ನ್ಯಾಯಸ್ಥಾಪಕರು 9:18 - ಕನ್ನಡ ಸಮಕಾಲಿಕ ಅನುವಾದ18 ನೀವು ಈ ಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು, ಅವನ ಎಪ್ಪತ್ತು ಮಕ್ಕಳನ್ನು ಒಂದೇ ಬಂಡೆ ಮೇಲೆ ಕೊಂದು, ಅವನ ದಾಸಿಯ ಮಗನಾದ ಅಬೀಮೆಲೆಕನನ್ನು, ಅವನು ನಿಮ್ಮ ಸಹೋದರನಾಗಿರುವುದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೆ ನೀವು ಈಗ ನನ್ನ ತಂದೆಯ ಮನೆಗೆ ವಿರೋಧವಾಗಿ ನಿಂತು, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಒಂದೇ ಬಂಡೆಯ ಮೇಲೆ ವಧಿಸಿ, ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ನಮ್ಮ ಬಂಧುವೆಂದು ಹೇಳಿ, ಶೆಕೆಮಿನ ಅರಸನನ್ನಾಗಿ ಮಾಡಿಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆದರೆ ನೀವು ಈಗ ನನ್ನ ತಂದೆಯ ಮನೆಗೆ ವಿರೋಧವಾಗಿ ನಿಂತು ಅವನ ಎಪ್ಪತ್ತು ಮಂದಿ ಮಕ್ಕಳನ್ನು ಒಂದೇ ಬಂಡೆಯ ಮೇಲೆ ವಧಿಸಿದ ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ನಿಮ್ಮ ಬಂಧುವೆಂದು ಹೇಳಿ ಶೆಕೆಮಿನ ಅರಸನನ್ನಾಗಿ ಮಾಡಿಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದರೆ ನೀವು ಈಗ ನನ್ನ ತಂದೆಯ ಮನೆಗೆ ವಿರೋಧವಾಗಿ ನಿಂತು ಅವನ ಎಪ್ಪತ್ತು ಮಂದಿ ಮಕ್ಕಳನ್ನು ಒಂದೇ ಬಂಡೆಯ ಮೇಲೆ ವಧಿಸಿ ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ನಮ್ಮ ಬಂಧುವೆಂದು ಹೇಳಿ ಶೆಕೆವಿುನ ಅರಸನನ್ನಾಗಿ ಮಾಡಿಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ನೀವು ಈಗ ನಮ್ಮ ತಂದೆಯ ಕುಟುಂಬದವರನ್ನು ವಿರೋಧಿಸುತ್ತಿದ್ದೀರಿ. ನೀವು ನಮ್ಮ ತಂದೆಯ ಎಪ್ಪತ್ತು ಮಕ್ಕಳನ್ನು ಏಕಕಾಲದಲ್ಲಿ ಕೊಲೆಮಾಡಿದ್ದೀರಿ. ನೀವು ಅಬೀಮೆಲೆಕನನ್ನು ಶೆಕೆಮಿನ ಅರಸನನ್ನಾಗಿ ಮಾಡಿದ್ದೀರಿ. ಅವನು ನಿಮ್ಮ ರಕ್ತ ಸಂಬಂಧಿ ಎಂಬ ಕಾರಣದಿಂದ ಅವನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ಅವನು ಕೇವಲ ನಮ್ಮ ತಂದೆಯ ದಾಸಿ ಪುತ್ರ. ಅಧ್ಯಾಯವನ್ನು ನೋಡಿ |