಸೈನಿಕರೆಲ್ಲರಲ್ಲಿ ಒಬ್ಬೊಬ್ಬನು ಒಂದೊಂದು ಕೊಂಬೆಯನ್ನು ಕಡಿದು, ಅಬೀಮೆಲೆಕನ ಹಿಂದೆ ಹೋಗಿ, ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ, ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಜನರು ಸತ್ತುಹೋದರು. ಅವರು ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.


“ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ, ‘ನೀನು ಬಂದು ನಮ್ಮನ್ನು ಆಳು,’ ಎಂದವು.


“ನೀವು ಈಗ ಅಬೀಮೆಲೆಕನನ್ನು ಅರಸನಾಗಿ ಮಾಡಿದ್ದು ಸತ್ಯದಲ್ಲಿಯೂ, ಯಥಾರ್ಥದಿಂದಲೂ ಮಾಡಿರುವುದಾದರೆ ಮತ್ತು ಯೆರುಬ್ಬಾಳನಿಗೂ, ಅವನ ಮನೆಗೂ ಒಳ್ಳೆಯದನ್ನು ಮಾಡಿದ್ದರೆ,


ಯೆಹೋವ ದೇವರ ಧ್ವನಿಯು ದೇವದಾರು ವೃಕ್ಷಗಳನ್ನು ಮುರಿಯುತ್ತದೆ; ಯೆಹೋವ ದೇವರು ಲೆಬನೋನಿನ ದೇವದಾರು ವೃಕ್ಷಗಳನ್ನು ಮುರಿಯುತ್ತಾರೆ.


ಅಬೀಮೆಲೆಕನೂ, ಅವನ ಸಂಗಡ ಇದ್ದ ಸೈನಿಕರ ಗುಂಪೂ ಮುಂದಕ್ಕೆ ಓಡಿ, ಪಟ್ಟಣದ ಬಾಗಿಲಿನ ಬಳಿ ನಿಂತರು. ಮಿಕ್ಕಾದ ಎರಡು ಗುಂಪಿನ ಜನರು, ಹೊಲದಲ್ಲಿರುವವರೆಲ್ಲರ ಮೇಲೆ ಬಿದ್ದು ಅವರನ್ನು ಹತಮಾಡಿದರು.


ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು