ನ್ಯಾಯಸ್ಥಾಪಕರು 9:2 - ಕನ್ನಡ ಸಮಕಾಲಿಕ ಅನುವಾದ2 “ನೀವು ದಯಮಾಡಿ ಶೆಕೆಮಿನ ಹಿರಿಯರಿಗೆ, ‘ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವುದು ಒಳ್ಳೆಯದೋ? ಒಬ್ಬನು ಆಳುವುದು ಒಳ್ಳೆಯದೋ?’ ಎಂದು ವಿಚಾರಿಸಿರಿ. ನಾನು ನಿಮ್ಮ ಎಲುಬೂ, ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕಮಾಡಿಕೊಳ್ಳಿರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀವು ದಯವಿಟ್ಟು ಶೆಕೆಮಿನ ಹಿರಿಯರನ್ನು ಮಾತನಾಡಿಸಿ, ‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳ್ವಿಕೆ ಮಾಡುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ?’ ಎಂದು ಅವರನ್ನು ಕೇಳಿ, ನಾನು ಅವರ ರಕ್ತಸಂಬಂಧಿಯಾಗಿದ್ದೇನೆ ಎಂಬುದನ್ನು ತಿಳಿಸಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನೀವು ದಯವಿಟ್ಟು ಶೆಕೆಮಿನ ಹಿರಿಯರೊಡನೆ ಮಾತಾಡಬೇಕು. ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ? ಎಂದು ಅವರನ್ನು ವಿಚಾರಿಸಬೇಕು; ನಾನು ಅವರ ರಕ್ತಸಂಬಂಧಿಯಾಗಿದ್ದೇನೆಂಬುದನ್ನು ಜ್ಞಾಪಕಪಡಿಸಬೇಕು” ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀವು ದಯವಿಟ್ಟು ಶೆಕೆವಿುನ ಹಿರಿಯರನ್ನು ಮಾತಾಡಿಸಿ - ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವದು ಒಳ್ಳೇದೋ ಅಥವಾ ಒಬ್ಬನೇ ಆಳುವದು ಮೇಲೋ ಎಂದು ಅವರನ್ನು ಕೇಳಿ ನಾನು ಅವರ ರಕ್ತ ಸಂಬಂಧಿಯಾಗಿದ್ದೇನೆಂಬದನ್ನು ಜ್ಞಾಪಕಪಡಿಸಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಶೆಕೆಮಿನ ಹಿರಿಯರಿಗೆ, “‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ನಾನೊಬ್ಬನೇ ನಿಮ್ಮನ್ನು ಆಳುವುದು ಒಳ್ಳೆಯದೋ’ ಎಂಬ ಪ್ರಶ್ನೆಯನ್ನು ಕೇಳಿದ್ದಲ್ಲದೆ ನಾನು ನಿಮ್ಮ ರಕ್ತಸಂಬಂಧಿ ಎಂಬುದನ್ನು ನೆನಪಿಡಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |